ವಿಶ್ವ ಬೈಸಿಕಲ್ ದಿನಾಚರಣೆ : ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮಲ್ಪೆ ಬೀಚ್‌ವರೆಗೆ ಬೈಸಿಕಲ್ ಜಾಥಾ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ನೆಹರು ಯುವ ಕೇಂದ್ರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ವಿಶ್ವ ಬೈಸಿಕಲ್ ದಿನಾಚರಣೆಯ ಪ್ರಯುಕ್ತ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮಲ್ಪೆ ಬೀಚ್‌ವರೆಗೆ ನಡೆದ ಬೈಸಿಕಲ್ ಜಾಥಾಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಿದರು. ಜಾಥಾದಲ್ಲಿ ಡಿ.ಎಫ್.ಓ ಆಶಿಶ್ ರೆಡ್ಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸೈಕ್ಲಿಸ್ಟ್ ಗಳು ಹಾಗೂ ನಾಗರಿಕರು ಭಾಗವಹಿಸಿದ್ದರು. ಜಿಲ್ಲಾ ಯುವ ಸಮನ್ವಯಾಧಿಕಾರಿ […]

ಕಾಶ್ಮೀರಿ ಪಂಡಿತರ ಉದ್ದೇಶಿತ ಹತ್ಯೆಗೆ ಒಂದು ವರ್ಷದ ಹಿಂದೆಯೆ ರೂಪಿಸಲಾಗಿತ್ತು ಸಂಚು? ಗುಪ್ತಚರ ಮೂಲಗಳಿಂದ ಬಯಲಾಯ್ತು ಸತ್ಯ

ನವದೆಹಲಿ: ಭಾರತೀಯ ಗುಪ್ತಚರ ಸಂಸ್ಥೆಗಳ ಮೂಲಗಳ ಪ್ರಕಾರ ಕಾಶ್ಮೀರದಲ್ಲಿ ಪಂಡಿತರ ಉದ್ದೇಶಿತ ಹತ್ಯೆಗೆ ಕಳೆದ ವರ್ಷದ ಸೆಪ್ಟಂಬರ್ ನಲ್ಲಿ ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಪಾಕ್ ಆಕ್ರಮಿತ ಕಾಶ್ಮೀರದ ಮುಜ಼ಫ್ಫರಾಬಾದ್ ನಲ್ಲಿ ಕುಳಿತು ಈ ಹತ್ಯೆಗೆ ಉಗ್ರರು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. 21 ಸೆಪ್ಟಂಬರ್ 2021 ರಂದು ಮುಜ಼ಫ್ಫರಾಬಾದ್ ನಲ್ಲಿ ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐ ಎಸ್ ಐ ನ ಉನ್ನತ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಿಒಕೆಯ ಭಯೋತ್ಪಾದಕ ಸಂಘಟನೆಗಳ ಜೊತೆಗೂಡಿ ಕಾಶ್ಮೀರ ಪಂಡಿತರ ಉದ್ದೇಶಿತ […]

ಶಾಲಾ ಆರೋಗ್ಯ ಕಾರ್ಯಕ್ರಮ: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನಡುವೆ ಒಪ್ಪಂದ

ಮಣಿಪಾಲ: ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ಮತ್ತು ಉಡುಪಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವೆ ಜೂನ್ 2 ರಂದು ಶಾಲಾ ಆರೋಗ್ಯ ಕಾರ್ಯಕ್ರಮದಡಿ ಉಡುಪಿಯ ಮಕ್ಕಳಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಾಗಿ ತಿಳಿವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕ ಇದರ ಅಡಿಯಲ್ಲಿ ವಿಶೇಷ ಅಗತ್ಯವಿರುವ ಮಕ್ಕಳಿಗಾಗಿ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಲಾಗಿರುವ ತರಬೇತಿ ಕೇಂದ್ರದ ಸರ್ವತೋಮುಖ ಸುಧಾರಣೆಯನ್ನು ಕೈಗೊಳ್ಳಲು ಬಯಸಿದ್ದು, ಮಣಿಪಾಲ ಕಾಲೇಜ್ ಆಫ್ ಹೆಲ್ತ್ […]

ಚರ್ಮರೋಗ ಪೀಡಿತನ ಆಧಾರ್ ಕಾರ್ಡ್ ಸಮಸ್ಯೆಗೆ ಒಂದೇ ಟ್ವೀಟ್ ನಿಂದ ದೊರಕಿತು ನಾಲ್ಕೇ ದಿನಗಳಲ್ಲಿ ಪರಿಹಾರ!

ಮಂಡ್ಯ : ಬಗೆಯರಿಯದೇ ಉಳಿದಿದ್ದ ಆಧಾರ್ ಕಾರ್ಡ್ ಸಮಸ್ಯೆಯೊಂದು ಕೇವಲ ಒಂದೇ ಟ್ವೀಟ್ ನಿಂದ ನಾಲ್ಕೇ ದಿನಗಳಲ್ಲಿ ಬಗೆಹರಿದಿದೆ. ಮಂಡ್ಯದ ತಂಡಸನಹಳ್ಳಿಯ ನೂತನ್ ಎನ್ನುವ ಯುವಕ ವಿಚಿತ್ರ ಚರ್ಮ ರೋಗದಿಂದ ಬಳಲುತ್ತಿದ್ದು, ಆತನ ಆಧಾರ್ ಕಾರ್ಡ್ ಲಭ್ಯವಿರಲಿಲ್ಲವಾದ್ದರಿಂದ ಆತನಿಗೆ ಸರಕಾರದ ಯಾವುದೇ ಸವಲತ್ತುಗಳು ದೊರೆಯುತ್ತಿರಲಿಲ್ಲ. ನೂತನ್ ನ ಈ ಸಮಸ್ಯೆಯ ಬಗ್ಗೆ ಯುವ ರೈತ ಮುಖಂಡ, ‘ಸಾವಯವ ಮಂಡ್ಯ’ದ ಸಿಇಒ ಮತ್ತು ಸಂಸ್ಥಾಪಕ ಮಧುಚಂದನ್ ಎಸ್ ಸಿ ಗಮನಹರಿಸಿದ್ದಾರೆ. ಮಧುಚಂದನ್ ಈ‌ ಬಗ್ಗೆ ಟ್ವೀಟ್ ಮಾಡಿ ನೂತನ್ […]

ಹಿಂದೂಗಳನ್ನು ಗುರಿಯಾಗಿಸಿ ಉದ್ದೇಶಿತ ಹತ್ಯೆ: ಕಾಶ್ಮೀರದಿಂದ ಮತ್ತೊಮ್ಮೆ ಪಂಡಿತರ ಪಲಾಯನ

ನವದೆಹಲಿ: ಉದ್ದೇಶಿತ ಹತ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಶ್ಮೀರಿ ಪಂಡಿತರು ಸೇರಿದಂತೆ ಕಾಶ್ಮೀರದಲ್ಲಿ ವಾಸಿಸುವ ಹಿಂದೂಗಳು ಕಣಿವೆಯನ್ನು ತೊರೆಯುತ್ತಿದ್ದಾರೆ ಎಂದು ವರದಿಯಾಗಿದೆ. ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ (ಜೂನ್ 2) ರಾಜಸ್ಥಾನದ ಬ್ಯಾಂಕ್ ಉದ್ಯೋಗಿಯನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಮೇ 1 ರಿಂದ ಇಂದಿನವರೆಗೆ ಇದು ಕಣಿವೆಯಲ್ಲಿ ನಡೆದ ಎಂಟನೇ ಮತ್ತು ಮುಸ್ಲಿಮೇತರ ಮೂರನೆ ಸರ್ಕಾರಿ ನೌಕರನ ಉದ್ದೇಶಿತ ಹತ್ಯೆಯಾಗಿದೆ. ಮಂಗಳವಾರ (ಮೇ 31) ಕುಲ್ಗಾಮ್ ಜಿಲ್ಲೆಯಲ್ಲಿ ಮಹಿಳಾ ಶಿಕ್ಷಕಿಯನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದ ಕೆಲವೇ ಗಂಟೆಗಳ ನಂತರ, […]