2024 ರೊಳಗೆ 67956 ಕಿ.ಮೀ. ಉದ್ದದ ರೈಲು ಮಾರ್ಗ ವಿದ್ಯುತ್ತೀಕರಣ ಯೋಜನೆ: ಶೋಭಾ ಕರಂದ್ಲಾಜೆ
ಉಡುಪಿ: ಕೊಂಕಣ ರೈಲ್ವೆಯು ಕರಾವಳಿಯ ಜೀವನಾಡಿಯಾಗಿದ್ದು, ಕರಾವಳಿಯನ್ನು ಉತ್ತರ ಭಾರತದೊಂದಿಗೆ ಜೋಡಿಸುವ ಮಾರ್ಗವಾಗಿದೆ. ಪರಿಸರದ ಹಲವು ಅಡೆತಡೆಗಳನ್ನು ಎದುರಿಸಿ ಆರಂಭಗೊಂಡ ಈ ರೈಲ್ವೆ ಮಾರ್ಗವನ್ನು ಪ್ರಸ್ತುತ ವಿದ್ಯುತ್ತೀಕರಣಗೊಳಿಸಿರುವುದರಿಂದ ವಾರ್ಷಿಕವಾಗಿ 300 ಕೋಟಿ ರೂ. ಉಳಿತಾಯವಾಗಲಿದೆ. ದೇಶದಲ್ಲಿ 2024 ರೊಳಗೆ 67956 ಕಿ.ಮೀ. ರೈಲು ಮಾರ್ಗವನ್ನು ವಿದ್ಯುತ್ತೀಕರಣಗೊಳಿಸುವ ಯೋಜನೆಯಿದ್ದು, ಈಗಾಗಲೇ 45881 ಕಿ.ಮೀ. ಯೋಜನೆ ಪೂರ್ಣವಾಗಿದ್ದು, ಇದಕ್ಕಾಗಿ 13500 ಕೋಟಿ ರೂ. ವೆಚ್ಚವಾಗಿದೆ. ಇನ್ನು 2 ವರ್ಷದಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳ್ಳಲಿದೆ. ಎಂದು ಕೇಂದ್ರ ಕೃಷಿ ಮತ್ತು ರೈತ […]
ನಿಟ್ಟೆ: ರೈತ ಉತ್ಪಾದಕ ಸಂಸ್ಥೆಯ ವ್ಯಾಪಾರ ಮಳಿಗೆ ಆರಂಭ
ನಿಟ್ಟೆ: ಕಾರ್ಕಳ ಪಡುಬಿದ್ರೆ ಮುಖ್ಯರಸ್ತೆಯ ಹಾಲೆಕಟ್ಟೆ ಕಲ್ಯಾದ ಸುರಕ್ಷ ಸಂಕೀರ್ಣದಲ್ಲಿ ನಿಟ್ಟೆ ರೈತ ಉತ್ಪಾದಕ ಸಂಸ್ಥೆಯ ವ್ಯಾಪಾರ ಮಳಿಗೆಯು ಜೂ.17 ರಂದು ಆರಂಭವಾಯಿತು. ನಿಟ್ಟೆ ಆಸುಪಾಸಿನ ಎಲ್ಲಾ ರೈತರ ಸಮೂಹ ಇದಾಗಿದ್ದು, ಕೃಷಿಗೆ ಬೇಕಾದ ಎಲ್ಲಾ ಸಾಮಾಗ್ರಿಗಳು ಹಾಗೂ ಸೇವಾ ಸೌಲಭ್ಯಗಳು ಇಲ್ಲಿ ಲಭ್ಯವಿರುತ್ತದೆ. ಕಾರ್ಯಕ್ರಮದಲ್ಲಿ ನಿಟ್ಟೆ ರೈತ ಉತ್ಪಾದಕ ಸಂಸ್ಥೆಯ ಚೇರ್ ಮ್ಯಾನ್ ಅಶೋಕ್ ಅಡ್ಯಂತಾಯ, ನಿಟ್ಟೆ ಸಂಸ್ಥೆಯ ಅಟಲ್ ಇಂಕ್ಯೂಬೇಶನ್ ಸೆಂಟರ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎ.ಪಿ. ಆಚಾರ್ಯ, ಇಂಕ್ಯೂಬೇಶನ್ ಮ್ಯಾನೇಜರ್ ಪುನೀತ್ […]
ಉದ್ಯಮಗಳಿಗಾಗಿ ಆನ್ ಲೈನ್ ಮೂಲಕ ಇ-ಪ್ರಮಾಣ ಪತ್ರ ಪಡೆದುಕೊಳ್ಳಲು ಉದ್ಯಮ ನೋಂದಣಿ ಸಪ್ತಾಹ ಆಯೋಜನೆ
ಉಡುಪಿ: ಉತ್ಪಾದನೆ ಮತ್ತು ಸೇವಾ ಚಟುವಟಿಕೆಗಳಲ್ಲಿ ತೊಡಗಿರುವ ಉದ್ಯಮಗಳು ಕೇಂದ್ರ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಮಂತ್ರಾಲಯದ ಉದ್ಯಮ ನೋಂದಣಿ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿದ್ದು, ಆನ್ಲೈನ್ ಮೂಲಕ ಇ-ಪ್ರಮಾಣ ಪತ್ರವನ್ನು www.udyamregistration.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಈಗಾಗಲೇ ಕೈಗಾರಿಕೆ ಇಲಾಖೆಯಿಂದ ಖಾಯಂ ನೊಂದಣಿ ಪ್ರಮಾಣ ಪತ್ರ ಅಥವಾ ಐ.ಇ.ಎಮ್ ಪಾರ್ಟ್-2 ಅಥವಾ ಉದ್ಯೋಗ್ ಆಧಾರ್ ಮೆಮೋರೆಂಡಮ್ (ಯು.ಎ.ಎಮ್) ಪ್ರಮಾಣ ಪತ್ರ ಪಡೆದಿರುವ ಘಟಕಗಳು ಸಹ ಈ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ. ಜಿಲ್ಲೆಯ ಎಲ್ಲಾ […]
ಮಣಿಪಾಲ್ ಅಕಾಡೆಮಿಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನಲ್ಲಿ ಪ್ರವೇಶಾತಿ
ಮಣಿಪಾಲ: ಮಣಿಪಾಲ್ ಅಕಾಡೆಮಿಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್) ನಲ್ಲಿ ಮೂರು ರೀತಿಯ ವಿಭಾಗಗಳಿಗೆ ಪ್ರವೇಶವನ್ನು ಘೋಷಿಸಲಾಗಿದೆ. ಪರಿಸರ ವಿಜ್ಞಾನದ ಸೌಂದರ್ಯಶಾಸ್ತ್ರದಲ್ಲಿ ಎಂಎ, ಕಲೆ ಮತ್ತು ಶಾಂತಿ ಅಧ್ಯಯನದಲ್ಲಿ ಎಂಎ ಮತ್ತು ಸೌಂದರ್ಯಶಾಸ್ತ್ರ ಮತ್ತು ಶಾಂತಿ ಅಧ್ಯಯನದಲ್ಲಿ ಬಿಎ. ತರಗತಿಗಳಿಗೆ ಪ್ರವೇಶಾತಿ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರೊ ವರದೇಶ್ ಹಿರೇಗಂಗೆ, ನಿರ್ದೇಶಕರು, ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ದೂರವಾಣಿ […]
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಜೆ. ಪಿ. ನಡ್ಡಾಗೆ ಸನ್ಮಾನ
ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರಿಗೆ ಬೆಳ್ಳಿಯ ದೋಣಿಯ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಸನ್ಮಾನ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ […]