ಕಾನೂನು ಸೇವಾ ಕೇಂದ್ರಗಳ ಮೂಲಕ ಬುಡಕಟ್ಟು ಜನರಿಗೆ ನೆರವು: ಹೆಚ್ ಶಶಿಧರ್ ಶೆಟ್ಟಿ
ಉಡುಪಿ: ಗ್ರಾಮೀಣ ಭಾಗದ ಜನಸಾಮಾನ್ಯರಿಗೆ ಕಾನೂನಿನ ಅರಿವು ಮೂಡಿಸುವುದು ಹಾಗೂ ಅತೀ ಹಿಂದುಳಿದ ಬುಡಕಟ್ಟು ಸಮುದಾಯದ ಜನರಿಗೆ ಕಾನೂನಿನ ನೆರವನ್ನು ಒದಗಿಸುವ ಗುರಿಯನ್ನು ಕಾನೂನು ಸೇವೆಗಳ ಕೇಂದ್ರ ಹೊಂದಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್ ಶಶಿಧರ್ ಶೆಟ್ಟಿ ಹೇಳಿದರು. ಅವರು ಚೇರ್ಕಾಡಿ ಗ್ರಾಮ ಪಂಚಾಯತ್ ಆವರಣದಲ್ಲಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಜಿಲ್ಲಾ ವಕೀಲರ ಸಂಘ, ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ, […]
ಟೊಮೇಟೋ ಜ್ವರ– ಎಚ್ಚರಿಕೆ ಅಗತ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಕೇರಳ –ತಮಿಳುನಾಡು ಗಡಿಯಲ್ಲಿರುವ ವಾಳಯಾರ್ ನಲ್ಲಿ 5 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಅಧಿಕ ಮಕ್ಕಳಲ್ಲಿ ಟೊಮೇಟೋ ಜ್ವರ ಕಂಡು ಬಂದಿದ್ದು, ಉಡುಪಿ ಜಿಲ್ಲೆಯಲ್ಲಿ ಈ ರೋಗ ಲಕ್ಷಣ ಪತ್ತೆಯಾಗಿರುವುದಿಲ್ಲ. ಪಕ್ಕದ ಕೇರಳ ರಾಜ್ಯದಲ್ಲಿ ಈ ಜ್ವರವು ಪತ್ತೆಯಾದ ಕಾರಣ ಗಡಿಭಾಗದ ಜಿಲ್ಲೆಗಳು ಈ ಕುರಿತು ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಜ್ವರ ಕಾಣಿಸಿಕೊಳ್ಳುವ ಮಕ್ಕಳ ದೇಹದಲ್ಲಿ ಟೊಮೇಟೋ ಆಕಾರದ ಗುಳ್ಳೆಗಳು ಏಳುವುದರಿಂದ ಇದಕ್ಕೆ ಟೊಮೇಟೋ ಜ್ವರ ಎಂದು ಹೆಸರಿಡಲಾಗಿದ್ದು, […]
ಮೇ 14: ಕೇಂದ್ರ ಸಚಿವರ ಪ್ರವಾಸ ಕಾರ್ಯಕ್ರಮ
ಉಡುಪಿ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಮೇ 14 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 13 ರಂದು ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದು, ಮೇ 14 ರಂದು ಉಡುಪಿಯಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿರುವರು.
ಉಡುಪಿ: ಮೇ.14ರಂದು ಉನ್ನತಿ ಕೆರಿಯರ್ ನಲ್ಲಿ ಉದ್ಯೋಗಾವಕಾಶಗಳ ಕುರಿತ ವಿಚಾರ ಸಂಕಿರಣ
ಉಡುಪಿ: ಉಡುಪಿಯ ಪಿಪಿಸಿ 1ನೇ ಅಡ್ಡರಸ್ತೆಯಲ್ಲಿರುವ ಉನ್ನತಿ ಕೆರಿಯರ್ ಅಕಾಡೆಮಿ ಕ್ಯಾಂಪಸ್ ನಲ್ಲಿ ಮೇ 14.ರಂದು ಶನಿವಾರ ಬೆಳಿಗ್ಗೆ 10.30ರಿಂದ 11.45ರ ತನಕ “ಬ್ಯಾಂಕಿಂಗ್, ಫೈನಾನ್ಶಿಯಲ್ ಮತ್ತು ಇನ್ಸುರೆನ್ಸ್ ಕ್ಷೇತ್ರದ ಭವಿಷ್ಯ ಹಾಗೂ ಉದ್ಯೋಗಾವಕಾಶಗಳು” ವಿಚಾರ ಸಂಕಿರಣ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ಮಣಿಪಾಲ್ ಬಿಸಿನೆಸ್ ಸೊಲ್ಯೂಷನ್ಸ್ ನ ಆಪರೇಶನ್ಸ್ ಮ್ಯಾನೇಜರ್ ಶ್ರೀಮತಿ ಆರತಿ ರವರು ಭಾಗವಹಿಸಲಿದ್ದಾರೆ. ಈ ವಿಚಾರ ಸಂಕಿರಣದಲ್ಲಿ 18ರಿಂದ 35 ವರ್ಷದೊಳಗಿನ ಆಸಕ್ತ ಯುವಕ- ಯುವತಿಯರು https://unnathi.careers/bfsi-seminar/ ಲಿಂಕ್ ಮೂಲಕ ನೋಂದಣಿ ಮಾಡಿ ಭಾಗವಹಿಸಬಹುದಾಗಿದೆ. […]
ನಾಳೆ ಉಡುಪಿ ಜಿಲ್ಲೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೇ 14ರಂದು ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡುವರು. ಮೇ 13ರಂದು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದು, ಶನಿವಾರ ಮುಂಜಾನೆ ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಭಿಕೆ ದೇವಿಯ ದರ್ಶನ ಪಡೆಯಲಿದ್ದಾರೆ. ಹಾಗೂ ದೇಗುಲ ಭೇಟಿಯ ಬಳಿಕ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಅಂದು ರಾತ್ರಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.