ಕೌ ಮ್ಯಾಟ್ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಪಶುಪಾಲನಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಜಾನುವಾರು ಆರೋಗ್ಯ ಉನ್ನತೀಕರಣದಡಿ 50% ಸಹಾಯಧನದಲ್ಲಿ ಪಶು ಸಂಗೋಪನಾ ಇಲಾಖೆಯಿಂದ ವಿತರಿಸಲಾಗುವ ಕೌ ಮ್ಯಾಟ್ ಸೌಲಭ್ಯಕ್ಕೆ ಅರ್ಹ ಹೈನುಗಾರರು ಹಾಗೂ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಕಾರ್ಕಳ ಮತ್ತು ಹೆಬ್ರಿ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸುವಂತೆ […]

ಮೇ 18-29, ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೈನಿಂಗ್ ಅಂಡ್ ಚೆಕ್‌ಅಪ್ ಯೋಜನೆಯಡಿ, ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಮೇ 18 ರಿಂದ 29 ರ ವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ವೇಳಾಪಟ್ಟಿ ಹೀಗಿದೆ: ಮೇ 18 ರಂದು ಹಂದಾಡಿ ಹಾಗೂ ಹನ್ನೇಹಳ್ಳಿ ಗ್ರಾಮ ಪಂಚಾಯತ್ […]

ಅಂಗನವಾಡಿ ಸಹಾಯಕಿಯರ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಉಡುಪಿ: ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯ ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಮೇ 18 ರ ಒಳಗೆ ಮೇಲ್ಕಂಡ ಕಚೇರಿಗೆ ಸಲ್ಲಿಸುವಂತೆ ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಮಾಜಿ ಸಚಿವ ಎಚ್.ಎಂ.ರೇವಣ್ಣ ಕುಟುಂಬ ಸಮೇತರಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಕರ್ನಾಟಕದ ಮಾಜಿ ಸಚಿವರಾದ ಎಚ್.ಎಂ.ರೇವಣ್ಣರವರು ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರಿಂದ ಪ್ರಸಾದ ಸ್ವೀಕರಿಸಿದರು.

ಉಡುಪಿ: ಬಸ್ ಪಲ್ಟಿ; ಹಲವು ಮಂದಿಗೆ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಪಲ್ಟಿಯಾಗಿ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಉಡುಪಿ ಕಡೆ ಬರುತ್ತಿದ್ದ ಖಾಸಗಿ ಬಸ್ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವೃತ್ತ ನಿರೀಕ್ಷಕ ಪ್ರಮೋದ್ ಹಾಗೂ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.