ಮಧ್ಯವರ್ತಿಗಳ ಹಾವಳಿ ಇಲ್ಲದೆ ದೇಶದ ಕಟ್ಟಕಡೆಯ ವ್ಯಕ್ತಿಗೂ ನೇರವಾಗಿ ಸೌಲಭ್ಯ ಒದಗಿಸುತ್ತಿದೆ ಕೇಂದ್ರ: ಶೋಭಾ ಕರಂದ್ಲಾಜೆ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿವಿಧ ಜನಪರ ಕಾರ್ಯಕ್ರಮಗಳ ಮೂಲಕ ದೇಶದ ಕಟ್ಟಕಡೆಯ ವ್ಯಕ್ತಿಗೂ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಹಾಗೂ ಸಂಸದೆ ಶೋಭಾ ಕರಂಧ್ಲಾಜೆ ಹೇಳಿದರು. ಅವರು ಮಂಗಳವಾರ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕೇಂದ್ರ ಸರ್ಕಾರ ಜಾರಿಗೊಳಿಸಿದ ಜನಪ್ರಿಯ ಯೋಜನೆಗಳ ಫಲಾನುಭವಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. […]
ಕಡಿಯಾಳಿ ದೇಗುಲದಲ್ಲಿ ಶ್ರೀಮಹಿಷಮರ್ದಿನಿ ದೇವರ “ಶರಣು ಶ್ರೀದೇವಿ” ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆ
ಉಡುಪಿ: ಬ್ರಹ್ಮಕಲಶೋತ್ಸವದ ಪ್ರಯುಕ್ತ ಡಾ. ವಿದ್ಯಾಭೂಷಣ ಕಂಠಸಿರಿಯಲ್ಲಿ ಹೊರಬಂದಿರುವ ಜಗನ್ಮಾತೆ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವರ “ಶರಣು ಶ್ರೀದೇವಿ “ಎಂಬ ಹಾಡಿನ ಗುಚ್ಛಗಳನ್ನು ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಯೂಟ್ಯೂನಲ್ಲಿ ಬಿಡುಗಡೆ ಮಾಡಲಾಯಿತು. ಶಾಸಕ ಕೆ ರಘುಪತಿ ಭಟ್ ಹಾಡನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿ ಅಧ್ಯಕ್ಷರಾದ ಡಾ. ಕಟ್ಟೆ ರವಿರಾಜ್ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ನಾಗೇಶ ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ರಾಘವೇಂದ್ರ ಕಿಣಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ನಿತ್ಯಾನಂದ ಕಾಮತ್, […]
ಜೂನ್ 01: ಪೌಷ್ಟಿಕ ಆಹಾರ ಕೇಂದ್ರ ಸುದೀಪ್ತಿ ಸೆಂಟರ್ ಆರಂಭ
ಉಡುಪಿ: ಪೌಷ್ಟಿಕ ಸಮತೋಲನವಾದ ಉಪಹಾರ / ಊಟ ಹಾಗೂ ದೇಹದ ತೂಕ ಮತ್ತು ಉತ್ತಮ ಆರೋಗ್ಯಕರ ಜೀವನ ಪದ್ಧತಿಯ ಬಗ್ಗೆ ಹೆಚ್ಚಿನ ಮಾಹಿತಿ ನೀಡುವ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ಕೇಂದ್ರ ಸುದೀಪ್ತಿ ಸೆಂಟರ್ ಅನ್ನು ಬುಧವಾರ ಜೂನ್ 01 ರಂದು ಬೆಳಗ್ಗೆ 10 ಗಂಟೆಗೆ ಸ್ಥಳ ಅಂಬಾಗಿಲು, ಗುಂಡಿಬೈಲು ರಸ್ತೆ, ತಂಗದಂಗಡಿ, ನಿಟ್ಟೂರು ಪ್ರಾಥಮಿಕ ಶಾಲೆ ಹತ್ತಿರ ಉದ್ಘಾಟಿಸಲಾಗುವುದು. ದೇಹದ ತೂಕ ಕಡಿಮೆ ಅಥವಾ ಹೆಚ್ಚು ಮಾಡಿಕೊಳ್ಳಲು ಇಚ್ಛಿಸುವವರು ಸುದೀಪ್ತಿ ಸೆಂಟರಿಗೆ ಭೇಟಿ ನೀಡಬಹುದು. ಪೌಷ್ಟಿಕ ಆಹಾರ ಆನ್ […]
ಕರ್ನಾಟಕದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ನಿರ್ಮಲಾ ಸೀತಾರಾಮನ್
ಬೆಂಗಳೂರು: ಮಂಗಳವಾರದಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಾಜರಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿರ್ಮಲಾ ಸೀತಾರಾಮನ್ ರವರಿಗೆ ಶುಭ ಹಾರೈಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.
ಬೆಂಗಳೂರಿನ ಸೇಂಟ್ ಮಾರ್ಥಾಸ್ ಆಸ್ಪತ್ರೆ ಮೇಲ್ಛಾವಣಿ ಕುಸಿತ: ಮೂವರು ಕಾರ್ಮಿಕರು ಗಾಯಾಳು; ಒಬ್ಬನ ಸ್ಥಿತಿ ಗಂಭೀರ
ಬೆಂಗಳೂರು: ಮಂಗಳವಾರ ಬೆಳಗ್ಗೆ 6:30ರ ಸುಮಾರಿಗೆ ನೃಪತುಂಗ ರಸ್ತೆಯಲ್ಲಿರುವ ಸೇಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ನಿರ್ಮಾಣ ಹಂತದಲ್ಲಿರುವ ಪೋರ್ಟಿಕೋದ ಮೇಲ್ಛಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕನೊಬ್ಬನ ಸ್ಥಿತಿ ಗಂಭೀರವಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ. ಆತನ ಜೊತೆ ಕೆಲಸ ಮಾಡುತ್ತಿದ್ದ ಮೂವರು ಸಹೋದ್ಯೋಗಿಗಳಿಗೆ ಗಾಯಗಳಾಗಿವೆ. ತೀವ್ರವಾಗಿ ಗಾಯಗೊಂಡಿರುವ ಕಾರ್ಮಿಕನನ್ನು ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ನಿಗಾವಣೆಯಲ್ಲಿರಿಸಿದ್ದು, ಇತರ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪೋರ್ಟಿಕೋದ ನಿರ್ಮಾಣವು ಎರಡು ತಿಂಗಳ ಹಿಂದೆ ಪ್ರಾರಂಭವಾಗಿತ್ತು ಮತ್ತು ಇದು ಒಂದು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಸೇಂಟ್ ಮಾರ್ಥಾಸ್ […]