ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣಕಯಂತ್ರ ಪ್ರಯೋಗಾಲಯ ಉದ್ಘಾಟನೆ

ಕುಂದಾಪುರ: ಜೂನ್12 ರಂದು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣಕಯಂತ್ರ ಪ್ರಯೋಗಾಲಯದ ಉದ್ಘಾಟನಾ ಸಮಾರಂಭವು ಜರುಗಿತು. ಕರ್ನಾಟಕ ಬ್ಯಾಂಕ್ ನ ಸಿ.ಇ.ಒ. ಮಹಾಬಲೇಶ್ವರ್ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಷ್ಟಪಟ್ಟು ಓದಬಾರದು ಆದರೆ ಇಷ್ಟಪಟ್ಟು ಓದಬೇಕು. ಜೊತೆಗೆ ಕೆಲಸ ಕಾರ್ಯದಲ್ಲಿ ಚಾತುರ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಭಾಗವಹಿಸಿದ್ದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಹಾಗೂ ಬೈಂದೂರು ಕ್ಷೇತ್ರದ ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ […]

ಭಾರತದಿಂದ 192,000 ಕೆಜಿ ಹಸುವಿನ ಸಗಣಿ ಕುವೈತ್‌ಗೆ ರಫ್ತು: ಕನಕಪುರ ರೈಲು ನಿಲ್ದಾಣದಿಂದ ಮೊದಲ ಬ್ಯಾಚ್ ರವಾನೆ

ನವದೆಹಲಿ: ಭಾರತದಿಂದ 192,000 ಕೆಜಿ ಹಸುವಿನ ಸಗಣಿ ಕುವೈತ್‌ಗೆ ರಫ್ತಾಗುತ್ತಿದ್ದು, ಸಾವಯವ ಕೃಷಿಗಾಗಿ ಕುವೈತ್‌ಗೆ ಸಗಣಿ ಕಳುಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಜೂನ್ 15 ಬುಧವಾರದಂದು ಕನಕಪುರ ರೈಲು ನಿಲ್ದಾಣದಿಂದ ಮೊದಲ ಬ್ಯಾಚ್ ನ ಸಗಣಿ ಕುವೈತ್‌ಗೆ ಹೊರಟಿದೆ. ಕಸ್ಟಮ್ಸ್ ಇಲಾಖೆಯ ಉಸ್ತುವಾರಿಯಲ್ಲಿ ಸಗಣಿ ಪೊಟ್ಟಣ ಕಟ್ಟುವ ಕಾರ್ಯ ನಡೆಯುತ್ತಿದೆ ಎಂದು ವರದಿಯಾಗಿದೆ. ಜೈಪುರದ ಗೋಶಾಲೆಯಿಂದ ಸಗಣಿ ಕಳುಹಿಸಲಾಗುತ್ತಿದ್ದು, ಕುವೈತ್ ನ ಖಾಸಗಿ ಕಂಪನಿಯೊಂದಕ್ಕೆ ಸಗಣಿಯನ್ನು ರಫ್ತು ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಉಭಯ ದೇಶಗಳ ನಡುವೆ ಈಗಾಗಲೇ […]

ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ: ಪಕ್ಷದಿಂದ ಮಾಹಿತಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಸ್ತುತ ಕೋವಿಡ್ ನಂತರದ ಇತರ ರೋಗಲಕ್ಷಣಗಳ ಜೊತೆಗೆ ಅವರ ಕೆಳ ಶ್ವಾಸೇಂದ್ರಿಯ ಪ್ರದೇಶದಲ್ಲಿ ಪತ್ತೆಯಾದ ಶಿಲೀಂಧ್ರಗಳ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯನ್ನು ನಿಕಟವಾಗಿ ಗಮನಿಸಲಾಗುತ್ತಿದೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಶಾಲೆಗಳಲ್ಲಿ ಕೋವಿಡ್ ಪ್ರಕರಣ: 10 ಕ್ಕಿಂತ ಹೆಚ್ಚು ಮಕ್ಕಳಲ್ಲಿ ಸೋಂಕು ಕಂಡುಬಂದಲ್ಲಿ ಶಾಲೆಗೆ 2-3 ದಿನ ರಜ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಕೋವಿಡ್‌ ಸೋಂಕು ಕಂಡುಬಂದಲ್ಲಿ ಆ ವಿದ್ಯಾರ್ಥಿಗಳಿಗೆ ಮಾತ್ರ ರಜೆ ನೀಡಬೇಕು. ಒಂದು ವೇಳೆ 10ಕ್ಕಿಂತ ಹೆಚ್ಚು ಮಕ್ಕಳಲ್ಲಿ ಸೋಂಕು ಕಂಡುಬಂದರೆ ತಕ್ಷಣ ಇಡೀ ಶಾಲೆಗೆ ಮುಂದಿನ 2-3 ದಿನ ರಜೆ ಘೋಷಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದೆ. ಶಾಲಾ ವಿದ್ಯಾರ್ಥಿಗಳಲ್ಲಿ ಕೋವಿಡ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಮಾರ್ಗಸೂಚಿ ರೂಪಿಸಿ ಸುತ್ತೋಲೆ ಹೊರಡಿಸಿರುವ ಇಲಾಖೆಯು, ಪ್ರತಿ ಶಾಲೆಯಲ್ಲೂ ಇವುಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಜಿಲ್ಲಾ ಉಪನಿರ್ದೇಶಕರು […]

ಅಗ್ನಿಪಥ್ ಯೋಜನೆ: ಈ ವರ್ಷಕ್ಕೆ ಗರಿಷ್ಠ ವಯಸ್ಸಿನ ಮಿತಿ 23 ಕ್ಕೆ ಏರಿಕೆ

ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ಸೇನೆಯ ಸೇವೆಗಳಿಗೆ ಯಾವುದೇ ನೇಮಕಾತಿ ನಡೆದಿಲ್ಲವಾದ್ದರಿಂದ ಈ ವರ್ಷ ಯೋಜನೆಯ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಎರಡು ವರ್ಷಗಳ ಸಡಿಲಿಕೆಯನ್ನು ಕೇಂದ್ರ ರಕ್ಷಣಾ ಸಚಿವಾಲಯವು ಘೋಷಿಸಿದ್ದು, ಈಗ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸನ್ನು 21 ರಿಂದ 23 ಕ್ಕೆ ಏರಿಸಲಾಗಿದೆ. ನೇಮಕಾತಿ ಸ್ಥಗಿತಗೊಂಡಿದ್ದಾಗ, 2020 ರಲ್ಲಿ 21 ವರ್ಷ ವಯಸ್ಸು ಪೂರ್ತಿಗೊಳಿಸಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಈ ವರ್ಷಕ್ಕೆ ಮಾತ್ರ ಅರ್ಹರಾಗಲು ಅವಕಾಶ ನೀಡಲಾಗುತ್ತದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ. ಮಂಗಳವಾರ ಘೋಷಿಸಲಾದ ಮೂಲ […]