2006ರ ವಾರಣಾಸಿ ಸಂಕಟ ಮೋಚನ ಮಂದಿರ ಮತ್ತು ರೈಲ್ವೇ ಛಾವಣಿ ಸರಣಿ ಸ್ಫೋಟ ಪ್ರಕರಣದ ಆರೋಪಿಗೆ ಮರಣದಂಡನೆ ಶಿಕ್ಷೆ

ಉತ್ತರ ಪ್ರದೇಶ: 2006ರ ವಾರಣಾಸಿ ಸರಣಿ ಸ್ಫೋಟ ಪ್ರಕರಣದಲ್ಲಿ ತಪ್ಪಿತಸ್ಥನೆಂದು ಸಾಬೀತಾದ ಭಯೋತ್ಪಾದಕ ವಲಿಯುಲ್ಲಾಗೆ ಗಾಜಿಯಾಬಾದ್ ನ್ಯಾಯಾಲಯವು ಶನಿವಾರ ಮರಣದಂಡನೆ ವಿಧಿಸಿದೆ. ಮಾರ್ಚ್ 7, 2006 ರಂದು, ಉತ್ತರ ಪ್ರದೇಶದ ವಾರಣಾಸಿಯ ಸಂಕಟ ಮೋಚನ ದೇವಸ್ಥಾನ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಸರಣಿ ಸ್ಫೋಟಗಳು ಸಂಭವಿಸಿ ಕನಿಷ್ಠ 20 ಜನರನ್ನು ಬಲಿಯಾಗಿದ್ದರು ಮತ್ತು ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಅದೇ ದಿನ ಸಂಜೆ ದಶಾಶ್ವಮೇಧ ಘಾಟ್‌ನಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದವು. ಘಟನೆ ನಡೆದ ತಿಂಗಳ ಬಳಿಕ, ವಾರಣಾಸಿ ಪೊಲೀಸರು […]
ಜಮ್ಮು ಮತ್ತು ಕಾಶ್ಮೀರ: ಕುಪ್ವಾರ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಒಬ್ಬ ಸೇರಿದಂತೆ 2 ಎಲ್‌ಇಟಿ ಭಯೋತ್ಪಾದಕರನ್ನು ಮಟ್ಟ ಹಾಕಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಮಟ್ಟಹಾಕಿದೆ. ಇಬ್ಬರೂ ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಇ ತೈಬಾ (ಎಲ್‌ಇಟಿ) ಗೆ ಸೇರಿದವರು ಮತ್ತು ಇಬ್ಬರಲ್ಲಿ ಒಬ್ಬ ತುಫೈಲ್, ಪಾಕಿಸ್ತಾನದವನಾಗಿದ್ದಾನೆ ಎಂದು ವರದಿಗಳು ತಿಳಿಸಿವೆ. ಇನ್ನಷ್ಟು ಉಗ್ರರಿಗಾಗಿ ಶೋಧ ಮುಂದುವರಿದಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಕುಪ್ವಾರದ ಚಕ್ರಸ್ ಕಂಡಿ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದೆ. ಸೋಮವಾರ ಮುಂಜಾನೆ, ಸೋಪೋರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ […]
ಮಂಗಳೂರಿನಲ್ಲಿ ಗ್ರೀನ್ ಹೈಡ್ರೋಜನ್, ಸೋಲಾರ್ ಘಟಕ ಸ್ಥಾಪನೆ: ಆಕ್ಮೆ ಕಂಪನಿ ಜೊತೆ 52000 ಕೋಟಿ ರೂ. ಹೂಡಿಕೆ ಒಪ್ಪಂದ

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಬೊಮ್ಮಾಯಿ ಸೋಮವಾರ ಆಕ್ಮೆ(ACME) ಕ್ಲೀನ್ಟೆಕ್ ಸೊಲುಷನ್ ಪ್ರೈವೇಟ್ ಲಿಮಿಟೆಡ್ ಗ್ರೂಪ್ ಜೊತೆ ಮಂಗಳೂರಿನಲ್ಲಿ 52000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಕಂಪೆನಿಯು ಮಂಗಳೂರಿನಲ್ಲಿ ಗ್ರೀನ್ ಹೈಡ್ರೋಜನ್, ಅಮೋನಿಯಾ ಘಟಕ ಸ್ಥಾಪನೆ ಹಾಗೂ ಪೂರಕವಾಗಿ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆಗೆ ಕರ್ನಾಟಕ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ. ಇಂಧನ ಸಚಿವ ಸುನಿಲ್ ಕುಮಾರ್, ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. […]
ಜೂ. 13 ರಂದು ಮಂಗಳೂರಿನಲ್ಲಿ ಮಾಜಿ ಸೈನಿಕರು ಹಾಗೂ ವೀರ ನಾರಿಯರೊಂದಿಗೆ ಮೌಖಿಕ ಸಂವಾದ

ಮಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರಿನಲ್ಲಿ ಜೂ. 13 ರಂದು ಬೆಳಗ್ಗೆ 10.30 ಗಂಟೆಗೆ ಮದ್ರಾಸ್ ರೆಜಿಮೆಂಟಿನ ತಂಡದವರು ಸದರಿ ರೆಜಿಮೆಂಟಿನ ಮಾಜಿ ಸೈನಿಕರು ಹಾಗೂ ವೀರ ನಾರಿಯರೊಂದಿಗೆ ಮೌಖಿಕ ಸಂವಾದವನ್ನು ನಡೆಸಲಿದ್ದು, ಮದ್ರಾಸ್ ರೆಜಿಮೆಂಟಿನ ಎಲ್ಲಾ ಮಾಜಿ ಸೈನಿಕರು ಹಾಗೂ ವೀರ ನಾರಿಯರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಜಂಟಿ ನಿರ್ದೇಶಕರ ಕಾರ್ಯಾಲಯ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.