ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆ: ಸಮಗ್ರ ದ್ವಿತೀಯ ಸ್ಥಾನ ಪಡೆದ ಜಿಲ್ಲಾ ತಂಡ

ಉಡುಪಿ: ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಮೇ 30 ರಿಂದ ಜೂನ್ 1 ರ ವರೆಗೆ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಜಿಲ್ಲೆಯಿಂದ ಒಟ್ಟು 76 ನೌಕರರು ಭಾಗವಹಿಸಿ, 14 ಚಿನ್ನ, 8 ಬೆಳ್ಳಿ ಹಾಗೂ 8 ಕಂಚಿನೊಂದಿಗೆ ಸಮಗ್ರ ತಂಡ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.   ವಿಜೇತ ಕ್ರೀಡಾಪಟುಗಳ ವಿವರ : ನ್ಯಾಯಾಂಗ ಇಲಾಖೆಯ ವಾಣಿ-ಈಜು ಸ್ಪರ್ಧೆಯಲ್ಲಿ 3 ಚಿನ್ನ, ಮಂಜುಳಾ-2 ಕಂಚು, ಲಿನಿ ಉದ್ದ […]

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರ್ದೇಶನದ ವಿರುದ್ದ ಮೇಲ್ಮನವಿ: ಸಿಆರ್‌ಝಡ್ ಮರಳು ಪರವಾನಿಗೆದಾರರ ಒಕ್ಕೂಟ ಚಿಂತನೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮರಳು ತೆಗೆಯುವ ಕುರಿತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್‌ಜಿಟಿ) ಸರ್ಕಾರಕ್ಕೆ ನೀಡಿರುವ ನಿರ್ದೇಶನದ ವಿರುದ್ಧ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ದಕ್ಷಿಣ ಕನ್ನಡ ಜಿಲ್ಲಾ ಸಿಆರ್‌ಝಡ್ ಮರಳು ಪರನಾನಿಗೆದಾರರ ಒಕ್ಕೂಟದ ಸದಸ್ಯರು ಚಿಂತನೆ ನಡೆಸುತ್ತಿದ್ದಾರೆ ಎಂದು  ಫೆಡರೇಶನ್ ಸಲಹೆಗಾರ ಮಯೂರ್ ಉಳ್ಳಾಲ್ ಹೇಳಿದ್ದಾರೆ. ಜೂನ್ 9 ರಂದು ಉಡುಪಿಯಲ್ಲಿ, ಉಡುಪಿ ಮತ್ತು ಕಾರವಾರದ ಮರಳು ಪರವಾನಗಿದಾರರ ಸಭೆ ಕರೆದು ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧರಿಸಲಾಗುವುದು ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಸಿಆರ್‌ಝಡ್‌ […]

ಸರ್ಕಾರ ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಿದೆ: ಸಿಎಂ ಬೊಮ್ಮಾಯಿ

ಮೈಸೂರು: ರಾಜ್ಯ ಸರ್ಕಾರವು ಶೀಘ್ರವೇ ಲೋಕಾಯುಕ್ತರನ್ನು ನೇಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ. ಮಂಡಕಳ್ಳಿಯಲ್ಲಿರುವ ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಲೋಕಾಯುಕ್ತರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ ರಾಜ್ಯಸಭಾ ಚುನಾವಣೆಯಲ್ಲಿ ಎಲ್ಲಾ ಮೂರು ಬಿಜೆಪಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲ್ಲಲಿದ್ದಾರೆ, ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಆಫರ್‌ಗಳಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಕ್ರೆಡಿಟ್ ಕಾರ್ಡ್‌ಗಳನ್ನು ಯುಪಿಐಗೆ ಲಿಂಕ್ ಮಾಡಲು ಅನುಮತಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ರಿಸರ್ವ್ ಬ್ಯಾಂಕ್ ಬುಧವಾರ ಕ್ರೆಡಿಟ್ ಕಾರ್ಡ್‌ಗಳನ್ನು ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ನೊಂದಿಗೆ ಲಿಂಕ್ ಮಾಡಲು ಅವಕಾಶ ಮಾಡಿಕೊಟ್ಟಿದೆ. ಇದು ಯುಪಿಐ ಪ್ಲಾಟ್‌ಫಾರ್ಮ್ ಅನ್ನು ಬಳಸಿಕೊಂಡು ಪಾವತಿಗಳನ್ನು ಮಾಡಲು ಇನ್ನೂ ಹೆಚ್ಚಿನ ಜನರಿಗೆ ಅನುವು ಮಾಡಿಕೊಡಲಿದೆ. ಪ್ರಸ್ತುತ, ಯುಪಿಐ ಬಳಕೆದಾರರ ಡೆಬಿಟ್ ಕಾರ್ಡ್‌ಗಳ ಮೂಲಕ ಉಳಿತಾಯ ಅಥವಾ ಚಾಲ್ತಿ ಖಾತೆಗಳನ್ನು ಲಿಂಕ್ ಮಾಡುವ ಮೂಲಕ ವಹಿವಾಟುಗಳನ್ನು ನಡೆಸಲಾಗುತ್ತಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ದ್ವೈಮಾಸಿಕ ನೀತಿ ಪರಿಶೀಲನೆಯೊಂದಿಗೆ ನಿಯಂತ್ರಕ ಕ್ರಮಗಳನ್ನು ಪ್ರಕಟಿಸುವ ಸಂದರ್ಭದಲ್ಲಿ ಈ ಬಗ್ಗೆ […]

ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ: ಆಪಾದಿತ ಗಣೇಶ್ ಶೆಟ್ಟಿ ಜಾಮೀನ್ ಅರ್ಜಿ ತಿರಸ್ಕೃತ

ಕುಂದಾಪುರ: ಇಲ್ಲಿನ ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಆಪಾದಿತನೆಂದು ಬಂಧಿಸಲ್ಪಟ್ಟ ಮೊಳಹಳ್ಳಿ ಗಣೇಶ್ ಶೆಟ್ಟಿಯ ಜಾಮೀನು ಅರ್ಜಿಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ. ಬಹುಕೋಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಆರೋಪಿತ ವ್ಯಕ್ತಿಯು ಕಟ್ಟೆ ಭೋಜಣ್ಣವರ ಜೊತೆ ಹಣಕಾಸು ವ್ಯವಹಾರ ಹೊಂದಿದ್ದನೆನ್ನಲಾಗಿದೆ. ಮೃತ ವ್ಯಕ್ತಿಯು ತಮ್ಮ ಡೆತ್ ನೋಟಿನಲ್ಲಿ ಒಟ್ಟು ಒಂಭತ್ತು ರೂಪಾಯಿ ಕೋಟಿಗಳಷ್ಟು ಸಾಲ ಬಾಕಿ ಇರುವ ಬಗ್ಗೆ ಬರೆದುಕೊಂಡಿದ್ದರು ಮತ್ತು ಈ ಕಾರಣಕ್ಕಾಗಿಯೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದರು. […]