ಭಾರೀ ಮಳೆ: ಅಗತ್ಯವಿರುವೆಡೆ ಶಾಲೆಗಳಿಗೆ ರಜೆ ಸಾರಲು ಉಡುಪಿ ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿದ್ದರೂ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ. ಆದರೆ ಅಗತ್ಯ ಇರುವಲ್ಲಿ ಆಯಾ ಶಾಲಾ ಹಂತದಲ್ಲೇ ರಜೆ ಸಾರಬಹುದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದ್ದಾರೆ. ಕರಾವಳಿಯಲ್ಲಿ ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಧಿಕಾರಿ ಈ ಸೂಚನೆ ನೀಡಿದ್ದಾರೆ.

ತ್ರಿಶಾ ಕ್ಲಾಸಸ್: ಮೇ 20 ರಿಂದ ಸಿಎ ಫೌಂಡೇಶನ್ 21 ದಿನಗಳ ಕ್ರ್ಯಾಶ್ ಕೋರ್ಸ್

ಉಡುಪಿ: ಸಿ.ಎ, ಸಿ.ಎಸ್, ಎಂಬಿಎ, ಪದವಿ, ಪಿಯುಸಿ(ಕಾಮರ್ಸ್) ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಮೇ 20 ರಿಂದ ಸಿಎ ಫೌಂಡೇಶನ್ ಕ್ರ್ಯಾಶ್ ಕೋರ್ಸ್ ಆರಂಭವಾಗಲಿದೆ. ಸಿಎ ಫೌಂಡೇಶನ್ ಸಂಬಂಧಿಸಿದ ವಿಷಯಗಳ ಕುರಿತಾಗಿ ಉಡುಪಿ, ಮಂಗಳೂರು, ಮುಂಬಯಿಯ ಪ್ರಸಿದ್ದ ಪ್ರಾಧ್ಯಾಪಕರ ನೇತೃತ್ವದಲ್ಲಿ ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ಈ ತರಬೇತಿ ಆಯೋಜಿಸಲಾಗಿದೆ. ಪ್ರತಿದಿನ ಸಿಎ ಫೌಂಡೇಶನ್ ಗೆತರಗತಿಗಳು ಜರುಗಲಿದ್ದು, ಪ್ರಶ್ನೆ ಪತ್ರಿಕೆಗಳನ್ನು ಅತ್ಯಂತ ಸುಲಭ ವಿಧಾನದಿಂದ ಬಗೆ ಹರಿಸುವ ಕುರಿತು […]

ಗ್ರಾಹಕರ ಕಿಸೆ ಸುಡುತ್ತಿದೆ ಅಡುಗೆ ಅನಿಲ: 1000 ರೂ ಗಡಿ ದಾಟಿದ ಎಲ್‌ಪಿಜಿ ಸಿಲಿಂಡರ್ ಬೆಲೆ

ಬೆಂಗಳೂರು: ದೇಶೀಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಗಳು ಏರಿಕೆಯಾಗಿದ್ದು, ಮೇ ತಿಂಗಳಲ್ಲಿ ಇದು ಎರಡನೇ ಏರಿಕೆಯಾಗಿದೆ. ದೇಶೀಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಈ ತಿಂಗಳಲ್ಲಿ ಎರಡನೇ ಬಾರಿಗೆ ಮತ್ತೆ ಹೆಚ್ಚಿಸಲಾಗಿದೆ. ಗೃಹಬಳಕೆಯ ಎಲ್‌ಪಿಜಿ ಬೆಲೆ ಪ್ರತಿ ಸಿಲಿಂಡರ್‌ಗೆ 3.50 ರೂಪಾಯಿ ಏರಿಕೆಯಾಗಿದ್ದು, ಗುರುವಾರ ವಾಣಿಜ್ಯ ಸಿಲಿಂಡರ್‌ನ ಬೆಲೆ 8 ರೂಪಾಯಿ ಏರಿಕೆಯಾಗಿದೆ. ಈ ಹೆಚ್ಚಳದೊಂದಿಗೆ ದೇಶದಾದ್ಯಂತ ಎಲ್ಲಾ ನಗರಗಳಲ್ಲಿ ಎಲ್‌ಪಿಜಿ ಬೆಲೆ 1000 ರೂ ಗಡಿ ದಾಟಲಿದೆ.

ಕಾಪು: ರಿಯಲ್ ಎಸ್ಟೇಟ್ ಉದ್ಯಮಿ ನಾಪತ್ತೆ

ಉಡುಪಿ: ಕಾಪು ತಾಲೂಕು ಕಟಪಾಡಿ ಕೋಟೆ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಪ್ರಕಾಶ್ ರಾವ್ (46) ಎಂಬ ವ್ಯಕ್ತಿಯು ಮೇ 9 ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ದೇವಸ್ಥಾನಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ […]

ಮೇ 21- 22 ರಂದು ಶಿಕ್ಷಕರ ನೇಮಕಾತಿ ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ

ಉಡುಪಿ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮೇ 21 ಹಾಗೂ 22 ರಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯ 6 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆ ನಡೆಯುವ ದಿನಗಳಂದು ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973 ರ ಕ್ರಿಮಿನಲ್ […]