ಸಾಮಾಜಿಕ ಜಾಲತಾಣದಲ್ಲಿ ಯಶ್ಪಾಲ್ ಸುವರ್ಣಗೆ ಕೊಲೆ ಬೆದರಿಕೆ ಪ್ರಕರಣ: ಆರೋಪಿ ಮಹಮ್ಮದ್ ಶಫಿ ಬಂಧನ
ಬಿಜೆಪಿ ನಾಯಕ ಯಶ್ಪಾಲ್ ಸುವರ್ಣ ಅವರಿಗೆ ಮಾರಿಗುಡಿ ಪೇಜ್ ಎಂಬ ಇನ್ಸ್ ಟಾ ಗ್ರಾಮ್ ಖಾತೆಯಲ್ಲಿ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಬಜ್ಪೆ ನಿವಾಸಿ ಮಹಮ್ಮದ್ ಶಫಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ್ದು, […]
ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ಅಗ್ನಿವೀರರಿಗೆ ಆದ್ಯತೆ ನೀಡಲು ಸರಕಾರ ಚಿಂತನೆ
ಬೆಂಗಳೂರು: ಅಗ್ನಿಪಥ್ ಯೋಜನೆಯಡಿ ಅಲ್ಪಾವಧಿ ಒಪ್ಪಂದದಡಿಯಲ್ಲಿ ಸೇನೆ, ನೌಕಾಪಡೆ ಮತ್ತು ವಾಯುಸೇನೆಯಲ್ಲಿ ನೇಮಕಗೊಂಡು ಹಿಂತಿರುಗುವ ಅಗ್ನಿವೀರ್ ಯೋಧರಿಗೆ ರಾಜ್ಯ ಪೋಲೀಸ್ ಇಲಾಖೆ ನೇಮಕಾತಿಯಲ್ಲಿ ಆದ್ಯತೆ ನೀಡಲು ರಾಜ್ಯ ಸರ್ಕಾರ ಯೋಜಿಸಿದೆ ಎಂದು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಹೇಳಿದ್ದಾರೆ. ದೇಶದ ಕೆಲವು ಭಾಗಗಳಲ್ಲಿ ಅಗ್ನಿಪಥ್ ಕುರಿತಾಗಿ ಹಿಂಸಾತ್ಮಕ ಪ್ರತಿಭಟನೆಯನ್ನು ಕೈಗೊಳ್ಳುವಂತೆ ಮಿಲಿಟರಿ ಸೇವಾ ಆಕಾಂಕ್ಷಿಗಳನ್ನು ಪ್ರಚೋದಿಸುವ ಹಿಂದೆ ಯಾರಿದ್ದಾರೆ ಎಂಬುದನ್ನು ಕೇಂದ್ರ ಮತ್ತು ರಾಜ್ಯಗಳು ಪರಿಶೀಲಿಸಬೇಕು. ಭವಿಷ್ಯದಲ್ಲಿ ಏನಾದರೂ ಸಂಭವಿಸಬಹುದು ಎಂಬ ಭಯವನ್ನು ವ್ಯಕ್ತಪಡಿಸುವವರು […]
ದ್ವಿತೀಯ ಪಿಯುಸಿ ಫಲಿತಾಂಶ: 100% ಫಲಿತಾಂಶ ಸಾಧಿಸಿದ ಕ್ರಿಯೇಟಿವ್ ಕಾಲೇಜು
ಕಾರ್ಕಳ: ಹಿರ್ಗಾನದಲ್ಲಿರುವ ಕ್ರಿಯೇಟಿವ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ರಿಶೆಲ್ ಜೆಸ್ಸಿಕಾ ಸಲ್ಡಾನ ಮತ್ತು ರಿಧಿ ಎಸ್. ಕುಂಟಾಡಿ 591 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 8 ನೇ ಸ್ಥಾನ ಗಳಿಸಿದ್ದರೆ, ಸಹನಾ ಕಾಟೇನ ಹಳ್ಳಿ 591 ಅಂಕದೊಂದಿಗೆ 9 ನೇ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದ ಅಶ್ವಿತಾ 590 ಅಂಕ ಪಡೆದು 7 ನೇ ಸ್ಥಾನ ಪಡೆದಿದ್ದರೆ, ಅನಘ್ ಜಿ ಗೌಡ 589 […]
ಜೂನ್ 20: ಮಣಿಪಾಲ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಯೋಜನೆ ಉದ್ಘಾಟನೆ
ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ತಾಂತ್ರಿಕ ಕೇಂದ್ರವನ್ನಾಗಿ ಉನ್ನತೀಕರಿಸಲಾಗಿರುವ ಉದ್ಯೋಗ ಯೋಜನೆಯ ಉದ್ಘಾಟನಾ ಸಮಾರಂಭವು ಜೂನ್ 20 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಮಣಿಪಾಲ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಆನ್‌ಲೈನ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ […]
ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೆಗಾ ಕರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮ
ಕುಂದಾಪುರ : ಸಿ.ಎ, ಸಿ.ಎಸ್ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳು ಸಾಕಷ್ಟು ಪೂರ್ವ ಸಿದ್ದತೆ ನಡೆಸಬೇಕು. ನಿರಂತರ ಪರಿಶ್ರಮ ಮತ್ತು ಸಾಧಿಸುವ ತುಡಿತವಿದ್ದರೆ ಖಂಡಿತವಾಗಿಯೂ ಸಿ.ಎ, ಸಿ.ಎಸ್ ಕನಸನ್ನು ನನಸಾಗಿಸಿಕೊಳ್ಳಲು ಸಾಧ್ಯ ಎಂದು ಐ.ಸಿ.ಎ.ಐ. ಸೆಂಟ್ರಲ್ ಕೌನ್ಸಿಲ್ ಮೆಂಬರ್ ಸಿ.ಎ ಕೋತಾ ಎಸ್. ಶ್ರೀನಿವಾಸ್ ಹೇಳಿದರು. ಅವರು ಜೂನ್ 8 ರಂದು ಐ.ಸಿ.ಎ.ಐ. ಉಡುಪಿ ಶಾಖೆಯ ಎಸ್.ಐ.ಆರ್.ಸಿ. ಹಾಗೂ ಕಾಲೇಜಿನ ವಾಣಿಜ್ಯ ವಿಭಾಗವು ಆಯೋಜಿಸಿದ್ದ ಮೆಗಾ ಕರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಸೇನಾನಿ […]