ಹನುಮಂತನಗರ ಸರಕಾರಿ ಪ್ರೌಢಶಾಲೆಯಲ್ಲಿ ವನ ಮಹೋತ್ಸವಾಚರಣೆ

ಉಡುಪಿ: ಉಡುಪಿ ತಾಲೂಕು ಹನುಮಂತನಗರ ಸರಕಾರಿ ಪ್ರೌಢಶಾಲೆಯಲ್ಲಿ ವನ ಮಹೋತ್ಸವ ಹಾಗೂ ಬೀಜದುಂಡೆ ಬಿತ್ತನೆ ಕಾರ್ಯಕ್ರಮ ನಡೆಯಿತು. ಶಾಲಾ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಉಡುಪಿ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್, ಶಾಲಾ ಮುಖ್ಯ ಶಿಕ್ಷಕಿ ಮುಷರತ್ ಜಹಾನ್, ಉಪ ವಲಯ ಅರಣ್ಯಾಧಿಕಾರಿ ಗುರುರಾಜ್ ಕಾವ್ವಾಡಿ, ಅರಣ್ಯ ರಕ್ಷಕ ಕೇಶವ ಪೂಜಾರಿ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವಿಠಲದಾಸ್ ಬನ್ನಂಜೆ, ಅಧ್ಯಾಪಕರು, ಶಾಲಾ ಮಕ್ಕಳು, ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು […]

ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಂಬಾಕು ವಿರೋಧಿ ದಿನಾಚರಣೆ

ಉಡುಪಿ: ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಇತ್ತೀಚೆಗೆ ತಂಬಾಕು ವಿರೋಧಿ ದಿನಾಚರಣೆ ನಡೆಯಿತು. ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ತಂಬಾಕು ಸೇವಿಸುವವರ ಜೊತೆಯಲ್ಲಿ ಅವರ ಸಮೀಪವರ್ತಿಗಳೂ ಕೂಡ ಆರೋಗ್ಯ ಸಮಸ್ಯೆಯನ್ನು ಅನುಭವಿಸುತ್ತಾರೆ. ಆದುದರಿಂದ ನಾವೆಲ್ಲರೂ ತಂಬಾಕು ಸೇವನೆಯ ವಿರುದ್ದ ಎಚ್ಚರಿಕೆಯನ್ನು ಮೂಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ವಿದ್ಯಾರ್ಥಿನಿ ನಂದಿನಿ ವಿಷಯದ ಕುರಿತಾಗಿ ಮಾತನಾಡಿದಳು. ಶಿಕ್ಷಕಿ ಶ್ರೀಮತಿ ಜ್ಯೋತಿ ಪ್ರತಿಜ್ಞಾವಿಧಿ ಬೋಧಿಸಿದರು. ಸಭಾ ಕಾರ್ಯಕ್ರಮದ ನಂತರ ಬೀದಿ ಜಾಥಾ ನಡೆಯಿತು.

ಹಿಂದೂ ಶಾಲಾ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷೆಯಾಗಿ ಡಾ.ತ್ರಿವೇಣಿ ವೇಣುಗೋಪಾಲ್ ಪುನರಾಯ್ಕೆ

ಉದ್ಯಾವರ : 162 ವರ್ಷದ ಹಿರಿಯ ಶಿಕ್ಷಣ ಸಂಸ್ಥೆ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಮಹಾಸಭೆಯು ಇತ್ತೀಚಿಗೆ ಜರುಗಿ 2022- 2023 ಸಾಲಿಗೆ ಅಧ್ಯಕ್ಷರಾಗಿ ಡಾ. ತ್ರಿವೇಣಿ ವೇಣುಗೋಪಾಲ್ ಪುನರಾಯ್ಕೆಗೊಂಡರು. ಉಪಾಧ್ಯಕ್ಷರಾಗಿ ಶ್ರೀಮತಿ ರಾಜೀವಿ ಉಮೇಶ್ ಕರ್ಕೇರ, ಕಾರ್ಯದರ್ಶಿಗಳಾಗಿ ಶ್ರೀಮತಿ ಅಶ್ವಿನಿ ದೇವೇಂದ್ರ , ಜತೆಕಾರ್ಯದರ್ಶಿಗಳಾಗಿ ಶ್ರೀಮತಿ ಜ್ಯೋತಿ ರವೀಂದ್ರ ಶೆಟ್ಟಿ ,ಕೋಶಾಧಿಕಾರಿಗಳಾಗಿ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಆಯ್ಕೆಗೊಂಡರು. ಈ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

ಜೂನ್ 16 ಮತ್ತು 17 ರಂದು ಸಿ.ಇ.ಟಿ. ಪರೀಕ್ಷೆ: ಸಂಬಂಧಿಸಿದ ಕ್ಷೇತ್ರಗಳಲ್ಲಿ ನಿಷೇಧಾಜ್ಞೆ ಜಾರಿ

ಉಡುಪಿ: ಪ್ರಸಕ್ತ ಸಾಲಿನ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ)ಯು ಜೂನ್ 16 ಮತ್ತು 17 ರಂದು ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ದಿನಗಳಂದು ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, […]

ನಯಂಪಳ್ಳಿ 4 ನೇ ಅಡ್ಡರಸ್ತೆಗೆ ಶ್ರೀ ನಾರಾಯಣ ಗುರು ಮಾರ್ಗ ಎಂದು ನಾಮಕರಣ: ಆಕ್ಷೇಪಣೆ, ಸಲಹೆ ಆಹ್ವಾನ

ಉಡುಪಿ: ನಗರದ ಸಂತೆಕಟ್ಟೆ ಬಿಲ್ಲವರ ಸೇವಾ ಸಂಘ ಇವರು ನಯಂಪಳ್ಳಿ 4 ನೇ ಅಡ್ಡರಸ್ತೆಗೆ ಶ್ರೀ ನಾರಾಯಣ ಗುರು ಮಾರ್ಗ ಎಂದು ನಾಮಕರಣ ಮಾಡಲಿದ್ದು, ಈ ಕುರಿತು ಆಕ್ಷೇಪಣೆ ಹಾಗೂ ಸಲಹೆಗಳಿದ್ದಲ್ಲಿ ಸಾರ್ವಜನಿಕರು 30 ದಿನಗಳ ಒಳಗೆ ನಗರಸಭೆ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ತಿಳಿಸಿದೆ.