ತರಬೇತಿದಾರರ ಪ್ರಸ್ತಾವನೆ ಸಲ್ಲಿಕೆ: ಅವಧಿ ವಿಸ್ತರಣೆ
ಉಡುಪಿ: ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕೈಗಾರಿಕ ತರಬೇತಿ ಸಂಸ್ಥೆಗಳಿಂದ 2013-14 ಮತ್ತು 2013-15 ನೇ ಹಾಗೂ ಹಿಂದಿನ ಸಾಲಿನಲ್ಲಿ ತರಬೇತಿ ಪಡೆದು ಉತ್ತೀರ್ಣರಾಗಿರುವ ತರಬೇತಿದಾರರು ಇ-ಎನ್.ಟಿ.ಸಿ ಗೆ ಪ್ರಸ್ತಾವನೆ ಸಲ್ಲಿಸಲು ಮೇ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಡುಪಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕೋಟ್ಪಾ ತಂಡದಿಂದ ದಾಳಿ: ದಂಡ ವಸೂಲಿ
ಉಡುಪಿ: ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದವರು ಕೋಟ್ಪಾ ಕಾಯಿದೆಯನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕಿನ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 28 ಪ್ರಕರಣ ದಾಖಲಿಸಿ 2,100 ರೂ. ದಂಡ ವಸೂಲಿ ಮಾಡಿ, 12 ಅಂಗಡಿಗಳಿಗೆ ಫುಡ್ ಲೈಸನ್ಸ್ ಮಾಡುವಂತೆ ನೋಟೀಸು ನೀಡಿದರು. ಈ ಸಂದರ್ಭದಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. […]
ಎ.ಸಿ.ಬಿ ಯಿಂದ ಅಹವಾಲು ಸ್ವೀಕಾರ
ಉಡುಪಿ: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಮೇ 24 ಮತ್ತು 25 ರಂದು ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಬೈಂದೂರು ಪ್ರವಾಸಿ ಮಂದಿರ ಹಾಗೂ ಮ. 2.30 ರಿಂದ ಸಂಜೆ 4.30 ರ ವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷ್ಯತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು […]
ಪ್ರೋತ್ಸಾಹಧನ: ಅರ್ಜಿ ಆಹ್ವಾನ
ಉಡುಪಿ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಜಿಲ್ಲೆಯಲ್ಲಿ 2021-22 ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದ ಆದಿವಾಸಿ ಜನಾಂಗದ ಕೊರಗ ವಿದ್ಯಾರ್ಥಿಗಳಿಂದ 5000 ರೂ. ವಿಶೇಷ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574814, 2950198 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ: ವ್ಯಕ್ತಿ ನಾಪತ್ತೆ
ಉಡುಪಿ: ಲಲಿತ ಇಂಜಿನಿಯರ್ಸ್ನಲ್ಲಿ ಸೂಪರ್ವೈಸರ್ ಮತ್ತು ಎಲೆಕ್ಟ್ರಿಶಿಯನ್ ಆಗಿ ಕೆಲಸ ಮಾಡಿಕೊಂಡಿದ್ದ, ಪ್ರಶಾಂತ ದುರ್ಗ ನಾಯ್ಕ (38) ಎಂಬ ವ್ಯಕ್ತಿಯು ಮೇ 17 ರಿಂದ ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 6 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.