ತಮಿಳುನಾಡಿನಲ್ಲಿ ಇಂಧನ ಬೆಲೆ ವಿರುದ್ದ ಪ್ರತಿಭಟನೆ: ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ದ ಪ್ರಕರಣ ದಾಖಲು

ಚೆನ್ನೈ: ತಮಿಳುನಾಡಿನ ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಅನುಮತಿ ಪಡೆಯದೆ ರಾಜ್ಯ ಸಚಿವಾಲಯದತ್ತ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕೆಂದು ರಾಜು ಬಿಜೆಪಿ ಒತ್ತಾಯಿಸುತ್ತಿದೆ. ಅಣ್ಣಾಮಲೈ ಮತ್ತು 5,000 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ತಮಿಳುನಾಡು ಪೋಲೀಸರು ಪ್ರಕರಣ ದಾಖಲಿಸಿದ್ದಾರೆ. ಮೇ 31 ರಂದು ಅಣ್ಣಾಮಲೈ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾ ರಾಜ್ಯದ […]
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಉದ್ಘಾಟನೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಎಣ್ಣೆಹೊಳೆ ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಉದ್ಘಾಟಿಸಿದರು. ಎಣ್ಣೆಹೊಳೆ ಏತ ನೀರಾವರಿ ಯೋಜನಾ ಸ್ಥಳದಲ್ಲಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್ ಅಶೋಕ್, ಇಂಧನ ಸಚಿವ ಸುನಿಲ್ ಕುಮಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಸಚಿವ ಎಸ್ ಅಂಗಾರ, ಶಾಸಕರಾದ ರಘುಪತಿ ಭಟ್, ಲಾಲಾಜಿ […]
ಇತಿಹಾಸ ಪ್ರಸಿದ್ದ ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದು ಉಡುಪಿಯ 1500 ವರ್ಷಗಳ ಇತಿಹಾಸ ಹೊಂದಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು, ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಸುತ್ತು ಪೌಳಿಯನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವ ಆರ್ ಅಶೋಕ್, ಗೋವಿಂದ ಕಾರಜೋಳ , ಎಸ್. ಸುನಿಲ್ ಕುಮಾರ್ , ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್ ಸೇರಿದಂತೆ ಇನ್ನಿತರೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಕೋಡಿಬೆಂಗ್ರೆ: ಅಧಿಕೃತ ತಂಬಾಕು ಮುಕ್ತ ಗಾಮ

ಉಡುಪಿ: ಕೋಡಿಬೆಂಗ್ರೆ ಗ್ರಾಮವು ತಂಬಾಕು ಮುಕ್ತವಾಗಬೇಕು ಎಂದು 20 ವರ್ಷಗಳ ಹಿಂದೆಯೇ ಸ್ಥಳೀಯ ಗ್ರಾಮಸ್ಥರು ನಿರ್ಧರಿಸಿ, ದೃಢ ನಿರ್ಧಾರದೊಂದಿಗೆ ಕೋಡಿಬೆಂಗ್ರೆಯನ್ನು ತಂಬಾಕು ಮುಕ್ತ ಗ್ರಾಮವಾಗಿಸಿದ್ದರು. ಈಗ ಸರ್ಕಾರದಿಂದ ಅಧಿಕೃತ ಘೋಷಣೆಯನ್ನು ಮಾಡುತ್ತಿರುವುದು ಇದಕ್ಕೆ ಶ್ರೀರಕ್ಷೆಯನ್ನು ನೀಡಿದ ಹಾಗಿದೆ, ಇದರಿಂದಾಗಿ ಗ್ರಾಮದ ಗ್ರಾಮಸ್ಥರ ಜವಾಬ್ದಾರಿ ಇನ್ನೂ ಹೆಚ್ಚಾಗಿದೆ ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೆಕ್ಷಣಾ ಘಟಕ, ರಾಷ್ಟ್ರೀಯ ತಂಬಾಕು ನಿಯಂತ್ರಣ […]
ಜೂನ್ 1 ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 135 ರೂ ಕಡಿತ: ಗೃಹಬಳಕೆಯ ಸಿಲಿಂಡರ್ ಬೆಲೆ ಯಥಾಸ್ಥಿತಿ

ನವದೆಹಲಿ: ಜೂನ್ 1 ರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 135 ರೂ ಕಡಿತ ಮಾಡಲಾಗಿದೆ. ಬುಧವಾರ ಬೆಳಗ್ಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 135 ರೂ ನಷ್ಟು ಇಳಿಕೆಮಾಡಲಾಗಿದೆ. ಮೂರು ತಿಂಗಳ ಸತತ ಏರಿಕೆಯ ನಂತರ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇದು ಮೊದಲನೆ ಇಳಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ ಈಗ ದೆಹಲಿಯಲ್ಲಿ 2,219 ರೂ., ಕೋಲ್ಕತ್ತಾದಲ್ಲಿ 2,322 ರೂ., ಮುಂಬೈನಲ್ಲಿ 2,171.50 ರೂ., ಮತ್ತು ಚೆನ್ನೈನಲ್ಲಿ […]