ಪ್ರಧಾನಿ ಮೋದಿ ಭಾರತದ ಅಭಿವೃದ್ಧಿಯ ಪರ್ವಕ್ಕೆ ನಾಂದಿ ಹಾಡಿದ ಭರವಸೆಯ ನಾಯಕ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ : ಭಾರತವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರ ಆಶಾಕಿರಣ. ಕಳೆದ 8 ವರ್ಷದಲ್ಲಿ ನರೇಂದ್ರ ಮೋದಿಯವರು ಸಮರ್ಥ ಮತ್ತು ಭರವಸೆಯ ನಾಯಕರಾಗಿ ಭಾರತದ ಅಭಿವೃದ್ಧಿಯ ಪರ್ವಕ್ಕೆ ನಾಂದಿ ಹಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದರು. ಬುಧವಾರ ಅವರು ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ದೇಶದ ಪ್ರಗತಿಗೆ ರಾಜಕೀಯ […]

ಮಂಗಳೂರಿನ ಸಮೀಪ ಅಂತಾರಾಷ್ಟ್ರೀಯ ಮಟ್ಟದ ಫರ್ನೀಚರ್ ಕ್ಲಸ್ಟರ್ ಪ್ರಾರಂಭಿಸಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ: ಯುವಕರಿಗೆ ಉದ್ಯೋಗ ಒದಗಿಸುವಂತಹ ಅಂತಾರಾಷ್ಟ್ರೀಯ ಮಟ್ಟದ ಫರ್ನೀಚರ್ ಕ್ಲಸ್ಟರನ್ನು ಮಂಗಳೂರು ಸಮೀಪದಲ್ಲಿ ಇದೇ ವರ್ಷ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಬುಧವಾರ ಕಾರ್ಕಳ ತಾಲ್ಲೂಕಿನ ಎಣ್ಣೆಹೊಳೆ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಕರಾವಳಿ ಪ್ರದೇಶದಲ್ಲಿ ಗ್ರೀನ್ ಪವರ್ ಅಭಿವೃದ್ಧಿ, ಹಸಿರು ಇಂಧನ ಆಧಾರಿತ ಕೈಗಾರಿಕಾ ಹಬ್ ನಿರ್ಮಿಸಲು ತೀರ್ಮಾನ ಮಾಡಲಾಗಿದೆ. ಶಿಲ್ಪಿಗಳು, ಮರದ ಕೆಲಸ ಮಾಡುವವರಿಗಾಗಿ ಕ್ಲಸ್ಟರನ್ನು ಸ್ಥಾಪಿಸಲು ಶೀಘ್ರದಲ್ಲಿಯೇ ಅನುಮೋದನೆ ನೀಡಲಾಗುವುದು. ಈ ರೀತಿ ಸರ್ಕಾರ ಸಮಗ್ರ, […]

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಹುಲ್‌ಗೆ ಇಡಿ ಸಮನ್ಸ್

  ನವದೆಹಲಿ: ಕಾಂಗ್ರೆಸ್ ಪಕ್ಷದ ಒಡೆತನದ ಮತ್ತು ಪಕ್ಷ ನಡೆಸುತ್ತಿರುವ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ನಿರ್ವಹಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ. 2013 ರಲ್ಲಿ ದೆಹಲಿಯ ವಿಚಾರಣಾ ನ್ಯಾಯಾಲಯದಲ್ಲಿ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಮೇರೆಗೆ ಕಾಂಗ್ರೆಸ್ ನಾಯಕರ ವಿರುದ್ಧ ಐಟಿ ತನಿಖೆ […]

ಕಾರ್ಕಳ: ಹೆಬ್ರಿ ತಾಲೂಕು ನೂತನ ಆಡಳಿತ ಸೌಧ ಕಟ್ಟಡ ಲೋಕಾರ್ಪಣೆ

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಬುಧವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ತದನಂತರ ಹೆಬ್ರಿಯ ಸುಸಜ್ಜಿತ ಬಸ್ ನಿಲ್ದಾಣ ಕಾಮಗಾರಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್ , ನೀರಾವರಿ ಸಚಿವ ಗೋವಿಂದ ಕಾರಜೋಳ , ಇಂಧನ ಸಚಿವ ಸುನಿಲ್ ಕುಮಾರ್ , ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಸಚಿವ […]

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಕುರಿತು ವರದಿ ಪರಿಶೀಲಿಸಿ ಶೀಘ್ರ ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ: ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪರಿಶೀಲಿಸಿದ ಬಳಿಕ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8 ನೇ ವರ್ಷಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಪುಸ್ತಕದಲ್ಲಿರುವ ಪಾಠಗಳನ್ನು ತೆಗೆಯುವಂತೆ ಕೆಲ ಸಾಹಿತಿಗಳು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಸಮಗ್ರ […]