ಮಂದಾರ್ತಿ: ಧಗಧಗಿಸುತ್ತಿದ್ದ ಕಾರಿನಲ್ಲಿದ್ದದ್ದು ಬೆಂಗಳೂರಿನ ಯುವ ಜೋಡಿ; ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು?

ಮಂದಾರ್ತಿ: ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಬೆಳ್ಳಂಬೆಳಗ್ಗೆ ಉರಿಯುತ್ತಿದ್ದ ಕಾರಿನಲ್ಲಿ ಜೋಡಿ ಶವಗಳು ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಕೃತ್ಯ ಎಂದು ತನಿಖೆಯಿಂದ ತಿಳಿದು ಬಂದಿದೆ. ಯಶವಂತ್ (23) ಮತ್ತು ಜ್ಯೋತಿ (23) ಆತ್ಮಹತ್ಯೆ ಮಾಡಿಕೊಂಡಿರುವ ಯುವ ಜೋಡಿ. ಇವರು ಬೆಂಗಳೂರಿನ ಆರ್.ಟಿ.ನಗರದವರು ಎನ್ನಲಾಗಿದೆ. ಮುಂಜಾನೆ ಸುಮಾರು 3 ಗಂಟೆ ಸುಮಾರಿಗೆ ಸುಡುತ್ತಿದ್ದ ಕಾರನ್ನು ಕಂಡು ಸ್ಥಳೀಯರು ಬೆಂಕಿ ನಂದಿಸಿದಾಗ ಕಾರಿನೊಳಗೆ ಯುವಕ ಮತ್ತು ಯುವತಿಯ ಶವ ಪತ್ತೆಯಾಗಿದೆ. ಮೃತರು ನಿನ್ನೆ (ಮೇ 21) ಮಂಗಳೂರಿಗೆ ಬಂದು ಹುಸೇನ್ ಎಂಬವರಿಂದ […]

ರಸಗೊಬ್ಬರ ಬೆಲೆ ಏರಿಕೆ: ರೈತ ರಕ್ಷಣೆಗಾಗಿ ರೂ 3.4 ಲಕ್ಷ ಕೋಟಿ ಸಹಾಯಧನ; ಕೇಂದ್ರ ಸರ್ಕಾರದ ವಾಗ್ದಾನ

ನವದೆಹಲಿ: ಜಾಗತಿಕವಾಗಿ ಏರುತ್ತಿರುವ ರಸಗೊಬ್ಬರಗಳ ಬೆಲೆಯಿಂದ ರೈತರನ್ನು ರಕ್ಷಿಸಲು 2022-23 ರ ಕೇಂದ್ರ ಬಜೆಟ್‌ನಲ್ಲಿ ಈಗಾಗಲೇ ಮಂಜೂರು ಮಾಡಲಾದ 1.05 ಲಕ್ಷ ಕೋಟಿ ರೂಪಾಯಿಗಳ ಜೊತೆಗೆ ಹೆಚ್ಚುವರಿಯಾಗಿ 1.10 ಲಕ್ಷ ಕೋಟಿ ರೂಪಾಯಿಗಳನ್ನು ರೈತರಿಗೆ ನೀಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕ ಕಡಿತವನ್ನು ಘೋಷಿಸಿ, “ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್‌ಗೆ 6 […]

ಅಂತರ್ ಕಾಲೇಜು ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಕೂಟ: ನಿಟ್ಟೆ ರುಕ್ಮಿಣೀ ಅಡ್ಯಂತಾಯ ಕಾಲೇಜಿಗೆ ಪ್ರಥಮ ಸ್ಥಾನ

ನಿಟ್ಟೆ- ಮೇ.17 ರಂದು ನಿಟ್ಟೆ ರುಕ್ಮಿಣೀ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ಆಶ್ರಯದಲ್ಲಿ ಜರುಗಿದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಆಹ್ವಾನಿತ ಅಂತರ್ ಕಾಲೇಜು ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಅತಿಥೇಯ ನಿಟ್ಟೆ ರುಕ್ಮಿಣೀ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಿಜೇತ ತಂಡದ ನಾಯಕ ರೋಹಿತ್ ಉತ್ತಮ ಆಲ್ರೌಂಡರ್ ಹಾಗೂ ಸಾತ್ವಿಕ್ ಉತ್ತಮ ಅಟ್ಯಾಕರ್ ವೈಯಕ್ತಿಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡರು. ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ […]

ಕರಾವಳಿ ನಿಯಂತ್ರಣ ವಲಯ ಪ್ರದೇಶ: ಮರಳು ದಿಬ್ಬಗಳ ತೆರವು ಹಾಗೂ ಸಾಗಾಣಿಕೆ ಸಂಪೂರ್ಣ ನಿಷೇಧ

ಉಡುಪಿ: ಉಡುಪಿ ಜಿಲ್ಲಾ ಕರಾವಳಿ ನಿಯಂತ್ರಣ ವಲಯದ ನದಿ ಪಾತ್ರಗಳಲ್ಲಿನ ಮರಳು ದಿಬ್ಬ ತೆರವುಗೊಳಿಸುವ ಸಂಬಂಧ ಒಟ್ಟು 161 ತಾತ್ಕಾಲಿಕ ಮರಳು ಪರವಾನಿಗೆಯನ್ನು ವಿತರಿಸಲಾಗಿರುತ್ತದೆ. ಅವುಗಳಲ್ಲಿ ಕುಂದಾಪುರ ತಾಲ್ಲೂಕು ವ್ಯಾಪ್ತಿಯ 04 ಮರಳು ದಿಬ್ಬಗಳನ್ನು ತೆರವುಗೊಳಿಸಲು ವಿತರಿಸಲಾದ ಒಟ್ಟು 39 ತಾತ್ಕಾಲಿಕ ಮರಳು ಪರವಾನಿಗೆಗಳಿಗೆ ಸಂಬಂಧಿಸಿದಂತೆ KSCZMA ಯಿಂದ ನೀಡಲಾದ ನಿರಾಕ್ಷೇಪಣಾ ಪತ್ರದ ಅವಧಿಯು ದಿನಾಂಕ: 29.03.2022 ರಂದು ಮುಕ್ತಾಯಗೊಂಡಿದ್ದು, ಸದರಿ ಪರವಾನಿಗೆಗಳನ್ನು ಈಗಾಗಲೇ ತಡೆಹಿಡಿಯಲಾಗಿರುತ್ತದೆ ಹಾಗೂ ಸ್ಥಗಿತಗೊಳಿಸಲಾಗಿರುತ್ತದೆ. ಉಡುಪಿ ಮತ್ತು ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯ ಒಟ್ಟು […]

ಬಗೆ ಬಗೆ ಮಾವು, ರುಚಿ ರುಚಿ ಮಾವು: ದೊಡ್ಡಣ್ಣಗುಡ್ಡೆ ಮಾವು ಮಾರಾಟ ಮೇಳದಲ್ಲಿ ಹಣ್ಣುಗಳ ರಾಜನ ದರ್ಬಾರ್!

ಉಡುಪಿ: ಹಣ್ಣುಗಳ ರಾಜನೆಂದೇ ಹೆಸರುವಾಸಿಯಾದ, ಕಿರಿಯರಿಂದ ಹಿಡಿದು ಹಿರಿಯರವರೆಗೂ ಬಾಯಲ್ಲಿ ನಿರೂರಿಸುವ ವಿವಿಧ ಬಗೆಯ ಮಾವಿನ ಹಣ್ಣಿನ ಮೇಳವನ್ನು ಉಡುಪಿ ದೊಡ್ಡಣಗುಡ್ಡೆ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದಲ್ಲಿ ಆಯೋಜಿಸಲಾಗಿದೆ. ನೇರವಾಗಿ ರೈತರಿಂದಲೇ ನೈಸರ್ಗಿಕ ತಾಜಾ ಹಾಗೂ ಸ್ವಾದಿಷ್ಟ ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ಒದಗಿಸುವುದು, ಸಾರ್ವಜನಿಕರಿಗೆ ವಿವಿಧ ಮಾವಿನ ತಳಿಗಳನ್ನು ಪರಿಚಯಿಸುವುದು, ಹವಾಮಾನ ವೈಪರೀತ್ಯದಿಂದಾಗಿ ಮಾವು ಇಳುವರಿ ನಷ್ಟದಲ್ಲಿರುವ ಬೆಳೆಗಾರರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿ. ಪಂ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ರಾಮನಗರ ಜಿಲ್ಲಾ […]