ಶ್ರೀ ಶಾರದ ಟ್ರೈನಿಂಗ್ ಇನ್ಸ್ಟಿಟ್ಯೂಟ್: ಮಾಂಟೆಸ್ಸರಿ/ ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸಿಗೆ ಪ್ರವೇಶಾರಂಭ

ಮಣಿಪಾಲ: ಭಾರತ ಸರಕಾರದ ಪ್ರತಿನಿಧಿಯಾದ ಭಾರತ್ ಸೇವಕ್ ಸಮಾಜ್‌ ಇದರ ಆಶ್ರಯದಲ್ಲಿ ನಡೆಸಲ್ಪಡುವ ಮಣಿಪಾಲದ ‘ಶ್ರೀ ಶಾರದ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ 1 ವರ್ಷದ ಡಿಪ್ಲೊಮಾ ಇನ್ ಮಾಂಟೆಸ್ಸರಿ/ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸಿಗೆ ಪಿಯುಸಿ, ಡಿಗ್ರಿ ಮೇಲ್ಪಟ್ಟ ವಿದ್ಯಾಭ್ಯಾಸ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ ಪಡೆಯುವಲ್ಲಿ ಸಹಕಾರ ನೀಡುತ್ತದೆ. ತರಬೇತಿ ಮುಗಿಸಿದ ಸುಮಾರು 350 ಕ್ಕೂ ಹೆಚ್ಚು […]

ರಾಜ್ಯಾದ್ಯಂತದ ಅಂಗನವಾಡಿಗಳಲ್ಲಿ ಮೊದಲನೆ ಹಂತದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಶಿಕ್ಷಣ ಸಚಿವ

ಬೆಂಗಳೂರು: ಶಾಲಾ ಶಿಕ್ಷಣದಲ್ಲಿ ಎನ್‌ಇಪಿ ಜಾರಿಗೊಳಿಸುವ ಕುರಿತು ರಾಜ್ಯ ಸರ್ಕಾರವು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ 26 ಸ್ಥಾನಮಾನ ಪತ್ರಗಳನ್ನು ಸಲ್ಲಿಸಿದೆ. ವಸತಿ ಸಚಿವ ವಿ ಸೋಮಣ್ಣ ತಮ್ಮ ಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಈ ವಿಷಯ ಪ್ರಕಟಿಸಿದ್ದಾರೆ. “ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಿದ್ದು, ಮೊದಲ ಹಂತದಲ್ಲಿ ರಾಜ್ಯಾದ್ಯಂತದ ಅಂಗನವಾಡಿಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ಮುಂದಿನ ಹಂತದಲ್ಲಿ ಎನ್‌ಇಪಿ ಅನ್ನು ಪ್ರಾಥಮಿಕ […]

ಸಂಖ್ಯಾಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸುಹಾಸ್ ಗೆ ಪಿಎಚ್.ಡಿ ಪದವಿ

ಉಡುಪಿ: ಕರ್ನಾಟಕ ವಿಶ್ವ ವಿದ್ಯಾಲಯ ಧಾರವಾಡ, ಇದರ ಸಂಖ್ಯಾಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸುಹಾಸ್ ಮಂಡಿಸಿದ “ಎ ಸ್ಟದಿ ಆನ್ ಡಿಸೈನ್ ಆಂಡ್ ಅನಾಲಿಸಿಸ್ ಆಫ್ ಸರ್ವೈವಲ್ ಪ್ರೊಬ್ಯಾಬಿಲಿಟಿ ಮಾಡೆಲ್ಸ್” ಮಹಾಪ್ರಬಂಧಕ್ಕೆ “ಡಾಕ್ಟರ್ ಆಫ್ ಪಿಎಚ್.ಡಿ” ಪದವಿ ದೊರಕಿದೆ. ಸುಹಾಸ್ ಕೆವಿವಿಯ ಸಂಖ್ಯಾಶಾಸ್ತ್ರ ಪ್ರಾಧ್ಯಾಪಕಿ ಡಾ. ಶ್ರೀಮತಿ ಎಸ್.ಬಿ ಮುನೋಲಿ ಇವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದಾರೆ. ಇವರು ಉಡುಪಿಯ ಗುಂಡಿಬೈಲು ಹಿರಿಯ ಪ್ರಾಥಮಿಕ ಶಾಲೆಯಿಂದ ಪ್ರಾಥಮಿಕ ಶಿಕ್ಷಣವನ್ನು, ಒಳಕಾಡು ಸಂಯುಕ್ತ ಹಿರಿಯ ಪ್ರಾಥಮಿಕ ಶಾಲೆಯಿಂದ ಪ್ರೌಢ ಶಿಕ್ಷಣವನ್ನು, […]

ಪುಟಾಣಿ ಮಕ್ಕಳೊಂದಿಗೆ ನಿಸರ್ಗದ ಮಡಿಲಲ್ಲಿ ವಿಶ್ವ ಪರಿಸರ ದಿನಾಚರಣೆ

ಉಡುಪಿ: ನಿಸರ್ಗದ ಮಡಿಲಲ್ಲಿ ಸಸಿಗಳನ್ನು ನೆಟ್ಟ ಪುಟಾಣಿಗಳು. ಬಳಿಕ ಹಚ್ಚ ಹಸುರಿನ ಹೊದಿಕೆಯಲ್ಲಿ ಕುಳಿತು ಹಕ್ಕಿಗಳ ಕಲರವದ ನಡುವೆ ಹಿರಿಯ ಪರಿಸರತಜ್ಞರ ಮಾತು.  ಉಡುಪಿ ಕುಕ್ಕಿಕಟ್ಟೆಯ ಶ್ರೀ ಕೃಷ್ಣ ಬಾಲನಿಕೇತನದ ವಠಾರದಲ್ಲಿ ಭಾನುವಾರ ಆರ್ಗನೈಸೇಷನ್ ಫಾರ್ ರೂರಲ್ ಡೆವಲಪ್ಮೆಂಟ್ ಆಂಡ್ ರಿಸರ್ಚ್, ಚೈಲ್ಡ್ ಲೈನ್ 1098 ಉಡುಪಿ, ಇಂಟರಾಕ್ಟ್ ಕ್ಲಬ್ ಮತ್ತು ಶ್ರೀ ಕೃಷ್ಣ ಬಾಲನಿಕೇತನ ಜಂಟಿ ಆಶ್ರಯದಲ್ಲಿ ವಿಶಿಷ್ಟವಾಗಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಪರಿಸರತಜ್ಞ ಮತ್ತು ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಎನ್.ಎ. […]

ಕೇರಳದಲ್ಲಿ ಮತ್ತೊಂದು ಸಾಂಕ್ರಾಮಿಕ: ರಾಜ್ಯದಲ್ಲಿ ನೊರೊವೈರಸ್ ನ ಎರಡು ಪ್ರಕರಣಗಳು ದೃಢ

ತಿರುವನಂತಪುರಂ: ರೋಟವೈರಸ್‌ನಂತೆಯೇ ಅತಿಸಾರವನ್ನು ಉಂಟುಮಾಡುವ ನೊರೊವೈರಸ್ ಸೋಂಕು ಇಲ್ಲಿನ ಇಬ್ಬರು ಮಕ್ಕಳಲ್ಲಿ ದೃಢಪಟ್ಟಿದೆ ಎಂದು ಕೇರಳ ಸರ್ಕಾರ ಭಾನುವಾರ ತಿಳಿಸಿದೆ. ಆರೋಗ್ಯ ಇಲಾಖೆಯು ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿದ್ದು, ಕಲುಷಿತ ನೀರು ಮತ್ತು ಆಹಾರದ ಮೂಲಕ ವೈರಸ್ ಹರಡುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಈ ರೋಗವು ಹೆಚ್ಚು ಸಾಂಕ್ರಾಮಿಕವಾಗಿದ್ದು, ಜನರು ನೈರ್ಮಲ್ಯವನ್ನು ಕಾಪಾಡಿಕೊಳ್ಳುವಂತೆ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಒತ್ತಾಯಿಸಿದ್ದಾರೆ. ಇಬ್ಬರು ಮಕ್ಕಳಲ್ಲಿ ನೊರೊವೈರಸ್ ಸೋಂಕು ಪತ್ತೆಯಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ, […]