ಉಡುಪಿ: ನಾಳೆ (ಮೇ.14) ರಾಜ್ಯಮಟ್ಟದ ಸಾಮರಸ್ಯದ ನಡಿಗೆ ಹಾಗೂ ಸಹಬಾಳ್ವೆ ಸಮಾವೇಶ

ಉಡುಪಿ: ಸಹಬಾಳ್ವೆ ಉಡುಪಿ ಹಾಗೂ ಕರ್ನಾಟಕದ ಸೌಹಾರ್ದ ಪರ ಸಂಘಟನೆಗಳ ಸಹಯೋಗದಲ್ಲಿ ಮೇ 14ರ ಶನಿವಾರ ಮಧ್ಯಾಹ್ನ 2ರಿಂದ ರಾಜ್ಯಮಟ್ಟದ ಸಾಮರಸ್ಯದ ನಡಿಗೆ ಹಾಗೂ ಸಹಬಾಳ್ವೆ ಸಮಾವೇಶ ನಡೆಯಲಿದೆ ಎಂದು ಸಹಬಾಳ್ವೆ ಸಮಾವೇಶದ ಸಂಚಾಲಕ ಸಮಿತಿಯ ಕೆ.ಫಣಿರಾಜ್ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮೇ 14ರ ಕಾರ್ಯಕ್ರಮ ವಿವರಗಳನ್ನು ನೀಡಿದ ಅವರು ಮಧ್ಯಾಹ್ನ 2ಕ್ಕೆ ಅಜ್ಜರಕಾಡಿನ ಹುತಾತ್ಮ ಸ್ಮಾರಕ ಚೌಕದ ಬಳಿ ಸಾಮರಸ್ಯದ ನಡಿಗೆಗೆ ಚಾಲನೆ ದೊರೆಯಲಿದೆ ಎಂದರು. ಸಮಾವೇಶದಲ್ಲಿ ಸಹಭಾಗಿಯಾಗಿರುವ ಕರ್ನಾಟಕದ ಸೌಹಾರ್ದ ಸಂಘಟನೆಗಳ ಮುಂದಾಳುಗಳಾದ […]

ಬ್ರಹ್ಮಾವರ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಉಡುಪಿ: ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದ್ದು, ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಮೇ 18 ರ ಒಳಗೆ ಮೇಲ್ಕಂಡ ಕಚೇರಿಗೆ ಸಲ್ಲಿಸುವಂತೆ ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಖಾಲಿ ಇರುವ ಪ್ರೋಜೆಕ್ಟ್ ಕೋ- ಆರ್ಡಿನೇಟರ್ (ಸ್ನಾತಕೋತ್ತರ ಪದವಿ) ಹಾಗೂ ಸಲಹೆಗಾರರು/ ಸಮಾಜ ಸೇವಕರ (ಎಂ.ಎಸ್.ಡಬ್ಲ್ಯೂ) ತಲಾ ಒಂದು ಹುದ್ದೆಗಳಿಗೆ ಗೌರವಧನ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಬನ್ನಂಜೆ, ಉಡುಪಿ ಕಚೇರಿ ದೂರವಾಣಿ ಸಂಖ್ಯೆ: 0820- 2526394 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಕುಂದಾಪುರ: ಸಹಾಯಕಿಯರ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಉಡುಪಿ: ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 13 ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದ್ದು, ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಮೇ 18 ರ ಒಳಗೆ ಮೇಲ್ಕಂಡ ಕಚೇರಿಗೆ ಸಲ್ಲಿಸುವಂತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಮೇ.19ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ

ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವು ಮೇ 19ರಂದು ಪ್ರಕಟವಾಗಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮೇ 19ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.