ಯುರೋಪ್ ಅಮೇರಿಕಾಗಳಲ್ಲಿ ಹೆಚ್ಚುತ್ತಿರುವ ಮಂಕಿ ಪಾಕ್ಸ್ ಪ್ರಕರಣ: ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ ಎಂದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಬೆಲ್ಜಿಯಂ, ಫ್ರಾನ್ಸ್, ಜರ್ಮನಿ, ಇಟಲಿ, ನೆದರ್‌ಲ್ಯಾಂಡ್ಸ್, ಪೋರ್ಚುಗಲ್, ಸ್ಪೇನ್, ಸ್ವೀಡನ್, ಯುನೈಟೆಡ್ ಸ್ಟೇಟ್ಸ್, ಕೆನಡಾ, ಆಸ್ಟ್ರೇಲಿಯಾ ಮತ್ತು ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ ಹಲವಾರು ದೇಶಗಳಲ್ಲಿ ಮಂಗನ ಸಿಡುಬು ಕಾಯಿಲೆಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಕೋವಿಡ್-19 ರ ಸಂಕಟ ಇನ್ನೂ ಮುಗಿದಿಲ್ಲದಿರುವ ಈ ವೇಳೆಯಲ್ಲಿ ಜಗತ್ತು ಮತ್ತೊಂದು ಸಾಂಕ್ರಾಮಿಕಕ್ಕೆ ಬಲಿಯಾಗುತ್ತಿದೆಯೆ ಎನ್ನುವ ಅನುಮಾನ ಹಲವರನ್ನು ಕಾಡುತ್ತಿದೆ. ಈ ಮಧ್ಯೆ ಈ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಿ, ಮಂಕಿಪಾಕ್ಸ್ ಪೀಡಿತ ದೇಶಗಳಿಗೆ ಪ್ರಯಾಣದ ಇತಿಹಾಸ ಹೊಂದಿರುವ ಯಾವುದೇ ಅಸ್ವಸ್ಥ ಪ್ರಯಾಣಿಕರನ್ನು […]
ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಲಲಿತ ಇಂಜಿನಿಯರ್ಸ್ನಲ್ಲಿ ಸೂಪರ್‌ವೈಸರ್ ಮತ್ತು ಎಲೆಕ್ಟ್ರಿಶಿಯನ್ ಆಗಿ ಕೆಲಸ ಮಾಡಿಕೊಂಡಿದ್ದ, ಪ್ರಶಾಂತ ದುರ್ಗ ನಾಯ್ಕ (38) ಎಂಬ ವ್ಯಕ್ತಿಯು ಮೇ 17 ರಿಂದ ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 6 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಮೇ 23: ಉದ್ಯೋಗಾಕಾಂಕ್ಷಿಗಳಿಗೆ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ನೇರ ಸಂದರ್ಶನಾವಕಾಶ

ಉಡುಪಿ: ರಿಲಯನ್ಸ್ ನಿಪೊನ್ ಲೈಫ್ ಇನ್ಸುರೆಸ್ಸ್ ಮತ್ತು ಸೊಯ್ಯೋದಯ ಎ ಬ್ಯಾಂಕ್ ಆಫ್ ಸ್ಮೈಲ್ ಕಂಪನಿ ವತಿಯಿಂದ ಮೇ 23 ರಂದು ಬೆಳಗ್ಗೆ 09:45 ರಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಎಮ್.ಎಸ್ಸಿ, ಬಿ.ಇ ಇಂಜಿನಿಯರಿಂಗ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ […]