ಜೂ. 21: ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಪರ್ಯಾಯ ಕೃಷ್ಣಾಪುರ ಮಠ, ಶ್ರೀ ಕೃಷ್ಣ ಮಠ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಉಡುಪಿ, ಜಿಲ್ಲೆಯ ಯೋಗಸಂಸ್ಥೆಗಳು, ಸಂಘ-ಸಂಸ್ಥೆಗಳು ಹಾಗೂ ಯೋಗಾಸಕ್ತರು ಇವರ ಸಹಯೋಗದಲ್ಲಿ ಜೂನ್ 21 ರಂದು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಬೆಳಗ್ಗೆ […]

ಮಂಗಳೂರು: ಕುಳಾಯಿ ಫೌಂಡೇಶನ್ ನಿಂದ ಬಡ ಮಕ್ಕಳ ದತ್ತು ಸ್ವೀಕಾರ

ಮಂಗಳೂರು: ಸ್ತ್ರೀ ಸಬಲೀಕರಣ, ಬಡಮಕ್ಕಳ ಶಿಕ್ಷಣ ಹಾಗೂ ಸರಕಾರಿ ಶಾಲೆಗಳ ಅಭಿವೃದ್ದಿಯ ಧ್ಯೇಯವನ್ನಿಟ್ಟುಕೊಂಡು ಕುಳಾಯಿ ಫೌಂಡೇಶನ್ ಅನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ಸುಮಾರು 250 ವಿದ್ಯಾರ್ಥಿಗಳ ಸಂಪೂರ್ಣ ವಿದ್ಯಾಭ್ಯಾಸದ ಖರ್ಚು ವೆಚ್ಚ ನಿಭಾಯಿಸುವ ಜೊತೆಗೆ ಅವರನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ದತ್ತು ಪಡೆಯುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಫೌಂಡೇಶನಿನ ಸಂಸ್ಥಾಪಕಿ ಪ್ರತಿಭಾ ಕುಳಾಯಿ ಹೇಳಿದರು. ಗುರುವಾರ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ […]

ಮಣಿಪಾಲ: ಡಿವೈಡರಿಗೆ ಸ್ಕೂಟರ್ ಡಿಕ್ಕಿ; ಯುವತಿ ಸಾವು

ಮಣಿಪಾಲ: ಸ್ಕೂಟರ್ ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರೆ ಮೃತಪಟ್ಟು, ಸಹಸವಾರೆ ಗಾಯಗೊಂಡ ಘಟನೆ ಗುರುವಾರ ಮಣಿಪಾಲ ಟೆಂಪೋ ಸ್ಟ್ಯಾಂಡ್ ಬಳಿ ನಡೆದಿದೆ. ಮೃತಳನ್ನು ಹಿಂದುಜಾ ಎಂದು ಗುರುತಿಸಲಾಗಿದೆ. ವಿದ್ಯಾರತ್ನ ನಗರ ಕೀರ್ತಿ ಸಾಗರ ಅಪಾರ್ಟಮೆಂಟ್ ನ ನಿವಾಸಿ 25 ವರ್ಷದ ಎಂ. ವರ್ಷಿಣಿ ಗಾಯಗೊಂಡಿದ್ದಾರೆ. ವರ್ಷಿಣಿ ಅವರು ಸ್ನೇಹಿತೆ ಹಿಂದುಜಾ ಅವರ ವೆಸ್ಪ ಸ್ಕೂಟರ್ ನಲ್ಲಿ ಹಿಂಬದಿ ಸವಾರೆಯಾಗಿ ಮಣಿಪಾಲ ಟೈಗರ್ ಸರ್ಕಲ್ ನಿಂದ ಸಿಂಡಿಕೇಟ್ ಸರ್ಕಲ್ ಕಡೆಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. […]