26 ವರ್ಷದ ಕ್ಯಾಪ್ಟನ್ ಅಭಿಲಾಶಾ ಬರಾಕ್: ಭಾರತೀಯ ಸೇನೆಯ ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್!
ನವದೆಹಲಿ: ಬುಧವಾರ, ಹರಿಯಾಣದ 26 ವರ್ಷದ ಕ್ಯಾಪ್ಟನ್ ಅಭಿಲಾಶಾ ಬರಾಕ್ ಭಾರತೀಯ ಸೇನೆಯ ಯುದ್ಧ ವಿಮಾನದ ಮೊದಲ ಮಹಿಳಾ ಪೈಲಟ್ ಆಗಿ ಹೊರಹೊಮ್ಮಿದ್ದಾರೆ. ನಾಸಿಕ್ನ ಯುದ್ಧ ಸೇನಾ ವಿಮಾನಯಾನ ತರಬೇತಿ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಕ್ಯಾಪ್ಟನ್ ಅಭಿಲಾಷಾ ಬರಾಕ್ ಪೈಲಟ್ ಪದವಿ ಪಡೆದರು. ಆರ್ಮಿ ಏವಿಯೇಷನ್ನ ಡಿಜಿ ಎ ಕೆ ಸೂರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕ್ಯಾಪ್ಟನ್ ಬರಾಕ್ ಸನಾವರ್ನ ಲಾರೆನ್ಸ್ ಶಾಲೆಯ ಹಳೆಯ ವಿದ್ಯಾರ್ಥಿ. ಅವರು 2016 ರಲ್ಲಿ ದೆಹಲಿ ತಾಂತ್ರಿಕ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಾನಿಕ್ಸ್ ಮತ್ತು […]
ರಾಜ್ಯದ ಪ್ರಪ್ರಥಮ ತಿರುಗುವ ಮುಚ್ಚಿಗೆ! 1500 ವರ್ಷ ಇತಿಹಾಸವಿರುವ ಕಡಿಯಾಳಿ ದೇವಸ್ಥಾನದಲ್ಲಿ ವಾಸ್ತುಕಲೆಯ ಅದ್ಭುತ ನಿದರ್ಶನ!!
ಉಡುಪಿ: ಇತಿಹಾಸ ಪ್ರಸಿದ್ದ, ಸುಮಾರು 1500 ವರ್ಷ ಇತಿಹಾಸವಿರುವ ಕಡಿಯಾಳಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲ್ಲಿ ವಾಸ್ತುಕಲೆಯ ಅತ್ಯದ್ಭುತ ನಿದರ್ಶನವೊಂದು ಭಕ್ತಾದಿಗಳನ್ನು ಕೈ ಬೀಸಿ ಕರೆಯುತ್ತಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮರದಿಂದ ಮಾಡಿದ ತಿರುಗುವ ಮುಚ್ಚಿಗೆಯನ್ನು ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ನಿರ್ಮಾಣ ಮಾಡಲಾಗಿದೆ. ಜೂನ್ 1 ರಿಂದ ಜೂನ್ 10ರ ತನಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಜರುಗಲಿದ್ದು, ಈ ತಿರುಗುವ ಮುಚ್ಚಿಗೆಯು ಅತಿ ದೊಡ್ಡ ಆಕರ್ಷಣೆಯಾಗಲಿದೆ.
ಬಾಲಕರ ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಕೇಂದ್ರಕ್ಕೆ ಒಂದು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಮಂಜೂರಾಗಿದ್ದು, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 100 ವಿದ್ಯಾರ್ಥಿಗಳಿಗೆ ವಾಸಿಸಲು ಯೋಗ್ಯವಾದ, ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಕನಿಷ್ಠ 5000 ಚದರ ಅಡಿ ವಿಸ್ತೀರ್ಣದ ಕಟ್ಟಡವನ್ನು ಬಾಡಿಗೆಗೆ ನೀಡಲು ಸಿದ್ಧವಿರುವ ಕಟ್ಟಡದ ಮಾಲಕರು, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2528884, ಮೊ.ನಂ: 9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮೇ 28 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ 75 ನೇ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವು ಮೇ 28 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ […]
ಮೇ 27 ರಂದು ವರಂಗದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ
ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಮೇ 27 ರಂದು ಬೆಳಗ್ಗೆ 10 ಗಂಟೆಗೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ವರಂಗ ಗ್ರಾಮಕ್ಕೆ ಒಳಪಡುವ ಸಾರ್ವಜನಿಕರು ಹಾಗೂ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ವರಂಗ ಗ್ರಾಮಕರಣಿಕರ ಕಚೇರಿಗೆ ಮುಂಚಿತವಾಗಿ ನೀಡಿ, ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.