ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮಕ್ಕಳ ಪೋಷಕರೇ ಕಾರಣೀಭೂತರು: ಡಾ. ಯೋಗೀಶ್ ಆಚಾರ್ಯ

ಸಕಾಲದಲ್ಲಿ ಪೌಷ್ಠಿಕಾಂಶ ಆಹಾರ ಸೇವನೆ, ವಯಸ್ಸಿಗೆ ತಕ್ಕಂತೆ ನಿದ್ದೆ, ವಿರೋಧಾಭಾಸ ಮಾತುಗಳ ಬಗ್ಗೆ ಎಚ್ಚರಿಕೆ, ಪ್ರತಿದಿನ ಮನೆಯ ಮಕ್ಕಳೊಂದಿಗೆ ಇರಲು ನಿರ್ದಿಷ್ಠ ಸಮಯ ನಿಗದಿಪಡಿಸುವುದು, ಸಮಾಜದ ಇತರರೊಂದಿಗೆ ಸಕಾರಾತ್ಮಕ ವರ್ತನೆ, ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸುವಾಗ ಯಾವುದೇ ಕಾರಣಕ್ಕೂ ಪಲಾಯನವಾದವಾಗದಂತೆ ನೋಡಿಕೊಳ್ಳುವುದು ಇವೇ ಮೊದಲಾದ ಉದಾತ್ತ ನಡವಳಿಕೆಗಳು ಹೆತ್ತವರಲ್ಲಿದ್ದು ಇದು ತಮ್ಮ ಮಕ್ಕಳಲ್ಲೂ ಅನುಕರಣೆಯಾಗುವಂತೆ ನೋಡಿಕೊಂಡಲ್ಲಿ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಉಡುಪಿ ಕುತ್ಪಾಡಿಯ ಎಸ್ ಡಿ ಎಮ್ ಕಾಲೇಜಿನ ಸ್ವಸ್ಥವೃತ್ತ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. […]
ರಾಹುಲ್ ಗಾಂಧಿಗೆ ಇಡಿ ಸಮನ್ಸ್: ಮೋದಿ ಸರ್ಕಾರದಿಂದ ಇಡಿ ದುರ್ಬಳಕೆಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಇಡಿ ಪ್ರಶ್ನಿಸುವ ಮುನ್ನವೇ ಕೇಂದ್ರ ಸರ್ಕಾರದ ಇಡಿ ದುರ್ಬಳಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಜಮ್ಮು ಮತ್ತು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಇಂದು ರಾಹುಲ್ ಗಾಂಧಿ ವಿಚಾರಣೆಗಾಗಿ ಇಡಿ ಕಚೇರಿಗೆ ತೆರಳುವ ಸಾಧ್ಯತೆಯಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡಾ ರಾಹುಲ್ ಜೊತೆ ಇಡಿ ಕಚೇರಿಗೆ ಹೋಗಲಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಸತ್ಯ ಕಾ ಸಂಗ್ರಾಮ್’ ಮುಂದುವರೆಯಲಿದೆ ಎಂದು […]
ಬುಡಕಟ್ಟು ಜನರ ಸರ್ವಾಂಗೀಣ ಅಭಿವೃದ್ಧಿಗೆ ಮೋದಿ ಸರ್ಕಾರ ಕಟಿಬದ್ಧ: ವಿ. ಸುನಿಲ್ ಕುಮಾರ್

ಕಾರ್ಕಳ: ಪ್ರಧಾನಿ ನರೇಂದ್ರ ಮೋದಿ ಸರಕಾರದ 8ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ, ಕಾರ್ಕಳ ಬಿಜೆಪಿ ಎಸ್.ಟಿ.ಮೋರ್ಚಾ ವತಿಯಿಂದ ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಸಹಭಾಗಿತ್ವದಲ್ಲಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮ ಆರೋಗ್ಯ ತಪಾಸಣಾ ಶಿಬಿರವು ಮುದ್ರಾಡಿ ಗ್ರಾಪಂ ವ್ಯಾಪ್ತಿಯ ಕಬ್ಬಿನಾಲೆ ಮೇಲ್ಮಠ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ. ಸುನಿಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ […]
ಬದಲಾದ ಸನ್ನಿವೇಶದಲ್ಲಿ ವಿದ್ಯಾರ್ಥಿಗಳ ಮನಸ್ಥಿತಿಗೆ ಅನುಗುಣವಾಗಿ ಶಿಕ್ಷಕರು ಮತ್ತು ಹೆತ್ತವರು ಬದಲಾಗಬೇಕು- ಡಾ. ನಿಕೇತನ

ಉದ್ಯಾವರ: ಇಂದಿನ ಆಧುನಿಕ ಕಾಲದಲ್ಲಿ ಮಕ್ಕಳ ಮನಸ್ಥಿತಿ ಬದಲಾಗಿದೆ. ಅದರಲ್ಲೂ ಕೋವಿಡ್ – 19 ರಿಂದಾಗಿ ಮಕ್ಕಳು ತಂತ್ರಜ್ಞಾನಕ್ಕೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಜಗತ್ತೇ ಒಂದು ಹಳ್ಳಿಯಾಗಿರುವ ಜಾಗತೀಕರಣದ ಸಂದರ್ಭದಲ್ಲಿ ಮಕ್ಕಳ ಮನಸ್ಥಿತಿಯು ಅದಕ್ಕೆ ಅನುಗುಣವಾಗಿ ಬೆಳೆಯುತ್ತಿದೆ. ಈ ಸನ್ನಿವೇಶದಲ್ಲಿ ಶಿಕ್ಷಕರು ಮತ್ತು ಹೆತ್ತವರು ಕೂಡಾ ತಮ್ಮ ಮನೋಭಾವವನ್ನು ನವೀಕರಿಸಿಕೊಳ್ಳ ಬೇಕಾಗಿದೆ. ಇಲ್ಲವಾದಲ್ಲಿ ಮಕ್ಕಳ ಮನಸ್ಥಿತಿಯೊಂದಿಗೆ ಶಿಕ್ಷಕರ ಮನಸ್ಥಿತಿ ಘರ್ಷಿಸುವ ಹಂತ ತಲುಪಿದರೆ ಇದು ಮಕ್ಕಳ ಮನಸ್ಥಿತಿಯ ಮೇಲೆ ಋಣಾತ್ಮಕ ಪರಿಣಾಮ ಬೀರಿ ಅವರ ಶಿಕ್ಷಣ ಕುಂಠಿತವಾಗುವ ಅಪಾಯವಿದೆ […]
ವಿದ್ಯಾರ್ಥಿಗಳು ಬರೀ ವಿದ್ಯಾವಂತರಾದರೆ ಸಾಲದು, ಜ್ಞಾನವಂತರೂ ಆಗಬೇಕು – ಆಲ್ವಿನ್ ಆಂದ್ರಾದೆ

ಉದ್ಯಾವರ : ಓದುವುದು ಕೇವಲ ಪಠ್ಯ ಪುಸ್ತಕಗಳಿಗೆ ಮಾತ್ರ ಸೀಮಿತವಾಗಿರದೇ ಇತರ ಪುಸ್ತಕಗಳನ್ನು ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಪಠ್ಯ ಪುಸ್ತಕಗಳು ವಿದ್ಯಾರ್ಥಿಗಳನ್ನು ವಿದ್ಯಾವಂತರನ್ನಾಗಿಸಿದರೆ, ಇತರ ಪುಸ್ತಕಗಳು ಜ್ಞಾನವಂತರನ್ನಾಗಿಸುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾವಂತರಾಗುವ ಜೊತೆಗೆ ಜ್ಞಾನವಂತರೂ ಆಗಬೇಕಾದ ಅನಿವಾರ್ಯತೆ ವಿದ್ಯಾರ್ಥಿಗಳಿಗಿದೆ. ಪಠ್ಯ ಪುಸ್ತಕದ ಜೊತೆಗೆ ಇತರ ಪುಸ್ತಕಗಳನ್ನು ಓದುವುದರಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಸಾಧ್ಯ ಎಂದು ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಲ್ವಿನ್ ಆಂದ್ರಾದೆ ಹೇಳಿದರು. ಭಾನುವಾರದಂದು ಸೇವಾ ಮತ್ತು ಸಾಂಸ್ಕೃತಿಕ […]