ಉನ್ನತಿ ಕೆರಿಯರ್ ಅಕಾಡೆಮಿ: ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಕೆ ಎಸ್ ಡಿ ಸಿ ಕೋರ್ಸ್ ಸರ್ಟಿಫಿಕೇಟ್ ವಿತರಣೆ
ಉಡುಪಿ: ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ ಎಸ್ ಡಿ ಸಿ)ದ ತರಬೇತು ಪಾಲುದಾರ ಸಂಸ್ಥೆಯಾಗಿರುವ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯಲ್ಲಿ ಐಟಿ/ಐಟಿಇಎಸ್ ಕ್ಷೇತ್ರದ ಜೂನಿಯರ್ ಸಾಫ್ಟ್ ವೇರ್ ಡೆವಲಪರ್ ಕೋರ್ಸ್ ಮತ್ತು ಬಿ ಎಫ್ ಎಸ್ ಐ ಕ್ಷೇತ್ರದ ಸ್ಮಾಲ್ ಅಂಡ್ ಮೀಡಿಯಂ ಸ್ಕೇಲ್ ಎಂಟರ್ಪ್ರೈಸ್ ಆಫೀಸರ್ ಕೋರ್ಸ್ ಮುಗಿಸಿದ ವಿದ್ಯಾರ್ಥಿಗಳಿಗೆ ಮೇ 21 ಶನಿವಾರದಂದು ಸರ್ಟಿಫಿಕೇಟ್ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ.ಟಿಎಂಎ ಪೈ ಪಾಲಿಟೆಕ್ನಿಕ್ […]
ಕಾಪು ಸಾರ್ವಜನಿಕ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ
ಕಾಪು : ಕರ್ನಾಟಕ ಸರಕಾರದ ಅಧೀನದಲ್ಲಿರುವ ಕಾಪು ಸಾರ್ವಜನಿಕ ಗ್ರಂಥಾಲಯ ಮತ್ತು ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ಇದರ ಸಾರ್ವಜನಿಕ ಗ್ರಂಥಾಲಯಕ್ಕೆ ಕಥೆ, ಕಾದಂಬರಿ, ಆರೋಗ್ಯಕ್ಕೆ ಸಂಬಂಧಪಟ್ಟ ಪುಸ್ತಕಗಳನ್ನು ಹಾಗೂ ಧಾರ್ಮಿಕ ವಿಚಾರವಾದ ದೆಂದೂರ ಪಂಜುರ್ಲಿ ಪುಸ್ತಕವನ್ನು ಕೊಡುಗೆಯಾಗಿ ನೀಡಲಾಯಿತು. ಸಮಾಜ ಸೇವೆಯಲ್ಲಿ ರಾಷ್ಟ್ರೀಯ ಪುರಸ್ಕೃತರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಮತ್ತು ದಿವಾಕರ ಡಿ ಶೆಟ್ಟಿ ಕಳತ್ತೂರು ಇವರ ನೇತೃತ್ವದಲ್ಲಿ ಕಾಪುವಿನ ಸಾರ್ವಜನಿಕ ಗ್ರಂಥಾಲಯದ ಮೇಲ್ವಿಚಾರಕರಾದ ಪೂರ್ಣಿಮಾ ಇವರಿಗೆ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜ […]
ಭಾರತ ಉತ್ತಮ ಸ್ಥಿತಿಯಲ್ಲಿಲ್ಲ, ಪ್ರಧಾನಿ ನರೇಂದ್ರ ಮೋದಿ ಮಾತು ಕೇಳುತ್ತಿಲ್ಲ: ರಾಹುಲ್ ಗಾಂಧಿ
ಲಂಡನ್: ಮೇ 20 ಶುಕ್ರವಾರದಂದು ಲಂಡನ್ನಲ್ಲಿ ನಡೆದ “ಐಡಿಯಾಸ್ ಫಾರ್ ಇಂಡಿಯಾ” ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರದ ಭಾರತೀಯ ಜನತಾ ಪಕ್ಷ ಸರ್ಕಾರವನ್ನು ಟೀಕಿಸಿದ್ದಾರೆ. “ಭಾರತವು ಉತ್ತಮ ಸ್ಥಿತಿಯಲ್ಲಿಲ್ಲ” ಮತ್ತು ಪ್ರಧಾನಿ ನರೇಂದ್ರ ಮೋದಿ ” ಮಾತು ಕೇಳುವುದಿಲ್ಲ” ಎಂದು ಹೇಳಿರುವ ಅವರು ಭಾರತದ ಸಂವಿಧಾನದ ಮೇಲೆ ದಾಳಿ ನಡೆಯುತ್ತಿದೆ ಮತ್ತು ಈ ದಾಳಿಯ ಪರಿಣಾಮವಾಗಿ ಭಾರತದ ರಾಜ್ಯಗಳು “ಸರ್ಕಾರದೊಂದಿಗೆ ಇನ್ನು ಮುಂದೆ ಮಾತುಕತೆ ನಡೆಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. The Prime […]
ಬಘೀರಾ, ಸಲಾರ್, ಎನ್ಟಿಆರ್31, ಕೆಜಿಎಫ್ 3….. ಅಬ್ಬಬ್ಬಾ… ಕೆ.ಜಿ.ಎಫ್ ತಂಡದಿಂದ ಸಾಲು ಸಾಲು ಸಿನಿಮಾ… ಸಿನಿ ಪ್ರೇಮಿಗಳಿಗೆ ಹಬ್ಬವೋ ಹಬ್ಬ….
ಬೆಂಗಳೂರು: ಕೆಜಿಎಫ್ ನಿರ್ಮಾಪಕರ ತಂಡದಿಂದ ಶ್ರೀಮುರಳಿ ಅಭಿನಯದ ಮತ್ತೊಂದು ಅದ್ದೂರಿ ಚಿತ್ರ “ಬಘೀರ”ಗೆ ಚಾಲನೆ ದೊರೆತಿದೆ. ಇದರ ಬೆನ್ನಲ್ಲೇ ಕೆಜಿಎಫ್ ಚಾಪ್ಟರ್ 2ರ ಉತ್ತರಭಾಗ ಕೆಜಿಎಫ್ 3 ತೆರೆ ಮೇಲೆ ಮೂಡಿ ಬರುವ ಬಗ್ಗೆ ಮಾಹಿತಿಗಳು ಹರಿದಾಡುತ್ತಿವೆ. ಕೆಜಿಎಫ್ ಸಿನಿಮಾಗಳಿಗೆ ನಿರ್ದೇಶಕರಾಗಿರುವ ಪ್ರಶಾಂತ್ ನೀಲ್ ತಮ್ಮ ಮುಂದಿನ ಪ್ರಾಜೆಕ್ಟ್, ಪ್ರಭಾಸ್ ನಾಯಕ ನಟನಾಗಿರುವ ಸಲಾರ್ ಚಿತ್ರದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದಾದ ಬಳಿಕ ಕೆ.ಜಿ.ಎಫ್- 3 ಚಿತ್ರೀಕರಣ ಪ್ರಾರಂಭವಾಗಲಿದೆ ಎನ್ನಲಾಗಿದೆ. ಇದರ ಜೊತೆಗೆ ಶುಕ್ರವಾರ, ಮೇ 20 ರಂದು […]
ಮಹಿಳೆಯರಿಗೆ ಸಿಹಿ ಸುದ್ದಿ: ಹೊರಗುತ್ತಿಗೆ ಸಿಬ್ಬಂದಿಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ಕೊಡುವ ಮಹತ್ವದ ಕ್ರಮವಾಗಿ, ಹೊರಗುತ್ತಿಗೆ ಸಿಬ್ಬಂದಿಯಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರವು ಶುಕ್ರವಾರ ಎಲ್ಲಾ ಇಲಾಖೆಗಳಿಗೆ ನಿರ್ದೇಶನ ನೀಡಿದೆ. ಸರ್ಕಾರವು ನಿಯಮಿತವಾಗಿ ಚಾಲಕರು, ಡೇಟಾ ಎಂಟ್ರಿ ಆಪರೇಟರ್ಗಳು, ಹೌಸ್ಕೀಪಿಂಗ್ ಸಿಬ್ಬಂದಿ ಮತ್ತು ಗ್ರೂಪ್ ‘ಡಿ’ ಕಾರ್ಮಿಕರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುತ್ತದೆ. ಈ ಎಲ್ಲಾ ಕೆಲಸಗಳನ್ನು ನಿಭಾಯಿಸಲು ಮಹಿಳೆಯರು ಸಮಾನವಾಗಿ ಸಮರ್ಥರಾಗಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಶುಕ್ರವಾರ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಸೂಚಿಸಿದಂತೆ […]