ಜೂನ್ 20 ರಿಂದ 24: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ
ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಜೂನ್ 20 ರಂದು ಬೈಂದೂರು ಪ್ರವಾಸಿ ಮಂದಿರ, ಜೂನ್ 21 ರಂದು ಕುಂದಾಪುರ ಪ್ರವಾಸಿ ಮಂದಿರ, ಜೂನ್ 22 ರಂದು ಕಾರ್ಕಳ ಪ್ರವಾಸಿ ಮಂದಿರ, ಜೂನ್ 23 ರಂದು ಹೆಬ್ರಿ ಪ್ರವಾಸಿ ಮಂದಿರ, ಜೂನ್ 24 ರಂದು ಕಾಪು ಪುರಸಭೆ ಕಚೇರಿ […]
ಜೂ.25 ರಂದು ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಆಯೋಜನೆ
ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ ಜೂನ್ 25 ರಂದು ಇ-ಲೋಕ ಅದಾಲತ್/ ಮೆಗಾ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಮೆಗಾ ಲೋಕ್ ಅದಾಲತ್ ಮೂಲಕ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ. ಅದಾಲತ್‌ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ […]
ರಾಜ್ಯ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್: ಪ್ರಥಮ ಸ್ಥಾನ ಗಳಿಸಿದ ಕುಮಾರಿ ಶೃತಿ ಎಸ್. ಅಂಚನ್
ನಿಟ್ಟೆ: ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಅಂಗ ಸಂಸ್ಥೆಯಾದ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಶೃತಿ ಎಸ್. ಅಂಚನ್, ಮೈಸೂರಿನಲ್ಲಿ ಜೂ. 10 ರಿಂದ 12 ರ ವರೆಗೆ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ ನ 63 ಕೆಜಿ ಒಳಗಿನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.
ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಸರಣಿ ಕಾರ್ಯಕ್ರಮ
ಮಂಗಳೂರು: ಸಣ್ಣ ಅವಕಾಶದಿಂದ ಆಗಸದಷ್ಟು ಸಾಧಿಸಬಹುದು, ಅವಕಾಶವನ್ನುಅರಿಯುವ ಶಕ್ತಿ ನಮ್ಮಲ್ಲಿರಬೇಕು. ಅವಕಾಶಗಳು ಒದಗಿ ಬಂದಾಗ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದುಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಮಾಹಿತಿ ಮತ್ತು ತಂತ್ರಜ್ಞಾನ ನಿರ್ದೇಶಕ ಅಂಕುಶ್‌ಎನ್. ನಾಯಕ್ ಹೇಳಿದರು. ಅಖಿಲ ಭಾರತ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ವಿವಿಧ ಮಾರ್ಗಗಳು ಮತ್ತು ತಂತ್ರಗಳ ಕುರಿತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು, ಮಂಗಳೂರು ಇವರ ಆಶ್ರಯದಲ್ಲಿ ಕೂಟಕ್ಕಳ ಸಭಾಂಗಣದಲ್ಲಿ ಹಮ್ಮಿಕೊಂಡ “ವೃತ್ತಿ ಮಾರ್ಗದರ್ಶನ ಎಜುಪಾತ್- 2022” ಸರಣಿ ಕಾರ್ಯಕ್ರಮವನ್ನು […]
ರಾಹುಲ್ ಗಾಂಧಿ ವಿಚಾರಣೆ, ಪಕ್ಷದ ನಾಯಕರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಉಡುಪಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ವಿಚಾರಣೆ ಹಾಗೂ ಪಕ್ಷದ ನಾಯಕರುಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜೂನ್ 17 ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಕಂಟ್ರಿ ಇನ್ ಹೋಟೆಲ್ ಬಳಿ ಇರುವ ಸರ್ಕಲ್ ನಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ಜಿಲ್ಲೆಯ ಪಕ್ಷದ ನಾಯಕರುಗಳು, ಬ್ಲಾಕ್ ಅಧ್ಯಕ್ಷರು, ಮುಂಚೂಣಿ […]