ರಾಜ್ಯದಲ್ಲಿ 250 ಕೋಟಿ ರೂ ವೆಚ್ಚದಲ್ಲಿ ದೀನದಯಾಳ್ ಉಪಾಧ್ಯಾಯ ಹಾಸ್ಟೆಲ್ಗಳ ನಿರ್ಮಾಣ: ಸಚಿವ ಕೋಟ
ಉಡುಪಿ: ರಾಜ್ಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯದ ಕೊರತೆ ಉಂಟಾಗದಂತೆ ರಾಜ್ಯದ ವಿವಿಧ ಭಾಗದಲ್ಲಿ 1000 ವಿದ್ಯಾರ್ಥಿಗಳ ಸಾಮರ್ಥ್ಯದ, ತಲಾ 50 ಕೋಟಿ ರೂ ವೆಚ್ಚದಲ್ಲಿ 5 ದೀನ ದಯಾಳ್ ಉಪಾಧ್ಯಾಯ ವಿದ್ಯಾರ್ಥಿನಿಲಯಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ಮಣಿಪಾಲದಲ್ಲಿ 4.24 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀಮತಿ ಇಂದಿರಾ ಗಾಂಧಿ ಮೆಟ್ರಿಕ್ ನಂತರದ ನರ್ಸಿಂಗ್ ವಿದ್ಯಾರ್ಥಿನಿ ನಿಲಯವನ್ನು ಉದ್ಘಾಟಿಸಿ ಮಾತನಾಡಿದರು. […]
ಮಣಿಪಾಲ: ಗೃಹರಕ್ಷಕ ಕಾರ್ತಿಕ್ ಅವರಿಗೆ ಚಿನ್ನದ ಪದಕ
ಉಡುಪಿ: ಜಿಲ್ಲಾ ಗೃಹರಕ್ಷಕ ದಳದ ಮಣಿಪಾಲ ಘಟಕದ ಗೃಹರಕ್ಷಕ ಕಾರ್ತಿಕ್ ಇವರು ಮೇ 2 ರಿಂದ 13 ರವರೆಗೆ ದಾವಣಗೆರೆಯ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ನಡೆದ ಗೃಹರಕ್ಷಕರ ಪುನರ್ ಮನನ ತರಬೇತಿಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿರುತ್ತಾರೆ. ಇವರನ್ನು ಜಿಲ್ಲಾ ಕಮಾಂಡೆಂಟ್ ಡಾ. ಪ್ರಶಾಂತ್ ಕುಮಾರ್ ಶೆಟ್ಟಿ ಗೃಹರಕ್ಷಕ ದಳದ ಸಂಸ್ಥೆಯ ವತಿಯಿಂದ ಅಭಿನಂದಿಸಿರುತ್ತಾರೆ.
ಮೇ.15, 16: ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ
ಉಡುಪಿ: ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಮೇ 15 ಮತ್ತು 16 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 15 ರಂದು ಸಂಜೆ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದು, ಮೇ 16 ರಂದು ಬೆಳಗ್ಗೆ 10 ಗಂಟೆಗೆ ಕೊಲ್ಲೂರಿನಲ್ಲಿ ಸರ್ಕಾರಿ ಐ.ಬಿ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆಗೆ ಬೈಂದೂರಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಸುಳ್ಯಕ್ಕೆ ತೆರಳಲಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ
ಉಡುಪಿ: ಶ್ರೀಕೃಷ್ಣಮಠಕ್ಕೆ ಭಾರತ ಸರಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶ್ರೀಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಉಡುಪಿ ತಹಶೀಲ್ಧಾರ್ ಅರ್ಚನಾ ಭಟ್, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಪೇಜಾವರ ಮಠದ ದಿವಾನರಾದ ರಘುರಾಮ ಆಚಾರ್, ವಾಸುದೇವ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.