ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಕ್ರೀಡಾ ಸಂಕೀರ್ಣ ಕಟ್ಟಡಕ್ಕೆ ಶಾಸಕ ರಘುಪತಿ ಭಟ್ ರಿಂದ ಶಿಲಾನ್ಯಾಸ
ಬ್ರಹ್ಮಾವರ: ಇಲ್ಲಿನ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ (ರಿ.) ಇದರ ಕ್ರೀಡಾ ಸಂಕೀರ್ಣ ಕಟ್ಟಡದ (ಕ್ಲಬ್ ಹೌಸ್) ಶಿಲಾನ್ಯಾಸ ಕಾರ್ಯಕ್ರಮ ಮೇ 23 ರಂದು ಹೇರೂರು ಗ್ರಾಮದ ಹೇರಂಜೆಯಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ಕ್ರೀಡಾ ಸಂಕೀರ್ಣ ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಗುರ್ಮೆ ಫೌಂಡೇಶನ್ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷ ಮೀರಾ ಸದಾನಂದ ಪೂಜಾರಿ, ಬ್ರಹ್ಮಾವರ ಸ್ಪೋರ್ಟ್ಸ್ […]
ದಾವೋಸ್: ವಿಶ್ವ ಆರ್ಥಿಕ ವೇದಿಕೆಯಲ್ಲಿ ಕರ್ನಾಟಕ ಪೆವಿಲಿಯನ್ ಉದ್ಘಾಟಿಸಿದ ಬೊಮ್ಮಾಯಿ
ದಾವೋಸ್: ದಾವೋಸ್‌ನ ವಿಶ್ವ ಆರ್ಥಿಕ ವೇದಿಕೆಯಲ್ಲಿ ಕರ್ನಾಟಕ ಪೆವಿಲಿಯನ್ ಅನ್ನು ರಾಜ್ಯದ ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿ ಉದ್ಘಾಟಿಸಿದರು. ವಿಶ್ವ ಆರ್ಥಿಕ ವೇದಿಕೆ 2022ನಲ್ಲಿ ಭಾಗವಹಿಸಲು ದಾವೋಸ್ ಗೆ ತೆರಳಿರುವ ಬೊಮ್ಮಾಯಿ, ಕರ್ನಾಟಕವು ವಿವಿಧ ಕ್ಷೇತ್ರಗಳಿಗೆ ಬಲವಾದ ಪರಿಸರ ವ್ಯವಸ್ಥೆಯನ್ನು ಹೊಂದಿದೆ ಮತ್ತು ಇಲ್ಲಿನ ಭಾಗವಹಿಸುವಿಕೆಯು ರಾಜ್ಯದ ಪ್ರಮುಖ ಶಕ್ತಿಯನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
ರಾಜ್ಯದ ಮಳೆ ಪಟ್ಟಿಯಲ್ಲಿ ಉಡುಪಿಗೆ ಅಗ್ರಸ್ಥಾನ: ಆಗುಂಬೆಯ ಸ್ಥಾನವನ್ನು ಕಿತ್ತುಕೊಂಡ ಕರಾವಳಿ ಜಿಲ್ಲೆಯ ಭಾರೀ ಮಳೆಗೆ ಅರಣ್ಯ ನಾಶ ಕಾರಣ!
ಉಡುಪಿ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಎಡೆಬಿಡದೆ ಸುರಿಯುವ ಭಾರೀ ಮಳೆಗೆ ಹೆಸರುವಾಸಿಯಾಗಿದ್ದು, ದಕ್ಷಿಣ ಭಾರತದ ಚಿರಾಪುಂಜಿ ಎನ್ನುವ ಬಿರುದನ್ನು ಗಳಿಸಿರುವ ವಿಷಯ ಎಲ್ಲರಿಗೂ ತಿಳಿದಿರುವಂತಹದ್ದೆ. ಆದರೆ, ಇದೀಗ ಆಗುಂಬೆಯ ಕೈಯಿಂದ ಈ ಬಿರುದನ್ನು ಉಡುಪಿ ಜಿಲ್ಲೆಯು ಕಸಿದುಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ ಎಂದು ವಿಜ್ಞಾನಿಗಳು ಅಭಿಪ್ರಾಯ ಪಟ್ಟಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಕೆಎಸ್‌ಡಿಎಂಎ) ಅಂಕಿಅಂಶಗಳ ಪ್ರಕಾರ, 2015 ಮತ್ತು 2021 ರ ನಡುವೆ ಕಳೆದ ಏಳು ವರ್ಷಗಳಲ್ಲಿ ಇಡೀ ರಾಜ್ಯಕ್ಕೆ ಹೋಲಿಸಿದಲ್ಲಿ ಉಡುಪಿ ಜಿಲ್ಲೆಯ ವಿವಿಧ ಸ್ಥಳಗಳು […]
ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಮಣ್ಣು ಉಳಿಸಿ ಅಭಿಯಾನ ಕಾರ್ಯಕ್ರಮ
ಕುಂದಾಪುರ: ಮಣ್ಣಿನ ನೈಸರ್ಗಿಕ ಗುಣಲಕ್ಷಣಗಳು ಹಾಗೂ ಸ್ವರೂಪಗಳು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಕೃತಕ ರಾಸಾಯನಿಕ ಗೊಬ್ಬರಗಳ ಬಳಕೆ ಹಾಗೂ ವಿಷಪೂರಿತ ತ್ಯಾಜ್ಯದಿಂದಾಗಿ ಮಣ್ಣಿನ ಮಾಲಿನ್ಯ ಹೆಚ್ಚುತ್ತಿರುವುದು ಆತಂಕಕಾರಿಯಾದ ವಿಷಯ ಎಂದು ಇಶಾ ಫೌಂಡೇಶನ್ ಕೊಯಮುತ್ತೂರು ಇದರ ಸ್ವಯಂ ಸೇವಕರಾದ ಶ್ರೀ ಬಿ.ಎನ್. ವೆಂಕಟೇಶ್ ಹೇಳಿದರು. ಅವರು ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕ ಹಾಗೂ ಇಶಾ ಫೌಂಡೇಶನ್ ಆಯೋಜಿಸಿದ ಮಣ್ಣು ಉಳಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ತನ್ನ ಮೂಲ ಸತ್ವವನ್ನು ಕಳೆದುಕೊಳ್ಳುತ್ತಿರುವ ಮಣ್ಣನ್ನು […]
ಶಾಲೆಗಳಲ್ಲಿ ಹುಸಿ ಬಾಂಬ್ ಬೆದರಿಕೆ: ತಮಿಳುನಾಡು ಮೂಲದ 17 ವರ್ಷದ ಬಾಲಕ ಇ-ಮೇಲ್ ಗಳ ಮಾಸ್ಟರ್ ಮೈಂಡ್?
ಬೆಂಗಳೂರು: ಇದೇ ವರ್ಷ ಏಪ್ರಿಲ್ ನಲ್ಲಿ ಬೆಂಗಳೂರಿನ 10ಕ್ಕೂ ಹೆಚ್ಚು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ, ಹುಸಿ ಬಾಂಬ್ ಕರೆ ಪ್ರಕರಣದಲ್ಲಿ ಹೊಸ ಮಾಹಿತಿ ಲಭ್ಯವಾಗಿದೆ. 17 ವರ್ಷದ ಬಾಲಕ ಸಿದ್ದಪಡಿಸಿದ್ದ ಸಾಫ್ಟ್ ವೇರ್ ಪ್ರೋಗ್ರಾಂ ಬಳಸಿ ಹುಸಿ ಬಾಂಬ್ ಇ-ಮೇಲ್ ಕಳುಹಿಸಿರುವುದಾಗಿ ತಿಳಿದುಬಂದಿದೆ. ತಮಿಳುನಾಡು ಮೂಲದ 17 ವರ್ಷದ ಬಾಲಕನೊಬ್ಬ ಇ-ಮೇಲ್ ಗಳ ಮಾಸ್ಟರ್ ಮೈಂಡ್ ಆಗಿದ್ದಾನೆ ಎನ್ನಲಾಗಿದೆ. ಹುಸಿ ಬಾಂಬ್ ಕರೆಯ ಕೆಲದಿನಗಳ ಹಿಂದೆ ಭೋಪಾಲ್ ನ ಕೆಲ ಶಾಲೆಗಳಿಗೂ ದುಷ್ಕರ್ಮಿಗಳು ಇಮೇಲ್ […]