ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಎನ್‌ಡಿಎ ಅಭ್ಯರ್ಥಿ
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ವಿಪಕ್ಷಗಳು ಮಂಗಳವಾರ ಅಭ್ಯರ್ಥಿಯನ್ನು ಘೋಷಿಸಿದೆ. ಒಡಿಶಾದ ಬುಡಕಟ್ಟು ನಾಯಕಿ, ಝಾರ್ಖಂಡ್‌ನ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಕಣಕ್ಕಿಳಿಸುವುದಾಗಿ ಘೋಷಿಸಿದ್ದು, ಬಿಜೆಪಿಯ ಮಾಜಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾರನ್ನು ವಿಪಕ್ಷಗಳು ಕಣಕ್ಕಿಳಿಸಿವೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸಂಸದೀಯ ಪಕ್ಷವು ಮಂಗಳವಾರ ಸಭೆ ನಡೆಸಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ. ಸಂಸತ್ ಭವನದಲ್ಲಿ ಎನ್‌ಸಿಪಿ ನಾಯಕ ಶರದ್ ಪವಾರ್ ನೇತೃತ್ವದಲ್ಲಿ […]
ಯೋಗ ಭಾರತದ ಪ್ರಾಚೀನ ಪರಂಪರೆಯು ವಿಶ್ವಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆ: ಮಟ್ಟಾರು ರತ್ನಾಕರ ಹೆಗ್ಡೆ
ಉಡುಪಿ: ಇಂದಿನ ಯಾಂತ್ರಿಕ ಬದುಕಿನಲ್ಲಿ ದೇಹಕ್ಕೆ ಸೂಕ್ತ ವ್ಯಾಯಾಮ ದೊರೆಯದೆ ಜನರು ಅನೇಕ ರೋಗಗಳಿಂದ ಬಳಲುತ್ತಿದ್ದು ದೈನಂದಿನ ಬದುಕಿನಲ್ಲಿ ಪ್ರತಿದಿನ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಯಾಗಲಿದೆ. ಯೋಗ ಭಾರತದ ಪ್ರಾಚೀನ ಪರಂಪರೆಯು ವಿಶ್ವಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು. ಅವರು ಮಂಗಳವಾರ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ […]
ರಾಷ್ಟ್ರೀಯ ಮುಕ್ತ ಮಾಸ್ಟರ್ಸ್ ಅಥ್ಲೆಟಿಕ್ಸ್: 100 ಮೀಟರ್ ರೇಸನ್ನು 45.40 ಸೆಕೆಂಡುಗಳಲ್ಲಿ ಓಡಿ ದಾಖಲೆ ನಿರ್ಮಿಸಿದ 105 ವರ್ಷದ ಸೂಪರ್ ಗ್ರ್ಯಾನಿ!!
ವಡೋದರಾ: ರಾಷ್ಟ್ರೀಯ ಓಪನ್ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ 105 ವರ್ಷದ ಸೂಪರ್ ಗ್ರ್ಯಾನಿ(ಅಜ್ಜಿ) 45.40 ಸೆಕೆಂಡುಗಳಲ್ಲಿ 100 ಮೀಟರ್ ಓಟವನ್ನು ಪೂರ್ಣಗೊಳಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಇದು ಈ ಚಾಂಪಿಯನ್‌ಶಿಪ್‌ನ ಉದ್ಘಾಟನಾ ಆವೃತ್ತಿಯಾಗಿದ್ದು, ಹರಿಯಾಣ ದಾದ್ರಿ ಜಿಲ್ಲೆಯ ರಾಮ್ ಬಾಯಿ ಎನ್ನುವ 105 ವರ್ಷ ವಯಸ್ಸಿನ ಅಜ್ಜಿಯೊಬ್ಬರು ಯಾರೂ ಊಹಿಸಲಾಗದ ದಾಖಲೆಯನ್ನು ನಿರ್ಮಿಸಿ ಸೂಪರ್ ಗ್ರ್ಯಾನಿ ಆಗಿ ಹೊರಹೊಮ್ಮಿದ್ದಾರೆ. ಒಂದು ದಾಖಲೆಯಿಂದ ತೃಪ್ತರಾಗದ ಸೂಪರ್ ಅಜ್ಜಿ ವಿದೇಶದಲ್ಲಿ ಸ್ಪರ್ಧಿಸುವ ಆಸೆ ಇದೆ ಎಂದು ಹೇಳಿಕೊಂಡಿದ್ದಾರೆ. “ಇದು ತುಂಬಾ ಸಂತೋಷ […]
ಚಿತ್ರ ನಟ ದಿಗಂತ್ ಕತ್ತಿಗೆ ಬಲವಾದ ಏಟು: ಗೋವಾ ಸಮುದ್ರ ತೀರದಲ್ಲಿ ಸಮ್ಮರ್ ಸಾಲ್ಟ್ ಜಂಪ್ ಮಾಡಲು ಹೋಗಿ ಎಡವಟ್ಟು
ಗೋವಾ: ಕುಟುಂಬದ ಜೊತೆ ಗೋವಾ ಪ್ರವಾಸಕ್ಕೆ ತೆರಳಿದ್ದ ಚಿತ್ರ ನಟ ದಿಗಂತ್ ಸಮುದ್ರ ದಡದಲ್ಲಿ ಸಮ್ಮರ್ ಸಾಲ್ಟ್ ಜಂಪ್/ಬ್ಯಾಕ್ ಫ್ಲಿಪ್ ಸ್ಟಂಟ್ ಮಾಡುವ ಹೊತ್ತಿಗೆ ಏಟು ಮಾಡಿಕೊಂಡಿದ್ದು ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ ಎನ್ನಲಾಗಿದೆ. ಗೋವಾದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ನಟನನ್ನು ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ.
ಈಶಾನ್ಯ ಫ್ರಾಂಟಿಯರ್ ರೈಲ್ವೆ ನೇಮಕಾತಿ 2022: ಅಪ್ರೆಂಟಿಸ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕ
ನವದೆಹಲಿ: ನಾರ್ತ್ ಈಸ್ಟ್(ಈಶಾನ್ಯ) ಫ್ರಾಂಟಿಯರ್ ರೈಲ್ವೇಯಲ್ಲಿ ಸಾವಿರಾರು ಅಪ್ರೆಂಟಿಸ್ ಹುದ್ದೆಗಳಿಗಾಗಿ ರೈಲ್ವೆ ಇಲಾಖೆಯು ಅಧಿಸೂಚನೆಯನ್ನು ಹೊರಡಿಸಿದೆ. ಹುದ್ದೆಗೆ ಅರ್ಹರಾಗಿರುವ ಅಭ್ಯರ್ಥಿಗಳು ಈಶಾನ್ಯ ಫ್ರಾಂಟಿಯರ್ ರೈಲ್ವೆನ ಅಧಿಕೃತ ವೆಬ್ ಸೈಟ್ nfr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿಗೆ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ಈ ನೇಮಕಾತಿಯ ಮೂಲಕ 5636 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30. ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು: ಈ ರೈಲ್ವೇ ನೇಮಕಾತಿಗೆ […]