ಬಾರಕೂರಿನ ಶ್ರೀ ಕಾಸನಾಡಿ ಸಿಟಿ ಟವರ್ ಶುಭಾರಂಭ: ಮೇ 20 ರಂದು ಉದ್ಘಾಟನಾ ಸಮಾರಂಭ
ಮೇ 20 ರ ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಶ್ರೀ ಕಾಸನಾಡಿ ಸಿಟಿ ಟವರ್ ಮೈನ್ ರೋಡ್, ಬಾರಕೂರು ಇದರ ಉದ್ಘಾಟನಾ ಸಮಾರಂಭವು ನಡೆಯಲಿದೆ. ಉದ್ಘಾಟಿಸಲಿರುವವರು: ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾನ್ಯ ಶಾಸಕರು, ಕುಂದಾಪುರ ವಿಧಾನಸಭಾ ಕ್ಷೇತ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸುವವರು: ಶ್ರೀ ಬಿ. ಶಾಂತರಾಮ ಶೆಟ್ಟಿ, ಅಧ್ಯಕ್ಷರು, ಗ್ರಾಮ ಪಂಚಾಯತ್, ಬಾರಕೂರು, ಶ್ರೀ ಎನ್. ಬಸವ ಶೆಟ್ಟಿ, ಮುಕ್ತೇಸರರು, ಕಾಸನಾಡಿ ಚಿಕ್ಕು ದೇವಸ್ಥಾನ, ನಾಗರಮಠ, ಬಾರಕೂರು ಶ್ರೀ ರಾಘವ ಶೆಟ್ಟಿ ಚಾಂಪಾಡಿ, ಅಧ್ಯಕ್ಷರು, ಹೊಸಾಳ […]
ಕಾಪು ಬ್ಲಾಕ್ ಕಾಂಗ್ರೆಸ್ (ಉತ್ತರ) ಪ್ರಚಾರ ಸಮಿತಿ ಅಧ್ಯಕ್ಷರಾಗಿ ಚರಣ್ ವಿಠ್ಠಲ್ ಕುದಿ ಆಯ್ಕೆ
ಉಡುಪಿ: ಕಾಪು ಬ್ಲಾಕ್ ಕಾಂಗ್ರೆಸ್ (ಉತ್ತರ) ಪ್ರಚಾರ ಸಮಿತಿ ಅಧ್ಯಕ್ಷರಾಗಿ ಚರಣ್ ವಿಠ್ಠಲ್ ಕುದಿ ಆಯ್ಕೆಯಾಗಿದ್ದಾರೆ. ವಿನಯ್ ಕುಮಾರ್ ಸೊರಕೆ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಚರಣ್ ವಿಠ್ಠಲ್ ಅವರನ್ನು ಆಯ್ಕೆ ಮಾಡಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಾಯಿತು. ಈ ಸಮಾರಂಭದಲ್ಲಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ , ಕಾಪು ಉತ್ತರ ವಲಯದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ ಕುಲಾಲ್ ಪಕ್ಕಾಲೂ , ಪ್ರಚಾರ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ದಿನೇಶ್ ಪುತ್ರನ್ ಹಾಗೂ […]
ಆದಿ ಉಡುಪಿ ಪರಿಸರದಲ್ಲಿ ಹುಚ್ಚುನಾಯಿ ಕಡಿತ: ಸಾರ್ವಜನಿಕರಲ್ಲಿ ಆತಂಕದ ವಾತಾವರಣ
ಉಡುಪಿ: ಹುಚ್ಚು ನಾಯಿಯೊಂದು ಹಲವು ಮಂದಿಗೆ ಕಚ್ಚಿ ಗಾಯಗೊಳಿಸಿದ ಘಟನೆ ಆದಿಉಡುಪಿ ಪರಿಸರದಲ್ಲಿ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ತೀವ್ರ ಗಾಯಗೊಂಡ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಆದಿ ಉಡುಪಿ ಪರಿಸರದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು, ಸಂದರ್ಭದ ಗಂಭೀರತೆಯನ್ನು ಅರಿತ ವಿಶು ಶೆಟ್ಟಿ ಅಂಬಲಪಾಡಿ, ಅಂಬಲಪಾಡಿ ಕೃಷ್ಣ ಹಾಗೂ ಸಂಗಡಿಗರು, ಹುಚ್ಚು ನಾಯಿಯಿಂದ ಬೇರೆ ಸಾರ್ವಜನಿಕರಿಗೆ ತೊಂದರೆ […]
ಮೇ-19 ಮಧ್ಯಾಹ್ನ 12.30ಕ್ಕೆ ಹತ್ತನೇ ತರಗತಿ ಫಲಿತಾಂಶ ಪ್ರಕಟ
ಬೆಂಗಳೂರು: ಮೇ-19 ರಂದು ಮಧ್ಯಾಹ್ನ 12.30ಕ್ಕೆ ಹತ್ತನೆ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಬುಧವಾರ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ‘ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ ಮತ್ತು ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. https://karresults.nic.in ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’. ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ […]
ಬ್ರಹ್ಮಾವರ: ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಬಂದಿದ್ದ ತಾಯಿ-ಮಗು ನಾಪತ್ತೆ
ಉಡುಪಿ: ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಬಂದಿದ್ದ ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎಂಬ ಮಹಿಳೆಯು ತನ್ನ ನಾಲ್ಕೂವರೆ ವರ್ಷದ ಮಗಳಾದ ಪುನರ್ವಿಯೊಂದಿಗೆ ಮೇ 13 ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2561044, […]