ವ್ಯಾಪಕ ಮಳೆ: ಮೇ.20ರಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೇ.20ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಇಂದು ಕೂಡ ವ್ಯಾಪಕ ಮಳೆ ಸುರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಡಿಸಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ […]
ಕಳತ್ತೂರು ಚರ್ಚ್ ರೇ.ಫಾ ಲಾರೆನ್ಸ್ ಬಿ ಡಿಸೋಜ ನಿಧನ: ಸಂತಾಪ ಸೂಚಿಸಿದ ಮಾಜಿ ಸಚಿವ ಸೊರಕೆ
ಕಾಪು : ಕಳತ್ತೂರು ಚರ್ಚಿನ ಧರ್ಮಗುರು ರೇ. ಫಾ.ಲಾರೆನ್ಸ್ ಬಿ ಡಿಸೋಜ ಅಂತ್ಯಕ್ರಿಯೆಯಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಪಾಲ್ಗೊಂಡು ಸಂತಾಪ ಸೂಚಿಸಿದರು. ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ಘಟಕದ ಸಂಯೋಜಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ, ಸಮಾಜ ಸೇವಕ ದಿವಾಕರ ಬಿ ಶೆಟ್ಟಿ ಕಳತ್ತೂರು, ಐರಿನ್ ತಾವ್ರೊ ಕಳತ್ತೂರು, ರಾಜೇಶ್ ಕುಲಾಲ್ ಕುತ್ಯಾರು ಪಾಲ್ಗೊಂಡು ಸಂತಾಪ ಸೂಚಿಸಿದರು.
ಮೂರು ದಶಕ ಹಿಂದಿನ ಬೀದಿ ಹಿಂಸಾಚಾರ ಪ್ರಕರಣ: ನವಜೋತ್ ಸಿಂಗ್ ಸಿಧುಗೆ ಒಂದು ವರ್ಷ ಜೈಲು ವಿಧಿಸಿದ ಸುಪ್ರೀಂ ಕೋರ್ಟ್
ನವ ದೆಹಲಿ: ಗುರ್ನಾಮ್ ಸಿಂಗ್ ಎಂಬ ವ್ಯಕ್ತಿ ಸಾವನ್ನಪ್ಪಿದ 1988 ರ ರಸ್ತೆ ರಂಪಾಟ ಅಪಘಾತ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿಧು ಅವರ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷಕ್ಕೆ ಹೆಚ್ಚಿಸಿದೆ. ಈ ಹಿಂದೆ ಪಂಜಾಬ್ ಹೈಕೋರ್ಟ್ 1000 ರೂಪಾಯಿ ದಂಡ ವಿಧಿಸಿ ಸಿಧು ಅವರನ್ನು ಬಿಡುಗಡೆಗೊಳಿಸಲಾಗಿತ್ತು. ಏನಿದು ಕೇಸ್? ಡಿಸೆಂಬರ್ 27, 1988 ರಂದು, ಸಿಧು ರಸ್ತೆಯಲ್ಲಿ ಗುರ್ನಾಮ್ ಸಿಂಗ್ ಎಂಬ ವ್ಯಕ್ತಿಯೊಂದಿಗೆ ಜಗಳವಾಡಿದ್ದರು. ನಂತರ ಆ ವ್ಯಕ್ತಿಯನ್ನು ಕಾರಿನಿಂದ ಹೊರಗೆಳೆದು ಥಳಿಸಿದ್ದರು. ತಲೆಗೆ […]
ಮೇ.21-23: ದೊಡ್ಡಣಗುಡ್ಡೆ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಉಡುಪಿ ಹಾಗೂ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ, ರಾಮನಗರ ಇವರ ಸಂಯುಕ್ತ ಆಶ್ರಯದಲ್ಲಿ ರೈತರಿಂದ ನೈಸರ್ಗಿಕವಾಗಿ ಮಾಗಿಸಿರುವ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳವು ಮೇ 21 ರಿಂದ 23 ರವರೆಗೆ ನಗರದ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ನಡೆಯಲಿದೆ. ಮೇಳದಲ್ಲಿ ರಾಮನಗರ ಜಿಲ್ಲೆಯ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ, ಸಕ್ಕರೆಗುತ್ತಿ ಹಾಗೂ […]
ವಿಕೋಪಗಳಿಂದ ತೊಂದರೆಗೊಳಗಾದವರು ತುರ್ತು ಪರಿಹಾರಕ್ಕಾಗಿ ಉಚಿತ ಸಹಾಯವಾಣಿಗೆ ಕರೆ ಮಾಡಿ: ಜಿಲ್ಲಾಧಿಕಾರಿ
ನೆರೆ ಹಾಗೂ ಪ್ರಾಕೃತಿಕ ವಿಕೋಪಗಳಿಂದ ತೊಂದರೆಗೊಳಗಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಉಚಿತ ಸಹಾಯವಾಣಿ ಸಂಖ್ಯೆ 1077, ಮೆಸ್ಕಾಂ ಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಸಹಾಯವಾಣಿ ಸಂಖ್ಯೆ 1912 ಮತ್ತು ರಕ್ಷಣೆಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆ 112 ಕ್ಕೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.