ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ ಪ್ರಯುಕ್ತ ಪ್ರತಿಭಾನ್ವಿತರ ಅಭಿನಂದನಾ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐ.ಟಿ.ಡಿ.ಪಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕೊರಗ ಸಂಘಟನೆ ಉಡುಪಿ ಇವರ ಸಹಯೋಗದೊಂದಿಗೆ ‘ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ, 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ, ಮಕ್ಕಳ ಮಾನಸಿಕ ಆರೋಗ್ಯದ ಕುರಿತು ಆತ್ಮ ಸಮಾಲೋಚನೆ ಹಾಗೂ ಎಸ್.ಎಸ್.ಎಲ್.ಸಿ ನಂತರ ಮುಂದೇನು ಎಂಬ ವಿಷಯದ ಕುರಿತ ಮಾಹಿತಿ ಕಾರ್ಯಾಗಾರವು ಶನಿವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ […]

ಮಾಹೆ: ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಡೋಪಿಂಗ್ ಕುರಿತು ಕಾರ್ಯಾಗಾರ

ಮಣಿಪಾಲ: ರಾಷ್ಟ್ರೀಯ ಶೈಕ್ಷಣಿಕ ನೀತಿ (NEP) 2020 ರ ಅನುಷ್ಠಾನದ ಭಾಗವಾಗಿ, ಕ್ರೀಡೆ ಮತ್ತು ಶಿಕ್ಷಣವನ್ನು ಹತ್ತಿರ ತರಲು, ಮಾಹೆಯ ಸೆಂಟರ್ ಫಾರ್ ಫಾರ್ಮಾಸ್ಯುಟಿಕಲ್ ಸ್ಕಿಲ್ ಡೆವಲಪ್ ಮೆಂಟ್ ಉಡುಪಿಯ ಎಲ್ಲಾ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರಿಗೆ ಅರ್ಧ ದಿನದ ಡೋಪಿಂಗ್ ಕಾರ್ಯಾಗಾರವನ್ನು ಆಯೋಜಿಸಿತ್ತು. ಕ್ರೀಡೆಯಲ್ಲಿ ಮಾದಕ ದ್ರವ್ಯ ಬಳಕೆಯ ಬಗ್ಗೆ ಶಿಕ್ಷಕರ ದೃಷ್ಟಿಕೋನ ಮತ್ತು ಮಾದಕ ದ್ರವ್ಯ ಸೇವನೆಯಿಂದ ಕ್ರೀಡಾಪಟುಗಳ ಜೀವನದ ಮೇಲಾಗುವ ಪರಿಣಾಮ ಇದು ಕಾರ್ಯಗಾರದ ಧ್ಯೇಯವಾಗಿತ್ತು. ಮಾಹೆಯ ಉಪಕುಲಪತಿ ಲೆಫ್ಟಿನೆಂಟ್ ಜನರಲ್ ಡಾ.ಎಂ. […]

ಕನ್ನಡ ಪುಸ್ತಕ ಪ್ರಾಧಿಕಾರದ 2021 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟನೆ

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ 2021 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಶನಿವಾರ ಪ್ರಕಟಿಸಿದರು. 2021 ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿ ವಿಜೇತರು: ಅತ್ಯುತ್ತಮ ಪ್ರಕಾಶನ ಪ್ರಶಸ್ತಿ- ಬೆಂಗಳೂರು ರಾಷ್ಟ್ರೋತ್ಥಾನ ಸಾಹಿತ್ಯ, ಡಾ. ಎಂ.ಎಂ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ- ಧಾರವಾಡದ ಡಾ. ಗುರುಲಿಂಗ ಕಾಪಸೆ, ಡಾ. ಜೆ.ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ- ಮೂಡಬಿದರೆಯ ಡಾ. ಮೋಹನ ಆಳ್ವ ಹಾಗೂ ಡಾ. ಅನುಪಮಾ […]

ಜೂನ್ 6: ಜಿಲ್ಲಾಧಿಕಾರಿ ಕಚೇರಿಯ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ

ಉಡುಪಿ: ಟೆಸ್ಟಾ ಪ್ರಿಂಟ್ಸ್ ಪ್ರೈ. ಲಿ, ಓಮ್ನಿಯನ್ ಪ್ರೀಮಿಡಿಯಂ ಪ್ರೈ.ಲಿ, ರಿಲಯನ್ಸ್ ಜಿಯೋ ಇನ್ಪೋಕಾಮ್ ಪ್ರೈ.ಲಿ, ಪ್ರಕಾಶ ರೀಟೈಲ್ ಪ್ರೈ.ಲಿ ಹಾಗೂ ಮೇಡ್ ಪ್ಲಾಸ್ ಪ್ರೈ.ಲಿ ವತಿಯಿಂದ ಜೂನ್ 6 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಡಿಗ್ರಿ, ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಡಿಪ್ಲೋಮಾ ಇನ್ ಮೆಕ್ಯಾನಿಕಲ್, […]

ಆಜಾದಿ ಕಾ ಅಮೃತ್ ಮಹೋತ್ಸವ ಐಕಾನಿಕ್ ವೀಕ್ ಆಚರಣೆ: ಕೆನರಾ ಬ್ಯಾಂಕ್ ಸಿಂಡಿಕೇಟ್ ಗೋಲ್ಡನ್ ಜ್ಯೂಬಿಲಿ ಹಾಲ್‌ನಲ್ಲಿ ನೇರಪ್ರಸಾರ

ಉಡುಪಿ: ನವದೆಹಲಿಯ ವಿಜ್ಞಾನ ಭವನ್‌ನಲ್ಲಿ ನಡೆಯುವ ಆಜಾದಿ ಕಾ ಅಮೃತ್ ಮಹೋತ್ಸವ ಐಕಾನಿಕ್ ವೀಕ್ ಸೆಲೆಬ್ರೇಷನ್ ಕಾರ್ಯಕ್ರಮವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 6 ರಂದು ಉದ್ಘಾಟಿಸಲಿದ್ದಾರೆ. ಭಾರತದ ಹಣಕಾಸು ಸಚಿವಾಲಯ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಮತ್ತು ಭಾರತ ಸರಕಾರದ ವತಿಯಿಂದ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ಭಾರತದಾದ್ಯಂತ ಸುಮಾರು 75 ಜಿಲ್ಲೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತಿದ್ದು, ಕರ್ನಾಟಕದಿಂದ ಉಡುಪಿ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ. ನೇರ ಪ್ರಸಾರ ಕಾರ್ಯಕ್ರಮವನ್ನು ಲೀಡ್ ಬ್ಯಾಂಕ್ ಕೆನರಾ ಬ್ಯಾಂಕ್ ಉಡುಪಿ, ಇವರ […]