ಜೂನ್ 10: ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇವರು ಜೂನ್ 10 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ, 9 ಗಂಟೆಗೆ ಕುಂಭಾಶಿಯಲ್ಲಿ ಜಿ.ಎಸ್.ಬಿ ಸೇವಾ ಟ್ರಸ್ಟ್ ನ ಭಜನಾ ಮಂದಿರ ಉದ್ಘಾಟನೆ, 10 ಕ್ಕೆ ಸಾಸ್ತಾನದಲ್ಲಿ ಬಾಳ್ಕುದ್ರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ […]

ಜಿಲ್ಲಾ ಮಟ್ಟದ ಉನ್ನತಿ ಸಂಚಲನ ಮೆಗಾ ಸ್ಕಾಲರ್ ಶಿಪ್ ಸ್ಪರ್ಧೆ: ಜಿಲ್ಲೆಯ 807 ಅಭ್ಯರ್ಥಿಗಳಿಗೆ ಸ್ಕಾಲರ್ ಶಿಪ್

ಉಡುಪಿ: ಕೌಶಲ್ಯಾಧಾರಿತ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ ಪಾಲುದಾರ ಸಂಸ್ಥೆಯಾದ ಉನ್ನತಿ ಕೆರಿಯರ್ ಅಕಾಡೆಮಿ ಹಾಗೂ ಸಂಚಲನ ಸ್ವಯಂ ಸೇವಾ ಸಂಘಟನೆಯ ಜಂಟಿ ಆಯೋಜನೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ “ಉನ್ನತಿ ಸಂಚಲನ ಮೆಗಾ ಶಿಪ್ ಸ್ಪರ್ಧೆ”ಯು ಇಂದು ಮುಕ್ತಾಯಗೊಂಡಿದ್ದು ಫಲಿತಾಂಶ ಘೋಷಿಸಲಾಗಿದೆ. ಈ ಸ್ಪರ್ಧೆಯಲ್ಲಿ ಜಿಲ್ಲೆಯ 25 ಪದವಿ ಕಾಲೇಜಿನ 1144 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದು, ಸ್ಪರ್ಧೆಯಲ್ಲಿ 807 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಬಿ ಎಫ್ ಎಸ್ ಐ ಕ್ಷೇತ್ರದ […]

ಜೂನ್ 12: ರಜತಾದ್ರಿಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯು ಜೂನ್ 12 ರಂದು ಬೆಳಗ್ಗೆ 10.30 ಕ್ಕೆ ನಗರದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ […]

ಚಿನ್ನಾಭರಣ ಹಗರಣ ಪ್ರಕರಣ: ಕೇರಳ ಕಾಂಗ್ರೆಸ್‌ ಪ್ರತಿಭಟನೆ, ಸಿಎಂ ರಾಜೀನಾಮೆಗೆ ಆಗ್ರಹ; ಪೊಲೀಸರಿಂದ ಜಲಫಿರಂಗಿ ಪ್ರಯೋಗ

ತಿರುವನಂತಪುರ: ಚಿನ್ನಾಭರಣ ಹಗರಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಸ್ವಪ್ನಾ ಸುರೇಶ್ ಆರೋಪ ಮಾಡಿದ ಬೆನ್ನಲ್ಲೇ, ಅವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಘಟಕ ಗುರುವಾರ ತಿರುವನಂತಪುರದಲ್ಲಿ ಪ್ರತಿಭಟನೆ ನಡೆಸಿದೆ. ಕೇರಳದ ರಾಜಧಾನಿಯಲ್ಲಿ ಕೇರಳ ಕಾಂಗ್ರೆಸ್ ಮಹಿಳಾ ಘಟಕ ಹಾಗೂ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಪಕ್ಷದ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಪ್ರಯೋಗಿಸಿದ್ದಾರೆ. ಚಿನ್ನ ತುಂಬಿದ […]

ಎವರೆಸ್ಟ್ ಮ್ಯಾರಥಾನ್‌ನಲ್ಲಿ ದಾಖಲೆ ನಿರ್ಮಿಸಿದ ಬೆಂಗಳೂರಿನ ಮಹಿಳೆ ಅಶ್ವಿನಿ ಭಟ್

ಬೆಂಗಳೂರು: ಬೆಂಗಳೂರಿನ 36 ವರ್ಷದ ಅಶ್ವಿನಿ ಗಣಪತಿ ಭಟ್, ಎವರೆಸ್ಟ್ ಬೇಸ್ ಕ್ಯಾಂಪ್‌ಗೆ ತನ್ನ ಚಾರಣವನ್ನು ಸ್ವತಃ ಪೂರ್ಣಗೊಳಿಸಿದ್ದು ಮಾತ್ರವಲ್ಲದೆ, ಗಮ್ಯಸ್ಥಾನಕ್ಕೆ ತಲುಪಲು 60 ಕಿ.ಮೀ ಮ್ಯಾರಥಾನ್ ಓಟವನ್ನು ಪೂರ್ಣಗೊಳಿಸಿದ್ದಾರೆ. ಒಟ್ಟು 15 ಓಟಗಾರರು ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದು, ಅಶ್ವಿನಿ 9 ನೇ ಸ್ಥಾನ ಪಡೆದಿದ್ದಾರೆ ಮತ್ತು ವಿಶ್ವಾದ್ಯಂತ ಮಹಿಳೆಯರಲ್ಲಿ ನಾಲ್ಕನೇ ಅತ್ಯುತ್ತಮ ದಾಖಲೆಯನ್ನು ಮೇ 29 ರಂದು ಸ್ಥಾಪಿಸಿದ್ದಾರೆ. “ಈ ವರ್ಷ ಮ್ಯಾರಥಾನ್‌ನಲ್ಲಿ ಓಡಿದ ಏಕೈಕ ಮಹಿಳೆ ನಾನು. ಇದು ನಾನು ಬಯಸಿದ ಫಲಿತಾಂಶವಾಗಿರಲಿಲ್ಲ, ಆದರೆ […]