ಯುಜಿಸಿ-ನೆಟ್, ಕೆ-ಸೆಟ್ ಪರೀಕ್ಷೆಗಳ ತರಬೇತಿ ಶಿಬಿರಕ್ಕೆ ಜೂನ್ 22 ರೊಳಗೆ ಹೆಸರು ನೋಂದಾಯಿಸಿ: ಕ.ರಾ.ಮು.ವಿ
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ (ಜೆ.ಆರ್.ಎಫ್), ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯು.ಜಿ.ಸಿ-ನೆಟ್) ಗೆ ಮತ್ತು ರಾಜ್ಯ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಜೂನ್ 22 ರ ಒಳಗೆ […]
ಉಡುಪಿಯಲ್ಲಿ ಎಸಿಬಿ ದಾಳಿ: ಸಣ್ಣ ನೀರಾವರಿ ಅಧಿಕಾರಿ ಹರೀಶ್ ಖಜಾನೆಯಲ್ಲಿ 1.5 ಕೆಜಿ ಚಿನ್ನ, ಮುಕ್ಕಾಲು ಕೆಜಿ ಬೆಳ್ಳಿ!
ಉಡುಪಿ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಉಪವಿಭಾಗ ಇಲಾಖೆಯ ಸಹಾಯಕ ಅಭಿಯಂತರ ಹರೀಶ್ ಅವರ ಕೊರಂಗ್ರಪಾಡಿಯ ಬೈಲೂರು ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಹರೀಶ ಖಜಾನೆಯಲ್ಲಿ 1.5 ಕೆಜಿ ಚಿನ್ನ, ಮುಕ್ಕಾಲು ಕೆಜಿ ಬೆಳ್ಳಿ ಪತ್ತೆಯಾಗಿದೆ. ಇದರ ಜೊತೆಗೆ ಇನ್ನೋವಾ, ಆಲ್ಟೋ ಕಾರುಗಳು ಹಾಗೂ 2 ದ್ವಿಚಕ್ರ ವಾಹನಗಳು ಪತ್ತೆಯಾಗಿವೆ. 4.30 ಲ.ರೂ ನಗದು ಹಾಗೂ ಹಲವಾರು ದಾಖಲೆ ಪತ್ರಗಳು ಅಧಿಕಾರಿಗಳಿಗೆ ದೊರೆತಿವೆ. ಹಾವಂಜೆ ಮತ್ತು ಪೆರ್ಡೂರಿನಲ್ಲಿ ಪತ್ನಿಯ ಹೆಸರಿನಲ್ಲಿ 5 […]
ಬಿಬಿ ಹೆಗ್ಡೆ ಕಾಲೇಜು: ಬಿ.ಸಿ.ಎ. ಪದವಿಯಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ
ಕುಂದಾಪುರ: ಜೂನ್ 12 ಭಾನುವಾರದಂದು ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಸಿ.ಎ. ಪದವಿಯಲ್ಲಿ ರ‍್ಯಾಂಕ್ ಪಡೆದ ಕಾಲೇಜಿನ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಬಿ.ಸಿ.ಎ. ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ ಸಾಧಕಿ ಕಾವ್ಯ ದೇವಾಡಿಗ ಹಾಗೂ ನಾಲ್ಕನೆ ರ‍್ಯಾಂಕ್ ಗಳಿಸಿದ ಸುಮಧುರ ಶೆಟ್ಟಿ ಇವರನ್ನು ಕರ್ನಾಟಕ ಬ್ಯಾಂಕ್ ಸಿಇಒ ಮಹಾಬಲೇಶ್ವರ್ ಎಮ್.ಎಸ್. ಸನ್ಮಾನಿಸಿದರು. ಜಿಲ್ಲಾಧಿಕಾರಿ ಕೂರ್ಮಾ ರಾವ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಐ.ಎ.ಎಸ್. ಮತ್ತು ಐ.ಪಿ.ಎಸ್. ಕ್ಷೇತ್ರದಲ್ಲಿ ಸಾಧನೆ ಮಾಡಿ ಶ್ರೇಷ್ಠ ಸಾಧಕರಾಗಿರಿ ಎಂದರು. ಕುಂದಾಪುರ ಎಜ್ಯುಕೇಶನ್ […]
ಜೂನ್ 24 ರಿಂದ ಭಾರತೀಯ ವಾಯುಸೇನೆ; ಡಿಸೆಂಬರ್ ನಲ್ಲಿ ಭೂ ಸೇನೆಗೆ ಅಗ್ನಿವೀರ್‌ಗಳ ನೇಮಕಾತಿ ಪ್ರಾರಂಭ
ನವದೆಹಲಿ: ಹೊಸದಾಗಿ ಘೋಷಿಸಲಾದ ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆಗೆ (ಐಎಎಫ್) ಮೊದಲ ನೇಮಕಾತಿ ಜೂನ್ 24 ರಂದು ಪ್ರಾರಂಭವಾಗಲಿದೆ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಶುಕ್ರವಾರ ತಿಳಿಸಿದ್ದಾರೆ. ಈ ಯೋಜನೆಯು ದೇಶದ ಯುವಕರಿಗೆ ಪ್ರಯೋಜನವನ್ನು ನೀಡುವ ಜೊತೆಗೆ ಸಶಸ್ತ್ರ ಪಡೆಗಳಿಗೆ ಸೇರುವ ಮೂಲಕ ಅವರು ದೇಶಕ್ಕೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡುತ್ತದೆ ಎಂದು ಚೌಧರಿ ಹೇಳಿದ್ದಾರೆ. ಅಗ್ನಿಪಥ್ ಯೋಜನೆಯ ವಿವರಗಳ ಕುರಿತು ಸೈನ್ಯವನ್ನು ಉದ್ದೇಶಿಸಿ ಮಾತನಾಡಲು ಅವರು ಇಂದು ಆರು ಫಾರ್ವರ್ಡ್ […]
ಸ್ವ-ಉದ್ಯೋಗಕ್ಕಾಗಿ ಕಡಿಮೆ ಬಡ್ಡಿದರದ ಸಾಲ ಸೌಲಭ್ಯ: ಅರ್ಜಿ ಆಹ್ವಾನ
ಉಡುಪಿ: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡತನ ರೇಖೆಗಿಂತ ಕೆಳಗಿರುವ ನಿವಾಸಿಗಳು ಆರ್ಥಿಕ ಅಭಿವೃದ್ಧಿ ಸಾಧಿಸುವ ಸಲುವಾಗಿ ಸರಕಾರದ ದೀನದಯಾಳ್ ಅಂತ್ಯೋದಯ-ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವ ಕುರಿತು ಸ್ವ-ಸಹಾಯ ಗುಂಪುಗಳ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಕಾರ್ಯಕ್ರಮದಡಿ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ, ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿ.ಎಂ.ಎಫ್.ಎಮ್.ಇ) ಕಾರ್ಯಕ್ರಮದಡಿ ಕಡಿಮೆ ಬಡ್ಡಿ […]