ಕಲ್ಲಿನಿಂದ ಹಲ್ಲೆ ನಡೆಸಿದ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ಹಲ್ಲೆ ನಡೆಸಿದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2015 ನವೆಂಬರ್ 29 ರಂದು ಸಂಜೆ 7 ಗಂಟೆ ಸುಮಾರಿಗೆ ಕಿದಿಯೂರು ಗ್ರಾಮದ ನಿವಾಸಿ ಶಿವಕುಮಾರ್ ಅಲಿಯಾಸ್ ಸಂತು ಎಂಬಾತನು ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಕರಾವಳಿ ಜಂಕ್ಷನ್ ಬಳಿ ಇರುವ ಟೆಂಪೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರಿಗೆ ಕಲ್ಲಿನಿಂದ ಹಲ್ಲೆ ನಡೆಸಿದ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ […]

ಆದಿಉಡುಪಿಯಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಾಯ, ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣ ಬೆಂಕಿಗಾಹುತಿ

ಆದಿಉಡುಪಿ: ಮೂಡುಬೆಟ್ಟುವಿನ ಗೋಪಾಲ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಕಿಟಕಿಯ ಗಾಜುಗಳು ಒಡೆದಿದ್ದು, ಅಡುಗೆ ಕೋಣೆಯ ಪಾತ್ರೆ, ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ‌. ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಕೋಣೆಗೆ ವ್ಯಾಪಿಸಿದೆ. ಅವಘಡ ಸಂಭವಿಸುತ್ತಿದ್ದಂತೆ ಮನೆಯೊಳಗಿದ್ದವರು ಹೊರಗೆ ಓಡಿ ಬಂದಿದ್ದಾರೆ. ಈ ಪೈಕಿ ಸಾವಿತ್ರಿ ಹಾಗೂ ಇನ್ನೊಬ್ಬರಿಗೆ ಗಾಯವಾಗಿದೆ ಎಂದು […]

ರೈತರಿಂದಲೇ ಬೆಳೆ ಸಮೀಕ್ಷೆ ನಡೆಸಲು ಖಾರಿಫ್ ಫಾರ್ಮರ್ ಕ್ರಾಪ್ ಸರ್ವೆ ಆ್ಯಪ್‌ ಅಭಿವೃದ್ದಿ

  ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ಧಿ ಪಡಿಸಲಾಗಿರುತ್ತದೆ. ರೈತರು ಗೂಗಲ್ ಪ್ಲೇಸ್ಟೋರ್‌ನಿಂದ Kharif Farmer Crop Survey – 2022-23 ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಂಡು ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸಿ ಆಧಾರ್‌ನ ಮಾಹಿತಿಗಳನ್ನು ಭರ್ತಿ ಮಾಡಿ, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿದಾಗ ಮೊಬೈಲ್ ಸಂಖ್ಯೆಗೆ ಓ.ಟಿ.ಪಿ ಬರಲಿದೆ. ಓ.ಟಿ.ಪಿ ಯನ್ನು ದಾಖಲಿಸಿ, ಜಿಲ್ಲೆ, […]

ಜಲಶಕ್ತಿ ಅಭಿಯಾನ ಯೋಜನೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೇಂದ್ರದ ರಕ್ಷಣಾ ಸಚಿವಾಲಯದ ನಿರ್ದೇಶಕ ಪೀಯುಷ್ ರಂಜನ್

ಉಡುಪಿ: ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೆ ಈಗಾಗಲೇ ಕೈಗೊಂಡಿರುವ ಕ್ರಮಗಳ ಜೊತೆಗೆ ಇನ್ನಷ್ಟು ಹೆಚ್ಚಿನ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಕೇಂದ್ರದ ರಕ್ಷಣಾ ಸಚಿವಾಲಯದ ನಿರ್ದೇಶಕ ಪೀಯುಷ್ ರಂಜನ್ ಹೇಳಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ, ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನ ಯೋಜನೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮಳೆ ನೀರು ಕೊಯ್ಲು, ಕೆರೆಗಳ ಅಭಿವೃದ್ಧಿ, ಚೆಕ್ ಡ್ಯಾಂ ನಿರ್ಮಾಣ, ಪ್ಲಾಂಟೇಶನ್, ಇಂಗು ಗುಂಡಿಗಳ ರಚನೆ, ಜಲ ಮೂಲಗಳ ಸಂರಕ್ಷಣೆ […]

ಕೋವಿಡ್ ಎದುರಿಸಲು ಸರ್ವ ಸನ್ನದ್ಧರಾಗಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಲ್ಲಿ, ಅದನ್ನು ಎದುರಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿ ಸರ್ವ ಸನ್ನದ್ದರಾಗಿರಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ, ಜಿಲ್ಲೆಯಲ್ಲಿನ ಕೋವಿಡ್-19, ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳ ಪ್ರಸಕ್ತ ಪರಿಸ್ಥಿತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಂಡು ಬಂದರೆ ಆ ಪ್ರದೇಶದಲ್ಲಿ ಹೆಚ್ಚಿನ ಟೆಸ್ಟಿಂಗ್ ಮತ್ತು ಸೋಂಕಿತರ ಸಂಪರ್ಕಿತರನ್ನು ಪತ್ತೆ […]