ಉಡುಪಿ: ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ
ಉಡುಪಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ಅತ್ಯುತ್ತಮ ಸಾಧನೆಗೈದು ಉಡುಪಿಯ ಕೀರ್ತಿ ಹೆಚ್ಚಿಸಿದ ಇಬ್ಬರು ವಿದ್ಯಾರ್ಥಿಗಳ ಮನೆಗೆ ಇಂದು ಶಾಸಕ ರಘುಪತಿ ಭಟ್ ಅವರು ಭೇಟಿ ನೀಡಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳಿಗೆ CET ಹಾಗೂ NEET ಸೇರಿದಂತೆ ಎರಡು ವರ್ಷದ ವಿದ್ಯಾಭ್ಯಾಸವನ್ನು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಉಚಿತವಾಗಿ ವ್ಯವಸ್ಥೆ ಮಾಡುವುದಾಗಿ ಶಾಸಕರು ಭರವಸೆ ನೀಡಿದರು. ಮಲ್ಪೆ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಕಲ್ಮಾಡಿಯ ಕಲ್ಲಪ್ಪ ಹಾಗೂ ಲಲಿತ ದಂಪತಿಗಳ ಮಗನಾದ ಪುನೀತ್ ನಾಯ್ಕ್ […]
ಗುರಿ ಸಾಧನೆಗೆ ಪ್ರಯತ್ನ ನಿರಂತರವಾಗಿರಲಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ವಿದ್ಯಾರ್ಥಿಗಳು ತಮ್ಮ ಕನಸಿನ ಗುರಿಯನ್ನು ಸಾಧಿಸಲು ಕಠಿಣ ಶ್ರಮ ಮತ್ತು ನಿರಂತರವಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ನಂತರ ವಿದ್ಯಾರ್ಥಿಗಳು ತಾವು ನಿಗಧಿಪಡಿಸಿಕೊಂಡಿರುವ ನಿಗಧಿತ ಗುರಿಯನ್ನು, ಯಾವುದೇ ಸಂದರ್ಭದಲ್ಲೂ ಕೈಬಿಡದೆ ಅದರ ಸಾಧನೆಗೆ ಪ್ರಯತ್ನಿಸಬೇಕು. ನಿರಂತರವಾಗಿ ಅಧ್ಯಯನ ಹಾಗೂ ಗ್ರಂಥಾಲಯಗಳಿಗೆ ಭೇಟಿ ನೀಡಿ, […]
ನೆರೆ ಪೀಡಿತವಾಗುವ ಪ್ರದೇಶಗಳಲ್ಲಿ ಮುಂಜಾಗ್ರತೆ ಕೈಗೊಳ್ಳಿ: ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್
ಉಡುಪಿ: ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದ ಹಾನಿಗೊಳಗಾಗುವ ಪ್ರದೇಶಗಳನ್ನು ಸಾಕಷ್ಟು ಮುಂಚಿತವಾಗಿ ಗುರುತಿಸಿಟ್ಟುಕೊಂಡು, ಆ ಪ್ರದೇಶದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಮತ್ತು ತುರ್ತು ಪರಿಸ್ಥಿತಿಯಲ್ಲಿ ತಕ್ಷಣವೇ ಸ್ಪಂದಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನದಿಗಳ ನೀರು ಸಮುದ್ರ ಸೇರುವ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ […]
ಕುಂಭಾಶಿ: ಕೆರೆ ಸ್ವಚ್ಚತಾ ಹಾಗೂ ಮರು ನಿರ್ಮಾಣ ಕಾರ್ಯ ಸಂಪೂರ್ಣ
ಉಡುಪಿಯ ವೆಂಟನಾ ಫೌಂಡೇಶನ್ ನ ನೇತೃತ್ವದಲ್ಲಿ ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರವಡಿ ರಸ್ತೆಯ ಶ್ರೀ ವಿಷ್ಣು ಮೂರ್ತಿ ದೇವಾಸ್ಥಾನ ಸಮೀಪ ಕೊಯ್ಯಾರಿ ಕೆರೆಯನ್ನು ಸ್ಚಚ್ಚಗೊಳಿಸುವ ಕಾರ್ಯ ಮುಕ್ತಾಯಗೊಂಡಿದ್ದು, ಗ್ರಾಮ ಪಂಚಾಯತಿಗೆ ಹಸ್ತಾಂತರ ಮಾಡುವ ಕಾರ್ಯ ಮೇ 17 ರಂದು ನಡೆಯಿತು. ವೆಂಟನಾ ಫೌಂಡೇಶನ್ ಅಧ್ಯಕ್ಷ ಹಾಗೂ ಉಡುಪಿಯ ಮಾಹಿತಿ ತಂತ್ರಜ್ಞಾನದ ದಿಗ್ಗಜ ಸಂಸ್ಥೆ 99 ಗೇಮ್ಸ್ ಆನ್ ಲೈನ್ ಪ್ರೈ.ಲಿ. ನ. ವ್ಯವಸ್ಥಾಪಕ ನಿರ್ದೇಶಕ ರೋಹಿತ್ ಭಟ್ ಮೇ 8 ರಂದು ಕೆರೆ ಸ್ವಚ್ಚತಾ ಕಾರ್ಯಕ್ಕೆ […]
ಹಿರೇಬೆಟ್ಟುವಿನಲ್ಲಿ ದೈವಸ್ಥಾನದ ಸೊತ್ತು ಕಳವು; ಆರೋಪಿ ಸೆರೆ
ಉಡುಪಿ: ಹಿರೇಬೆಟ್ಟು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಣಿಪಾಲ ಪೊಲೀಸರು ಮೇ 19ರಂದು ಬಂಧಿಸಿದ್ದಾರೆ. ಹಿರೇಬೆಟ್ಟುವಿನ 49 ವರ್ಷದ ಭಾಸ್ಕರ್ ಶೆಟ್ಟಿ ಬಂಧಿತ ಆರೋಪಿ. 10 ದಿನಗಳ ಹಿಂದೆ ಹಿರೇಬೆಟ್ಟುವಿನ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ ಆರೋಪಿ, ಆರತಿ, ಪಂಚಲೋಹದ ಮುಖ, ಹಿತ್ತಾಳೆ ಸಾಮಾಗ್ರಿ, ಗಂಟೆ ಸೇರಿದಂತೆ ಸುಮಾರು 50 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದನು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿ ಯನ್ನು […]