ಸ್ವಚ್ಛತಾ ಕರ್ಮಚಾರಿಗಳ ಸೌಲಭ್ಯ ಮತ್ತು ಯೋಜನೆಗಳ ಸಂಪೂರ್ಣ ಅನುಷ್ಠಾನಕ್ಕೆ ಒತ್ತು ನೀಡಿ: ಜಿಲ್ಲಾಧಿಕಾರಿ

ಉಡುಪಿ: ಸಫಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ದಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮ್ಯಾನ್ಯವಲ್ ಸ್ಕ್ಯಾವೆಂಜರ್ ಪದ್ದತಿಯನ್ನು ಸಂಪೂರ್ಣವಾಗಿ ನಿಷೇಧಿಸಿ, ಕಾಯಿದೆ ಹಾಗೂ ನಿಯಮಗಳನ್ನು ಜಾರಿಗೆ ತಂದು ಈ ಪದ್ದತಿಯನ್ನು ತೊಲಗಿಸಿ, ಒಂದೊಮ್ಮೆ ಕಾಯಿದೆಯನ್ನು ಉಲ್ಲಂಘಿಸಿದ್ದು ಕಂಡುಬಂದಲ್ಲಿ ಅಂತಹವರ ವಿರುದ್ದ ಕಾನೂನಿನಡಿ ಕ್ರಮ […]

ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜನೆ

ಉಡುಪಿ: ಶ್ರೇಷ್ಠವಾದ ರಕ್ತದಾನದಿಂದ ಆಪತ್ತಿನಲ್ಲಿರುವವರ ಜೀವ ರಕ್ಷಣೆ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ. ಹೆಚ್ ಹೇಳಿದರು. ಅವರು ಇಂದು ಚಿಟ್ಪಾಡಿಯ ಸೈಂಟ್ ಮೇರಿಸ್ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ(ರಿ.), ಅಪ್ಪು ಅಭಿಮಾನಿಗಳ ಬಳಗ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಲಯನ್ಸ್ […]

ಗಡಿಯಲ್ಲಿ ತಂಟೆ ಎಬ್ಬಿಸುವ ನೆರೆ ರಾಷ್ಟ್ರಗಳಿಗೆ ಸೂಕ್ತ ಉತ್ತರ ನೀಡಲು ಅಗ್ನಿಪಥ್ ಯೋಜನೆ ಜಾರಿ: ಡಾ. ಭರತ್ ವೈ ಶೆಟ್ಟಿ

ಮಂಗಳೂರು: ಗಡಿಯಲ್ಲಿ ನಿತ್ಯವೂ ತಂಟೆ ಎಬ್ಬಿಸುವ ನೆರೆ ರಾಷ್ಟ್ರಗಳಾದ ಚೀನಾ ಮತ್ತು ಪಾಕಿಸ್ತಾನಗಳಿಗೆ ಸೂಕ್ತ ಉತ್ತರ ನೀಡಲು ಸೇನೆಯಲ್ಲಿ ಮಹತ್ವದ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದು ಅಸಂಖ್ಯ ಯುವಕರಲ್ಲಿ ಶಿಸ್ತು, ಸಂಯಮ, ಉತ್ತಮ ಭವಿಷ್ಯ ಮತ್ತು ಉದ್ಯೋಗಾವಕಾಶಕ್ಕೆ ಪೂರಕವಾಗಲಿದೆ. ಪಕ್ಷದ ಕಾರ್ಯಕರ್ತರು ಯುವ ಸಮುದಾಯಕ್ಕೆ ಸರಿಯಾದ ಮಾಹಿತಿ ನೀಡುವ ಮೂಲಕ ಯೋಜನೆಯನ್ನು ಬೆಂಬಲಿಸುವಂತೆ ಪ್ರೇರೇಪಿಸಬೇಕು ಎಂದು ಶಾಸಕ ಡಾ ಭರತ್ ವೈ ಶೆಟ್ಟಿ ಹೇಳಿದರು. ಜನತಾ ಕಾಲನಿ ಬಿಜೆಪಿ ಶಕ್ತಿಕೇಂದ್ರ ಆಯೋಜಿಸಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, […]

ಹೆಚ್ಚುತ್ತಿರುವ ಕೋವಿಡ್ ಪ್ರಕರಣ: ಓಮಿಕ್ರಾನ್ ಉಪತಳಿ ಪ್ರಾಬಲ್ಯವನ್ನು ತೋರಿಸುತ್ತಿರುವ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ನಡೆಸಿದ ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗಳು ಓಮಿಕ್ರಾನ್ ರೂಪಾಂತರವು ರಾಜ್ಯದಲ್ಲಿ ಇನ್ನೂ ಪ್ರಾಬಲ್ಯ ಹೊಂದಿದೆ ಎನ್ನುವುದನ್ನು ತೋರಿಸುತ್ತಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಈ ನಿಟ್ಟಿನಲ್ಲಿ, ಕರ್ನಾಟಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬುಧವಾರ ಟ್ವೀಟ್ ಮಾಡಿ, ಕೋವಿಡ್-19 ರೋಗಲಕ್ಷಣಗಳನ್ನು ಹೊಂದಿರುವ ಹೆಚ್ಚಿನ ಜನರು ನೋವಲ್ ಕೊರೊನಾ ವೈರಸ್‌ನ ಓಮಿಕ್ರಾನ್ ರೂಪಾಂತರದ ಬಿಎ.2 ಉಪ-ವೇರಿಯಂಟ್‌ನಿಂದ ಸೋಂಕಿಗೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ. “ಕರ್ನಾಟಕದಲ್ಲಿ ಯಾವ ತಳಿ ಪ್ರಾಬಲ್ಯ ಹೊಂದಿದೆ? ಜಿನೋಮ್ […]

ಮಳೆಗಾಲ ಆರಂಭವಾದ ಹಿನ್ನೆಲೆ: ನಗರಸಭಾ ವ್ಯಾಪ್ತಿಯಲ್ಲಿ ರಸ್ತೆ ಅಗೆತ ನಿಷೇಧ

ಉಡುಪಿ: ಮಳೆಗಾಲ ಆರಂಭವಾದ ಹಿನ್ನಲೆ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಕ್ಟೋಬರ್ 15 ರವರೆಗೆ ಟೆಲಿಫೋನ್, ವಿದ್ಯುತ್ ಕೇಬಲ್, ಕುಡಿಯುವ ನೀರು, ಒಳ ಚರಂಡಿ ಕೊಳವೆ ಹಾಗೂ ಮತ್ತಿತರ ಕಾಮಗಾರಿಗಳಿಗೆ ರಸ್ತೆ ಅಗೆಯುವುದನ್ನು ನಿಷೇಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.