ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಹಿನ್ನೆಲೆ: ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿ

ಉಡುಪಿ: ಜೂನ್ 27 ರಿಂದ ಜುಲೈ 4 ರವರೆಗೆ ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ 144(1) ರಂತೆ […]

ಶಿವಸೇನೆ ಶಾಸಕರು ಬಯಸಿದರೆ ರಾಜೀನಾಮೆ ನೀಡಲು ಸಿದ್ಧ: ಉದ್ಧವ್ ಠಾಕ್ರೆ

ಮುಂಬಯಿ: ಶಿವಸೇನೆ ಶಾಸಕರು ಬಯಸಿದರೆ ರಾಜೀನಾಮೆ ನೀಡಲು ಸಿದ್ಧ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆಯ ನಡುವೆ, ಪಕ್ಷದ ಶಾಸಕರು ಒತ್ತಾಯಿಸಿದರೆ ಶಿವಸೇನಾ ಮುಖ್ಯಸ್ಥ ಸ್ಥಾನದಿಂದ ಮತ್ತು ಸಿಎಂ ಸ್ಥಾನದಿಂದ ಕೆಳಗಿಳಿಯಲು ಸಿದ್ಧ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ಹೇಳಿದ್ದಾರೆ. “ಶಾಸಕರಿಗೆ ರಾಜೀನಾಮೆ ನೀಡಲು ನಾನು ಸಿದ್ಧನಿದ್ದೇನೆ, ಅವರು ಇಲ್ಲಿಗೆ ಬಂದು ನನ್ನ ರಾಜೀನಾಮೆಯನ್ನು ರಾಜಭವನಕ್ಕೆ ತೆಗೆದುಕೊಂಡು ಹೋಗಬೇಕು. ನಾನು ಶಿವಸೇನೆ ಪಕ್ಷದ ಮುಖ್ಯಸ್ಥನ ಸ್ಥಾನವನ್ನು ಸಹ ಬಿಡಲು […]