ಲಡಾಖ್: ನದಿಗೆ ಉರುಳಿದ ಭಾರತೀಯ ಸೇನೆಯ ಬಸ್; 7 ಯೋಧರು ಹುತಾತ್ಮ

ಲಡಾಖ್: 26 ಭಾರತೀಯ ಸೈನಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಒಂದು ನದಿಗೆ ಉರುಳಿ 7 ಯೋಧರು ಹುತಾತ್ಮರಾಗಿರುವ ದುರ್ಘಟನೆ ಲಡಾಖ್ ನಲ್ಲಿ ನಡೆದಿದೆ. ಸಿಯಾಚಿನ್‌ನ ನೈಋತ್ಯ ಭಾಗದ ಲಡಾಕ್‌ನಲ್ಲಿರುವ ಶ್ಯೋಕ್ ನದಿಗೆ ಸೈನಿಕರು ಪ್ರಯಾಣಿಸುತ್ತಿದ್ದ ಬಸ್‌ ಸ್ಕಿಡ್ ಆಗಿ ಶುಕ್ರವಾರ ಕನಿಷ್ಠ 7 ಭಾರತೀಯ ಸೇನಾ ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಲೇಹ್ ಜಿಲ್ಲೆಯ ತುರ್ತುಕ್ ಸೆಕ್ಟರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಹಲವಾರು ಸೈನಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದು ಸೇನಾ ಮೂಲಗಳು […]

ಪೆರಂಪಳ್ಳಿ: ‘ಸೂಕ್ಷ್ಮತೆಯಿಂದ ಬೋಧನೆ’ ವಿಚಾರದ ಕುರಿತು ಶಿಕ್ಷಕರಿಗಾಗಿ ವಿಶೇಷ ಕಾರ್ಯಾಗಾರ

ಪೆರಂಪಳ್ಳಿ: ರೋಟರಿ ಕ್ಲಬ್ ಮಣಿಪಾಲ ನಗರ ಮತ್ತು ಟ್ರಿನಿಟಿ ಸೆಂಟ್ರಲ್ ಸ್ಕೂಲ್ ಪೆರಂಪಳ್ಳಿ ಇದರ ಸಹಯೋಗದೊಂದಿಗೆ, “ಸೂಕ್ಷ್ಮತೆಯಿಂದ ಬೋಧನೆ” ಎಂಬ ವಿಚಾರದ ಕುರಿತು ಶಿಕ್ಷಕರಿಗಾಗಿ ವಿಶೇಷ ಕಾರ್ಯಾಗಾರ ನಡೆಯಿತು. ಮಣಿಪಾಲ ಕ್ಲಿನಿಕಲ್ ಸೈಕಾಲಜಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ ದೀಪಾ ಮರೀನಾ ರಸ್ಕೀನಾ ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಾಗಾರದಲ್ಲಿ ಶಿಕ್ಷಕರ ಪಾತ್ರ ಮತ್ತು ಒತ್ತಡ ನಿರ್ವಹಣೆ ಎಂಬ ವಿಷಯದ ಬಗ್ಗೆ ಡಾ ದೀಪಾ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಕರನ್ನು ಉದ್ದೇಶಿಸುತ್ತಾ, ಇಂದಿನ ಪೀಳಿಗೆಯ […]

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ ಆಯೋಜನೆ

ನಿಟ್ಟೆ: ಇಂದು ನಾವು ತಂತ್ರಜ್ಞಾನದ ವಿಚಾರವಾಗಿ ಎಷ್ಟೇ ಮುಂದುವರಿದಿದ್ದರೂ ಪ್ರತಿಯೋರ್ವ ಜೀವಿಗೆ ಅಗತ್ಯವಿರುವ ರಕ್ತದಂತಹ ವಸ್ತುವನ್ನು ಕೃತಕವಾಗಿ ಉತ್ಪಾದಿಸಲು ಆಗುವುದಿಲ್ಲ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ರಕ್ತದ ಮಹತ್ವ ಹಾಗೂ ಜೀವ ಉಳಿಸುವ ನಿಟ್ಟಿನಲ್ಲಿ ರಕ್ತದಾನದ ಅಗತ್ಯತೆಯನ್ನು ತಿಳಿದುಕೊಳ್ಳಬೇಕು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕಾರ್ಕಳ ಘಟಕದ ಅಧ್ಯಕ್ಷ ಡಾ. ಕೆ.ಆರ್ ಜೋಷಿ ಹೇಳಿದರು. ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್), ರೆಡ್‌ಕ್ರಾಸ್ ಸೊಸೈಟಿ, 6 (ಕೆ.ಎ.ಆರ್) ನೇವಿ ಎನ್.ಸಿ.ಸಿ ಸಬ್‌ಯುನಿಟ್ ನಿಟ್ಟೆ, ಮೆಕ್ಯಾನಿಕಲ್ […]

ಮೇ 29 ರಂದು ಬೈಲೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕಾರ್ಕಳ: ಹಿಂದೂ ಜಾಗರಣ ವೇದಿಕೆ ಬೈಲೂರು ವಲಯ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್(ರಿ.), ಉಡುಪಿ, ರಕ್ತನಿಧಿ, ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ ಇವರ ಸಹಯೋಗದೊಂದಿಗೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಮೇ 29 ರವಿವಾರದಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರವರೆಗೆ ಬೈಲೂರಿನ ಸರಕಾರಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ. ದಾನಿಗಳು ಸ್ವಯಂ ಪ್ರೇರಣೆಯಿಂದ ರಕ್ತ ದಾನ ಮಾಡಿ ಜೀವ ಉಳಿಸಬೇಕಾಗಿ ಕೇಳಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸುರೇಶ್ ಸಾಲ್ಯಾನ್-9449281268, ದೀಪಕ್-7022918175, ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್-9986668476 ಮಾಣಿಪಾಲ್ ಇವರನ್ನು ಸಂಪರ್ಕಿಸಲು ಕೋರಲಾಗಿದೆ.

ಮೇ 29: ಕನ್ನರ್ಪಾಡಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನ ಉದ್ಘಾಟನಾ ಕಾರ್ಯಕ್ರಮ

ಉಡುಪಿ: ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಉಡುಪಿ ಹಾಗೂ ಕಡೆಕಾರ್ ಗ್ರಾಮ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ  ಡಾ. ಬಿ.ಆರ್  ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭವು ಮೇ 29 ರಂದು ಬೆಳಗ್ಗೆ 11.30 ಕ್ಕೆ ಕನ್ನರ್ಪಾಡಿ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅಂಬೇಡ್ಕರ್ ಭವನದ ಉದ್ಘಾಟನೆ ನೆರವೇರಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ […]