ವಿಟಿಯು ಮಂಗಳೂರು ಝೋನ್ ಮಹಿಳೆಯರ ತ್ರೋಬಾಲ್ ಪಂದ್ಯಾವಳಿ: ನಿಟ್ಟೆ ತಂಡ ದ್ವಿತೀಯ

ನಿಟ್ಟೆ: ಇತ್ತೀಚೆಗೆ ಮಂಗಳೂರಿನ ಸಂತ ಜೋಸೆಫ್ ತಾಂತ್ರಿಕ ಕಾಲೇಜಿನಲ್ಲಿ ನಡೆದ ವಿಟಿಯು ಮಂಗಳೂರು ಝೋನ್ ಮಹಿಳೆಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿದೆ ಎಂದು ಸಂಸ್ಥೆ ತಿಳಿಸಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಯಥಾಪ್ರಕಾರ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಉತ್ತೀರ್ಣ ಪ್ರಮಾಣ ಬಾಲಕಿಯರದ್ದು ಶೇ.68.72 ಆಗಿದ್ದರೆ, ಶೇ.55.22 ಬಾಲಕರು ಉತ್ತೀರ್ಣರಾಗಿದ್ದಾರೆ. ಅನುತ್ತೀರ್ಣರಾದವರಿಗೆ ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ದ್ವಿತೀಯ ಪಿಯು ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌‌ನಲ್ಲಿ http://karresults.nic.In ನೋಡಬಹುದು.

ಹೈಟೆಕ್ ಶೈಲಿಯ ಸರ್ಕಾರಿ ಗೋಶಾಲೆಗಳ ನಿರ್ಮಾಣ ಕಾರ್ಯವನ್ನು ಶೀಘ್ರ ಪ್ರಾರಂಭಿಸಿ: ಜಿಲ್ಲಾಧಿಕಾರಿ

ಉಡುಪಿ: ರಾಜ್ಯಕ್ಕೇ ಮಾದರಿಯಾಗುವ ಸರ್ಕಾರಿ ಗೋಶಾಲೆಯನ್ನು ಜನ ಸಹಭಾಗಿತ್ವದಲ್ಲಿ ನಿರ್ಮಿಸಿ, ಗೋವುಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವ ಗೋಶಾಲೆಯ ಕಾಮಗಾರಿ ಕಾರ್ಯಗಳನ್ನು ಶೀಘ್ರ ಆರಂಭಿಸಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್ ನಲ್ಲಿ ನಡೆದ, ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಆಯವ್ಯಯದಲ್ಲಿ ಸರ್ಕಾರವು ಗೋಶಾಲೆಯನ್ನು ಪ್ರಾರಂಭಿಸಲು ತೀರ್ಮಾನಿಸಿದ್ದು, ಸಾಕಷ್ಟು ಅನುದಾನವನ್ನು ನೀಡಿದೆ. ಇದಕ್ಕೆ ಪೂರಕವಾಗಿ ಜಿಲ್ಲಾಡಳಿತ ಅಗತ್ಯವಿರುವ ಭೂಮಿಯನ್ನು ಸಹ […]

ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

ಉಡುಪಿ: ಹಲಸು ಬೆಳೆಗಾರರು ಗ್ರಾಹಕರಿಗೆ ನೇರವಾಗಿ ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಪಡೆಯಲು ಹಲಸು ಮೇಳ ಕಾರ್ಯಕ್ರಮವು ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರ ಎಸ್. ನಾಯಕ್ ಹೇಳಿದರು. ಅವರು ಇಂದು ದೊಡ್ಡಣ ಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದದಲ್ಲಿ ನಡೆದ ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು. ರೈತರು ತಾವು ಬೆಳದಂತಹ ಹಲಸನ್ನು ಸಗಟು ಮಾರಾಟಗಾರರಿಗೆ ಅಲ್ಪ ಮೊತ್ತಕ್ಕೆ ಮಾರಾಟ ಮಾಡಿ […]

ಮಣಿಪಾಲದಲ್ಲಿ ಗಾಂಜಾ ಸೇವನೆ: ಕುಕ್ಕಿಕಟ್ಟೆಯ ಯುವಕ ಪೊಲೀಸ್ ವಶಕ್ಕೆ

ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಯುವಕನೋರ್ವನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಣಿಪಾಲ ವಿದ್ಯಾರತ್ನ ನಗರದಲ್ಲಿ ನಡೆದಿದೆ. ಕುಕ್ಕಿಕಟ್ಟೆಯ 24 ವರ್ಷದ ನಿಹಾತ್‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಜೂ.11ರಂದು ವಿದ್ಯಾರತ್ನ ನಗರದ ಸಾರ್ವಜನಿಕ‌ ಸ್ಥಳದಲ್ಲಿ ಅಮಲು ಪದಾರ್ಥ ಸೇವಿಸಿದಂತೆ ಕಂಡುಬಂದಿದ್ದು, ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಜೂ.17 ರಂದು ವೈದ್ಯರು  ನೀಡಿರುವ ವರದಿಯಲ್ಲಿ ನಿಹಾತ್ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಸಂಬಂಧ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.