ಕಡಲ ತೀರ ಸ್ವಚ್ಛತೆಗಾಗಿ ಪಂಚಾಯತ್ ಪಿಡಿಒಗಳು ಶಾಶ್ವತ ವ್ಯವಸ್ಥೆ ಕೈಗೊಳ್ಳಿ: ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಉಡುಪಿ: ಕಡಲು ಮತ್ತು ನದಿ ತೀರ ವ್ಯಾಪ್ತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಡುಪಿ ಜಿಲ್ಲೆಯ ಕಡಲತೀರಗಳನ್ನು ಪ್ರತಿ ನಿತ್ಯ ಸ್ವಚ್ಛ ಮತ್ತು ಸುಂದರವಾಗಿಡಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವ ಶಾಶ್ವತ ವ್ಯವಸ್ಥೆಯನ್ನು ರೂಪಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಅಧಿಕಾರಿಗಳಿಗೆ ಸೂಚಿಸಿದರು. ಅವರು ಶನಿವಾರ ಜಿ.ಪಂ. ಸಭಾಂಗಣದಲ್ಲಿ ಜಿಲ್ಲೆಯ ಕಡಲ ತೀರಗಳಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಕುರಿತಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಒಟ್ಟು […]

ಬ್ರಹ್ಮಾವರ: ವಿದ್ಯಾಲಕ್ಷ್ಮಿ ಗ್ರೂಪ್ ಆಫ್ ಇನ್ಸ್ ಟಿಟ್ಯೂಟ್ ನಲ್ಲಿ ಪರಿಸರ ದಿನಾಚರಣೆ

ಬ್ರಹ್ಮಾವರ: ಬ್ರಹ್ಮಾವರ ವಿದ್ಯಾಲಕ್ಷ್ಮಿ ಗ್ರೂಪ್ ಆಫ್ ಇನ್ಸ್ ಟಿಟ್ಯೂಟ್ ಸಂಸ್ಥೆಯಲ್ಲಿ, ಪರಿಸರ ದಿನಾಚರಣೆಯ ಅಂಗವಾಗಿ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಇದರ ಜೊತೆಗೆ ಪರಿಸರ ದಿನದ ಹಿನ್ನೆಲೆಯಲ್ಲಿ ರಸಪ್ರಶ್ನೆ ಮತ್ತು ತರಗತಿ ಕೊಠಡಿಯ ಅಲಂಕಾರದಂತಹ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿದ್ಯಾರ್ಥಿಗಳು ತಾವೇ ಖುದ್ದಾಗಿ ನಿರ್ಮಿಸಿದ ವಸ್ತುಗಳನ್ನು ಉಪಯೋಗಿಸಿ ಕೊಠಡಿಯ ಅಲಂಕಾರ ಕೈಗೊಂಡರು. ಕಸದಿಂದ ರಸ ಅನ್ನುವ ಪರಿಕಲ್ಪನೆಯನ್ನು ಅಳವಡಿಸಿಕೊಂಡು ಪರಿಸರ ಸಂರಕ್ಷಣೆಯ ಹಾದಿಯಲ್ಲಿ ಸಂಸ್ಥೆಯು ಹೆಜ್ಜೆ ಇಟ್ಟಿದ್ದು ಸಮಾಜದಲ್ಲಿ ಉತ್ತಮ ಮಾದರಿಯಾಗಿದೆ. ಈ […]

ಬೆಂಗಳೂರು: ನಗರದ ಸಮಸ್ಯೆಗಳ ಕುರಿತು ಬಿಬಿಎಂಪಿ ಅಧಿಕಾರಿಗಳ ಜೊತೆ ನಟ ಅನಿರುದ್ದ್ ಚರ್ಚೆ

ಬೆಂಗಳೂರು: ಶನಿವಾರ ನಮ್ಮ ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಅವರ ತಂಡದೊಡನೆ ಚಿತ್ರನಟ ಅನಿರುದ್ದ್ ಚರ್ಚೆ ನಡೆಸಿದ್ದಾರೆ. ಬೆಂಗಳೂರು ನಗರ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ ಅನಿರುದ್ದ್, ಬಿಬಿಎಂಪಿ ಎದುರು ಕೆಲವು ಸಲಹೆಗಳನ್ನು ಮುಂದಿಟ್ಟಿದ್ದಾರೆ. ಘನತ್ಯಾಜ್ಯ ನಿರ್ವಹಣೆ, ಸುರಕ್ಷತೆ, ಹಸಿರು ಹೊದಿಕೆಯ ಹೆಚ್ಚಳ ಮತ್ತು ಆರೋಗ್ಯ ಹಾಗೂ ನೈರ್ಮಲ್ಯ, ಕೆರೆಗಳ ಪುನರುಜ್ಜೀವನ ಮುಂತಾದ ವಿಷಯಗಳ ಕುರಿತು ಸಮಾನ ಸಂಖ್ಯೆಯ ಮಹಿಳೆಯರನ್ನೊಳಗೊಂಡ ವಿಜ್ಞಾನಿಗಳು, ಇಂಜಿನಿಯರ್ ಗಳು, ನಗರ ಯೋಜಕರು, […]

ಉಡುಪಿ ಸೀನಿಯರ್ ಛೇಂಬರ್ ನಿಂದ ಅನಾಥಾಶ್ರಮಕ್ಕೆ ಬೆಡ್ ಶೀಟ್ ಕೊಡುಗೆ

ಉಡುಪಿ: ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ವತಿಯಿಂದ ಸಮುದಾಯ ಸೇವಾ ಕಾರ್ಯಕ್ರಮದ ಅಂಗವಾಗಿ ಬ್ರಹ್ಮಾವರದ ಅಪ್ಪ-ಅಮ್ಮ ಅನಾಥಾಲಯಕ್ಕೆ ಅಗತ್ಯವಿದ್ದ ಬೆಡ್ ಶೀಟ್ ಗಳನ್ನು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಪ್ರಶಾಂತ್ ಪೂಜಾರಿ ಇವರಿಗೆ ಹಸ್ತಾಂತರಿಸಲಾಯಿತು. ಸೀನಿಯರ್ ಛೇಂಬರ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ ಅಧ್ಯಕ್ಷ ಜಗದೀಶ್ ಕೆಮ್ಮಣ್ಣು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸೀನಿಯರ್ ಛೇಂಬರಿನ ಸಮುದಾಯ ಅಭಿವೃದ್ದಿ ಕಾರ್ಯಕ್ರಮದ ರಾಷ್ಟ್ರೀಯ ನಿರ್ದೇಶಕ ಚಿತ್ರಕುಮಾರ್, ಕರ್ನಾಟಕ ಬೆಳವಣಿಗೆ ಮತ್ತು ಅಭಿವೃದ್ದಿ ವಿಭಾಗದ ಸಂಯೋಜಕ […]

ಆರ್.ಎಸ್.ಎಸ್ ಸಮವಸ್ತ್ರ ಸುಡುವ ಅಭಿಯಾನ: ಸಿದ್ದರಾಮಯ್ಯ ಹೇಳಿಕೆ ಖಂಡಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್

ಉಡುಪಿ: ಜಗತ್ತಿನ ಅತೀ ದೊಡ್ಡ ಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಮವಸ್ತ್ರ ಸುಡುವ ಅಭಿಯಾನ ಆರಂಭಿಸುವ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ರಾಜ್ಯ ಬಿಜೆಪಿ  ಉಪಾಧ್ಯಕ್ಷೆ ನಯನಾ ಗಣೇಶ್ ಖಂಡಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಳೆದ 97 ವರ್ಷಗಳಿಂದ ಸಾಮಾಜಿಕ ಸಂಘಟನೆಯಾಗಿ ಸಮಾಜದಲ್ಲಿ ಸಮರ್ಪಣಾ ಭಾವದಿಂದ ಕೆಲಸ ಮಾಡುತ್ತ ಬಂದಿದೆ. ದೇಶದ ಸಂಕಷ್ಟ ಸಮಯದಲ್ಲಿ, ಪ್ರಾಕೃತಿಕ ಅವಘಡಗಳಾದಾಗ ಮತ್ತು ಕೊರೊನಾದಂತಹ ಪರಿಸ್ಥಿತಿಗಳಲ್ಲಿ ಜೀವದ ಹಂಗು ತೊರೆದು ಸಂಘದ ಸ್ವಯಂ ಸೇವಕರು ಸೇವೆ […]