ಬಾರಕೂರಿನಲ್ಲಿ ಹೊಸದಾಗಿ ಪ್ರಾರಂಭಗೊಂಡ ಶ್ರೀ ಕಾಸನಾಡಿ ಸಿಟಿ ಟವರ್ ಉದ್ಘಾಟನಾ ಸಮಾರಂಭ
ಬಾರಕೂರು: ಮೇ 20 ಶುಕ್ರವಾರದಂದು ಬೆಳಿಗ್ಗೆ 11.30 ಕ್ಕೆ ಬಾರಕೂರಿನ ಮುಖ್ಯ ರಸ್ತೆಯಲ್ಲಿ ಹೊಸದಾಗಿ ಪ್ರಾರಂಭಗೊಂಡ ಶ್ರೀ ಕಾಸನಾಡಿ ಸಿಟಿ ಟವರ್ ಕಟ್ಟಡದ ಉದ್ಘಾಟನಾ ಸಮಾರಂಭವು ನೆರವೇರಿತು.ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಿ. ಶಾಂತರಾಮ ಶೆಟ್ಟಿ, ಅಧ್ಯಕ್ಷರು, ಗ್ರಾಮ ಪಂಚಾಯತ್, ಬಾರಕೂರು, ಎನ್. ಬಸವ ಶೆಟ್ಟಿ, ಮುಕ್ತೇಸರರು, ಕಾಸನಾಡಿ ಚಿಕ್ಕು ದೇವಸ್ಥಾನ, ನಾಗರಮಠ, ಬಾರಕೂರು, ರಾಘವಾ ಶೆಟ್ಟಿ ಚಾಂಪಾಡಿ, ಅಧ್ಯಕ್ಷರು, ಹೊಸಾಳ ಗರಡಿ ಜೀರ್ಣೋದ್ಧಾರ ಸಮಿತಿ, ಬಾರಕೂರು, […]
ಮತ್ತೊಮ್ಮೆ ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್ಸೆನ್ ಅನ್ನು ಚಕಿತಗೊಳಿಸಿದ ಭಾರತೀಯ ಗ್ರಾಂಡ್ ಮಾಸ್ಟರ್ ಪ್ರಜ್ಞಾನಂದ!
ದೆಹಲಿ: 16 ವರ್ಷದ ಭಾರತೀಯ ಗ್ರ್ಯಾಂಡ್ಮಾಸ್ಟರ್ ರಮೇಶ್ಬಾಬು ಪ್ರಜ್ಞಾನಂದ ಮೂರು ತಿಂಗಳ ಅಂತರದಲ್ಲಿ ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್ಸೆನ್ ಅವರನ್ನು ಶುಕ್ರವಾರ ಚೆಸ್ಸಬಲ್ ಮಾಸ್ಟರ್ಸ್ ಆನ್ಲೈನ್ ರಾಪಿಡ್ ಚೆಸ್ ಪಂದ್ಯಾವಳಿಯಲ್ಲಿ ಮತ್ತೊಮ್ಮೆ ಸೋಲಿಸುವ ಮೂಲಕ ಚಕಿತಗೊಳಿಸಿದರು. ಶುಕ್ರವಾರ ನಡೆದ ಚೆಸ್ಸಬಲ್ ಮಾಸ್ಟರ್ಸ್ ಆನ್ಲೈನ್ ಕ್ಷಿಪ್ರ ಚೆಸ್ ಪಂದ್ಯಾವಳಿಯ 5 ನೇ ಸುತ್ತಿನಲ್ಲಿ ಇಬ್ಬರು ಆಟಗಾರರು ಮುಖಾಮುಖಿಯಾದರು. ಕಾರ್ಲ್ಸೆನ್ನಿಂದ ಒಂದು-ಚಲನೆಯ ಪ್ರಮಾದದ ನಂತರ ಭಾರತದ ಪೋರ ಆತನನ್ನು ನಾಕ್ ಔಟ್ ಸ್ಟೇಜ್ ನಲ್ಲಿ ಸೋಲಿಸಿದರು. ವಿಶ್ವ ಚಾಂಪಿಯನ್ ಮ್ಯಾಗ್ನಸ್ […]
ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಸದಸ್ಯರ ಆಯ್ಕೆ: ಅರ್ಜಿ ಆಹ್ವಾನ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವತಿಯಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಠಿಸಲು ಅನುಕೂಲವಾಗುವಂತೆ ಹಾಗೂ ಬಾಲವಿಕಾಸ ಅಕಾಡೆಮಿಯ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ಸಾಹಿತ್ಯ, ಯಕ್ಷಗಾನ, ಸಾಂಸ್ಕೃತಿಕ, ಜಾನಪದ, ರಂಗಭೂಮಿ ಅಥವಾ ರಂಗಾಯಣ, ಶಾಸ್ತ್ರೀಯ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಸ್ವ-ವಿವರವುಳ್ಳ […]
ಬೈಂದೂರು: ಬಟ್ಟೆ ತರಲು ಹೋದ ಯುವತಿ ನಾಪತ್ತೆ
ಉಡುಪಿ: ಬೈಂದೂರು ತಾಲೂಕು ಮುದೂರು ಗ್ರಾಮದ ಹಾರ್ಕಿ ನಿವಾಸಿ ರೇಣುಕಾ (24) ಎಂಬ ಯುವತಿಯು ಮೇ 17 ರಂದು ಸಂಜೆ 4 ಗಂಟೆ ಸುಮಾರಿಗೆ ಮುದೂರು ಪೇಟೆಯಿಂದ ಟೈಲರಿಂಗ್ ಬಟ್ಟೆ ತರಲು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಉರುಟು ಮುಖ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಈಕೆ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ […]
ಜೂನ್ 1 ರಿಂದ ಜುಲೈ 31 ರ ವರೆಗೆ ಜಿಲ್ಲೆಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
ಉಡುಪಿ: ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿರುತ್ತದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ […]