ಸ್ವ- ಸಹಾಯ ಗುಂಪುಗಳಿಗೆ ಮೂಲ ಬಂಡವಾಳ ನಿಧಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ: ಸಂಜೀವಿನಿ– ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ವತಿಯಿಂದ, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆ (ಪಿ.ಎಮ್.ಎಫ್.ಎಮ್.ಇ) ಯಡಿ ಸಂಜೀವಿನಿ ಸ್ವ- ಸಹಾಯ ಗುಂಪುಗಳಿಗೆ ಮೂಲ ಬಂಡವಾಳ ನಿಧಿ ವಿತರಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಕಿರು ಆಹಾರ ಉತ್ಪಾದನೆ ಮಾಡುವ ಸಂಜೀವಿನಿ ಮಹಿಳಾ ಸ್ವ- ಸಹಾಯ ಗುಂಪಿನ ಪ್ರತೀ ಫಲಾನುಭವಿಗಳು ರೂ. 40,000 ಗಳ ವರೆಗೆ ಶೇ.6 […]

ಯುಜಿಸಿ-ನೆಟ್, ಕೆ-ಸೆಟ್ ಪರೀಕ್ಷೆಗೆ ತರಬೇತಿ

ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರು (ಜೆಆರ್‌ಎಫ್) ಹಾಗೂ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. ಆಸಕ್ತರು ಜೂನ್ 10 ರ ಒಳಗೆ ಮೈಸೂರಿನ […]

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ನಗರದ ಕಿನ್ನಿಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಜೆ.ಎ.ಇ.ಎಸ್ ವ್ಹೀಲ್ ಮಾಸ್ರ್ಸ್ ಅಂಗಡಿಯ ಎದುರಿನ ರಸ್ತೆ ಬದಿಯಲ್ಲಿ ಮೇ 27 ರಂದು ಮಧ್ಯಾಹ್ನ 1.30 ರ ಸುಮಾರಿಗೆ ಸುಮಾರು 30-35 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು, ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಅಪರಿಚಿತ ಮೃತ ವ್ಯಕ್ತಿಯ ವಾರಾಸುದಾರರು ಯಾರಾದರೂ ಇದ್ದಲ್ಲಿ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಕಾರ್ಕಳ: ಮಾನಸಿಕ ಅಸ್ವಸ್ಥ ನಾಪತ್ತೆ

ಉಡುಪಿ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರ್ಕಳ ತಾಲೂಕು ರೆಂಜಾಳ ಗ್ರಾಮದ ಬ್ರಹ್ಮರಹಾಡಿ ನಿವಾಸಿ ಹರೀಶ್ ಶೆಟ್ಟಿ (33) ಎಂಬ ವ್ಯಕ್ತಿಯು ಮೇ 24 ರಂದು ಮಧ್ಯಾಹ್ನ 2.45 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 168 ಸೆಂ.ಮೀ ಎತ್ತರ, ಗೋಧಿ ಮೈಬಣ್ಣ, ಅಗಲ ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ […]

ಜೂನ್ 3: ಬೈಸಿಕಲ್ ಜಾಥಾ

ಉಡುಪಿ: ವಿಶ್ವ ಬೈಸಿಕಲ್ ದಿನಾಚರಣೆಯ ಅಂಗವಾಗಿ ಬೈಸಿಕಲ್ ಸವಾರಿಯ ಮಹತ್ವದ ಕುರಿತ ಬೈಸಿಕಲ್ ಜಾಥಾ ಕಾರ್ಯಕ್ರಮಕ್ಕೆ ಜೂನ್ 3 ರಂದು ಬೆಳಗ್ಗೆ 6.30 ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಹಸಿರು ನಿಶಾನೆ ತೋರಲಿದ್ದು, ಮಲ್ಪೆಯ ಮಹಾತ್ಮಾ ಗಾಂಧೀ ಪ್ರತಿಮೆಯ ಬಳಿ ರ‍್ಯಾಲಿಯು ಅಂತ್ಯಗೊಳ್ಳಲಿದೆ. ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸೈಕಲಿಂಗ್ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ವ್ಯಕ್ತಿಗಳನ್ನು ಗೌರವಿಸಲಾಗುವುದು ಹಾಗೂ ಸದೃಢ ಆರೋಗ್ಯಕ್ಕೆ ಸೈಕಲಿಂಗ್ ಹೇಗೆ ಉಪಕಾರಿಯಾಗುವುದು ಎಂಬ ವಿಷಯದ ಕುರಿತು […]