ವಿರಾಟ್ ಕೊಹ್ಲಿಇಡೀ ವೃತ್ತಿಜೀವನದಲ್ಲಿ ಮಾಡಿದ್ದಕ್ಕಿಂತ ಹೆಚ್ಚು ತಪ್ಪುಗಳನ್ನು ಒಂದು ಐಪಿಎಲ್ ಸೀಸನ್‌ನಲ್ಲಿ ಮಾಡಿದ್ದಾರೆ:ಸೆಹ್ವಾಗ್

ವಿರಾಟ್ ಕೊಹ್ಲಿ ಅವರು ತಮ್ಮ ಸಂಪೂರ್ಣ 14 ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಮಾಡಿದ್ದಕ್ಕಿಂತ ಹೆಚ್ಚು ತಪ್ಪುಗಳನ್ನು ಒಂದು ಐಪಿಎಲ್ ಸೀಸನ್‌ನಲ್ಲಿ ಮಾಡಿದ್ದಾರೆ ಎಂದು ವೀರೇಂದ್ರ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ. ಹೆಚ್ಚಿನ ಪಂದ್ಯಗಳಲ್ಲಿ ಇನ್ನಿಂಗ್ಸ್ ತೆರೆದರೂ, ಎರಡೂವರೆ ವರ್ಷಗಳಿಂದ ಅಂತಾರಾಷ್ಟ್ರೀಯ ಶತಕವನ್ನು ಗಳಿಸದ ಕೊಹ್ಲಿ, 16 ಐಪಿಎಲ್ ಪಂದ್ಯಗಳಲ್ಲಿ 22.73 ರ ಸರಾಸರಿಗಿಂತ ಕಡಿಮೆ ಸರಾಸರಿಯಲ್ಲಿ 341 ರನ್ ಗಳಿಸಿ ಎರಡು ಅರ್ಧ ಶತಕಗಳನ್ನು ಗಳಿಸಿ ತಮ್ಮ ಕೆಟ್ಟ ಕುಸಿತವನ್ನು ಪ್ರದರ್ಶಿಸಿದ್ದಾರೆ. “ಇದು ನಮಗೆ ಗೊತ್ತಿರುವ ವಿರಾಟ್ ಕೊಹ್ಲಿ ಅಲ್ಲ. […]

ಮೇಡ್ ಇನ್ ಇಂಡಿಯಾ ಟೆಸ್ಲಾ ಇವಿ ಕಾರಿಗೆ ಕೂಡಿ ಬಂದಿಲ್ಲ ಕಾಲ: ಮೊದಲು ಮಾರಾಟ ಮತ್ತು ಸೇವೆಗೆ ಪಟ್ಟು ಹಿಡಿದ ಮಸ್ಕ್!

ನವದೆಹಲಿ: “ಕಾರುಗಳನ್ನು ಮಾರಾಟ ಮಾಡಲು ಮತ್ತು ಸೇವೆ ನೀಡಲು ಮೊದಲು ನಮಗೆ ಅನುಮತಿ ನೀಡದ ಹೊರತು ಭಾರತದ ಯಾವುದೇ ಸ್ಥಳದಲ್ಲಿ ಟೆಸ್ಲಾ ಉತ್ಪಾದನಾ ಘಟಕವನ್ನು ಹಾಕುವುದಿಲ್ಲ” ಎಂದು ಎಲೆಕ್ಟ್ರಿಕ್ ಕಾರು ಟೆಸ್ಲಾದ ನಿರ್ಮಾತ ಏಲನ್ ಮಸ್ಕ್ ಹೇಳಿದ್ದಾರೆ. ಟೆಸ್ಲಾ ಸಂಸ್ಥಾಪಕರು ಭಾರತದಲ್ಲಿ ಇವಿ ಕಾರುಗಳನ್ನು ತಯಾರಿಸುವ ಯಾವುದೇ ಯೋಜನೆಯನ್ನು ಹೊಂದಿಲ್ಲ, ಮಾರಾಟ ಮತ್ತು ಸೇವೆಯನ್ನು ಅನುಮತಿಸುವವರೆಗೆ, ಭಾರತದಲ್ಲಿ ಯಾವುದೇ ಸ್ಥಾವರವನ್ನು ಸ್ಥಾಪಿಸುವುದಿಲ್ಲ ಎಂದು ಟ್ವಿಟರ್ ಬಳಕೆದಾರರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. 2016 ರಿಂದಲೇ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲು […]

ಇಂದು ಉಡುಪಿಯಲ್ಲಿ ಜಗ್ಗಿ ವಾಸುದೇವ್ ಸದ್ಗುರುರವರ ಸ್ವಾಗತ ಕಾರ್ಯಕ್ರಮ

ಉಡುಪಿ: ಜಗತ್ತಿನಾದ್ಯಂತ ಶತಕೋಟಿ ಹೃದಯಗಳನ್ನು ಮುಟ್ಟಿದ ನಂತರ, ಭಾರತಕ್ಕೆ ಮರಳುತ್ತಿರುವ ಸದ್ಗುರುಗಳನ್ನು ಸ್ವಾಗತಿಸುವ ಕಾರ್ಯಕ್ರಮದ ಅಂಗವಾಗಿ ಇಂದು ಸಂಜೆ ಸಂಜೆ 4.30 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಗರದ ಕಾರ್ ಸ್ಟ್ರೀಟ್ ನಲ್ಲಿ ಜರುಗಲಿದೆ. ಕಾರ್ಯಕ್ರಮದ ವಿವರಗಳು: ಹೆಸರಾಂತ ಕಲಾವಿದ ಮಹೇಶ್ ರಾವ್ ಅವರಿಂದ ರಂಗೋಲಿ ಬಿಡಿಸುವ ಕಾರ್ಯಕ್ರಮ. ಶ್ರಾವ್ಯ ಹಿರಿಯಡ್ಕ ಶಿಷ್ಯರು ಮತ್ತು ಶ್ವೇತಾ ಮತ್ತು ತಂಡದವರಿಂದ ಭರತನಾಟ್ಯ ಪ್ರದರ್ಶನ. ಝೇಂಕಾರ್ ಟ್ರೂಪ್ ಎಸ್‌ಎಲ್‌ವಿಟಿಯಿಂದ ದಿವ್ಯ ಭಜನೆ. ಅರ್ಜುನ್ ಮತ್ತು ತಂಡದವರಿಂದ ಯಕ್ಷಗಾನ ಪ್ರದರ್ಶನ. ಪರ್ಕಳ ತಂಡದಿಂದ […]

‘ಉನ್ನತಿ – ಸಂಚಲನ ಮೆಗಾ ಸ್ಕಾಲರ್ ಶಿಪ್ ಸ್ಪರ್ಧೆ’: 3000ಕ್ಕೂ ಅಧಿಕ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

ಉಡುಪಿ: ಈಗಾಗಲೇ ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಪ್ರಸಿದ್ಧಿ ಪಡೆದಿರುವ ಹಾಗೂ ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ (ಕೆ ಎಸ್ ಡಿ ಸಿ) ದ ತರಬೇತಿ ಪಾಲುದಾರ ಸಂಸ್ಥೆಯಾದ ಉನ್ನತಿ ಕೆರಿಯರ್ ಅಕಾಡೆಮಿ ಕಳೆದ ಮೂರು ವರ್ಷಗಳಿಂದ 3000ಕ್ಕೂ ಅಧಿಕ ಯುವಕ-ಯುವತಿಯರಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಸೃಷ್ಟಿಸಿದೆ. ಈ ಕಾರ್ಯದ ಹಿಂದೆ ಸಂಚಲನ ಸ್ವಯಂ ಸೇವಾ ಸಂಘಟನೆ ಸಂಪೂರ್ಣ ಸಹಕಾರ ನೀಡುತ್ತಾ ಬರುತ್ತಿದೆ. ಇದೀಗ ಈ ಎರಡು ಸಂಸ್ಥೆಗಳ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ […]

ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ: ಜಿಲ್ಲಾಧಿಕಾರಿ

ಉಡುಪಿ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಜಿಲ್ಲಾಡಳಿತವು ಹಳ್ಳಿಗೆ ಭೇಟಿ ನೀಡಿದೆ. ಜನರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಹೆಬ್ರಿ ತಾಲೂಕಿನ ವರಂಗ ಗ್ರಾಮ ವ್ಯಾಪ್ತಿಯ ಮುನಿಯಾಲಿನ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಗರದಿಂದ ದೂರವಿರುವ ಗ್ರಾಮೀಣ ಪ್ರದೇಶದ ಜನರು ವಾಸವಾಗಿರುವ ಸ್ಥಳಕ್ಕೆ ಅಧಿಕಾರಿಗಳು ಹೋಗಿ ಅವರ ಸಮಸ್ಯೆಗಳನ್ನು […]