ಪ.ಜಾತಿ-ಪ. ಪಂಗಡದ ಪದಕ ವಿಜೇತ ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಜಿಲ್ಲೆಯಲ್ಲಿ 2021 ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾ ಪಟುಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದ್ದು, ಅರ್ಹ ಕ್ರೀಡಾ ಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂ. 20 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು […]

ಪ್ಯಾರಾ ಶೂಟಿಂಗ್ ವಿಶ್ವಕಪ್ ನಲ್ಲಿ ವಿಶ್ವ ದಾಖಲೆ ಸ್ಥಾಪಿಸಿ ಚಿನ್ನ ಗೆದ್ದ ಶೂಟರ್ ಅವನಿ ಲೇಖರಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಟೋಕಿಯೊ ಪ್ಯಾರಾಲಿಂಪಿಕ್ಸ್ ಚಾಂಪಿಯನ್ ಅವನಿ ಲೇಖರಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ ಮತ್ತು “ಐತಿಹಾಸಿಕ ಸಾಧನೆ” ಯನ್ನು ಶ್ಲಾಘಿಸಿದ್ದಾರೆ. “ಈ ಐತಿಹಾಸಿಕ ಸಾಧನೆಗಾಗಿ ಅಭಿನಂದನೆಗಳು ಅವನಿ ಲೇಖರ. ನೀವು ಯಶಸ್ಸಿನ ಹೊಸ ಉತ್ತುಂಗಗಳನ್ನು ಏರುತ್ತಿರಿ ಮತ್ತು ಇತರರನ್ನು ಪ್ರೇರೇಪಿಸುತ್ತಿರಲಿ. ನನ್ನ ಶುಭಾಶಯಗಳು” ಎಂದು ಮೋದಿ ಟ್ವೀಟಿಸಿದ್ದಾರೆ. ಶೂಟರ್ ಶ್ರೀಹರ್ಷ ದೇವರಡ್ಡಿ ತಮ್ಮ ವಿಭಾಗದಲ್ಲಿ ಚಿನ್ನ ಗೆದ್ದಿರುವುದಕ್ಕೆ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಜೂನ್ 8 ರಂದು ಫ್ರಾನ್ಸ್‌ನ ಚಟೌರೊಕ್ಸ್‌ನಲ್ಲಿ […]

ಚಾರ್ಲಿ 777: ಚಿತ್ರ ಬಿಡುಗಡೆಗೂ ಮುನ್ನವೆ ಕರ್ನಾಟಕದಾದ್ಯಂತ 100ಕ್ಕೂ ಅಧಿಕ ಪ್ರೀಮಿಯರ್‌ ಶೋ!

ಬೆಂಗಳೂರು: ಚಿತ್ರದ ಟ್ರೈಲರ್ ನಿಂದಲೆ ಸಿನಿ ರಸಿಕರ ಮನ ಸೂರೆಗೊಂಡಿದ್ದ ಚಾರ್ಲಿ 777 ಚಿತ್ರವು ಜೂನ್ 10 ರಂದು ರಾಷ್ಟ್ರಾದ್ಯಂತ ಏಕಕಾಲದಲ್ಲಿ ಬಿಡುಗಡೆಗೊಳ್ಳಲಿದ್ದು, ಅದಕ್ಕೂ ಮುನ್ನ ದೇಶದ ಹಲವೆಡೆ ಪ್ರೀಮಿಯರ್ ಶೋಗಳನ್ನು ಏರ್ಪಡಿಸಲಾಗಿತ್ತು. ದೆಹಲಿ, ಪಂಜಾಬ್, ಗುಜರಾತ್, ಕೊಲ್ಕತ್ತಾ ಸೇರಿದಂತೆ ಬಹುತೇಕ ಕಡೆಗಳಲ್ಲಿ ಪ್ರೀಮಿಯರ್ ಶೋಗಳನ್ನು ಏರ್ಪಡಿಸಿದ್ದು, ಚಲನಚಿತ್ರ ನೋಡಿದವರೆಲ್ಲಾ ಚಾರ್ಲಿಗೆ ಥಮ್ಸ್ ಅಪ್ ಎಂದಿದ್ದಾರೆ. ಇದೀಗ ಕರ್ನಾಟಕದಲ್ಲಿ ಜೂನ್ 9 ರಂದು ನೂರು ಕಡೆಗಳಲ್ಲಿ ಪ್ರೋಮಿಯರ್ ಶೋಗೆ ಏರ್ಪಾಟು ಮಾಡಲಾಗಿದ್ದು ಬೆಂಗಳೂರಿನಲ್ಲಿ 55 ಶೋಗಳು, ಮಿಕ್ಕಂತೆ […]

ಶೀತ, ಕೆಮ್ಮು, ಚರ್ಮ ರೋಗದಂತಹ 16 ಔಷಧಿಗಳನ್ನು ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾರಾಟ ಮಾಡಲು ಆರೋಗ್ಯ ಸಚಿವಾಲಯ ಚಿಂತನೆ

ನವದೆಹಲಿ: ಕೆಮ್ಮು, ಶೀತ, ನೋವು ಮತ್ತು ಚರ್ಮ ರೋಗಕ್ಕೆ ಸಾಮಾನ್ಯವಾಗಿ ಬಳಸುವ ಔಷಧಿಗಳಾದ ಪ್ಯಾರೆಸಿಟಮಾಲ್, ನೇಸಲ್ ಡಿಕೊಂಜೆಸ್ಟೆಂಟ್‌ಗಳು ಮತ್ತು ಆಂಟಿಫಂಗಲ್‌ಗಳು ಶೀಘ್ರದಲ್ಲೇ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಲಭ್ಯವಾಗಲಿದೆ ಎನ್ನಲಾಗಿದೆ. ಕೇಂದ್ರವು ಅವುಗಳನ್ನು ಓವರ್ ದ ಕೌಂಟರ್ (ಒಟಿಸಿ) ವರ್ಗದ ಅಡಿಯಲ್ಲಿ ಪಟ್ಟಿ ಮಾಡಲು ಯೋಜಿಸುತ್ತಿದೆ ಎಂದು ಬಿಸಿನೆಸ್ ಸ್ಟ್ಯಾಂಡರ್ಡ್ ವರದಿ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯವು 1945 ರ ಡ್ರಗ್ಸ್ ನಿಯಮಗಳಿಗೆ ತಿದ್ದುಪಡಿಗಳನ್ನು ಸೂಚಿಸಿದ್ದು, ಈಗ ವೈದ್ಯರ ಪ್ರಿಸ್ಕ್ರಿಪ್ಷನ್ ಅಗತ್ಯವಿರುವ ಇಂತಹ 16 ಔಷಧಿಗಳಿಗೆ ವಿನಾಯಿತಿಗಳನ್ನು ಒದಗಿಸಲು […]

ಕೋವಿಡ್ 19: ಪ್ರತೀ ಬುಧವಾರದಂದು ಬೂಸ್ಟರ್ ಡೋಸ್ ಲಸಿಕಾ ಮೇಳ ಆಯೋಜನೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮೇಳವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಶಾ ಕಾರ್ಯಕರ್ತೆಯರು ಎಲ್ಲಾ ಮನೆಗಳಿಗೆ ಭೇಟಿ ನೀಡಿ, 60 ವರ್ಷ ಮೇಲ್ಪಟ್ಟವರಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವವರನ್ನು ಗುರುತಿಸಿ, ಬುಧವಾರ ನಡೆಯುವ ಲಸಿಕಾ ಮೇಳಕ್ಕೆ ಬರಲು ಪ್ರೇರೇಪಿಸಬೇಕು. ಆಸ್ಪತ್ರೆಗೆ ಬರಲು ಸಾಧ್ಯವಾಗದ ಹಾಗೂ ಹಾಸಿಗೆ ಹಿಡಿದಿರುವ 60 ವರ್ಷ ಮೇಲ್ಪಟ್ಟವರಿದ್ದಲ್ಲಿ ಅವರಿಗೆ ಮೊಬೈಲ್ ಲಸಿಕಾ ಶಿಬಿರ ವ್ಯವಸ್ಥೆ ಮಾಡಿ, ಲಸಿಕೆ ನೀಡಬೇಕು. ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮ ಕಾರ್ಯಪಡೆ ಸದಸ್ಯರ […]