ಬನ್ನಂಜೆ ಡಾ.ವಿ.ಎಸ್ ಆಚಾರ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಾರಿಗೆ ಕಾರ್ಯಾಚರಣೆ ಪ್ರಾರಂಭ
ಉಡುಪಿ: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ. ವಿ. ಎಸ್. ಆಚಾರ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಉಡುಪಿ ನಗರ, ಜಿಲ್ಲಾ, ಅಂತರ್ ಜಿಲ್ಲಾ ಮತ್ತು ಅಂತರ್ರಾಜ್ಯ ವ್ಯಾಪ್ತಿಯ ಸ್ಥಳಗಳಿಗೆ ನಿಗಮದ ಎಲ್ಲಾ ಸಾರಿಗೆಗಳ ಕಾರ್ಯಾಚರಣೆಯನ್ನು ಮಾಡಲಾಗುತ್ತಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಸದರಿ ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಬಸ್ ನಿಲ್ದಾಣದಲ್ಲಿ 8 ವಾಣಿಜ್ಯ ಮಳಿಗೆ, 1 ಉಪಹಾರ ಗೃಹ, 3 ರಿಟೇಲ್ ಮಳಿಗೆ, ಒಂದು ದ್ವಿಚಕ್ರ /ಕಾರ್ ಪಾರ್ಕಿಂಗ್ ವ್ಯವಸ್ಥೆ, ಮೊದಲ ಅಂತಸ್ತು ಮತ್ತು […]
ವಯನಾಡಿನಲ್ಲಿರುವ ರಾಹುಲ್ ಗಾಂಧಿ ಕಚೇರಿ ಧ್ವಂಸ: ಎಸ್ಎಫ್ಐ ಮೇಲೆ ಆರೋಪ ಹೊರಿಸಿದ ಯುವ ಕಾಂಗ್ರೆಸ್
ಕೇರಳ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಯನಾಡ್ನಲ್ಲಿರುವ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಕೆಲವು ಕಿಡಿಗೇಡಿಗಳು ಕಚೇರಿಯೊಳಗೆ ನುಗ್ಗಿ ಕಚೇರಿಯನ್ನು ಧ್ವಂಸಗೊಳಿಸುತ್ತಿರುವ ವೀಡಿಯೋ ಒಂದನ್ನು ಮಾಧ್ಯಮ ಸಂಸ್ಥೆ ಎ ಎನ್ ಐ ಹಂಚಿಕೊಂಡಿದೆ. ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿಯ ಗೋಡೆಯನ್ನು ಹತ್ತಿ ಅದನ್ನು ಧ್ವಂಸಗೊಳಿಸುತ್ತಿದ್ದಾಗ, ಗೂಂಡಾಗಳು ಎಸ್ಎಫ್ಐ ಧ್ವಜಗಳನ್ನು ಹಿಡಿದಿದ್ದರು ಎಂದು ಭಾರತೀಯ ಯುವ ಕಾಂಗ್ರೆಸ್ ಟ್ವೀಟ್ನಲ್ಲಿ ಆರೋಪಿಸಿದೆ. “ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಎಸ್ಎಫ್ಐ ಕಾರ್ಯಕರ್ತರು ಮತ್ತು ಮುಖಂಡರ ಗುಂಪು ವಯನಾಡ್ ಸಂಸದ ರಾಹುಲ್ […]
ಕಿಶೋರ್ ವೈಜ್ಞಾನಿಕ್ ಪ್ರೋತ್ಸಾಹನ್ ಯೋಜನಾ ಪರೀಕ್ಷೆ: ಜ್ಞಾನಸುಧಾ ಕಾಲೇಜಿನ 5 ವಿದ್ಯಾರ್ಥಿಗಳಿಗೆ ರ್ಯಾಂಕ್
ಕಾರ್ಕಳ: ಇಂಡಿಯನ್ ಇನ್ಟಿಟ್ಯೂಟ್ ಆಫ್ ಸಾಯನ್ಸ್ ನಡೆಸುವ 2021 ನೇ ಸಾಲಿನ ರಾಷ್ಟ್ರಮಟ್ಟದ ಕೆವಿಪಿವೈ ಪರೀಕ್ಷೆ 22 ಮೇ 2022 ರಂದು ನಡೆದಿತ್ತು. ಶುಕ್ರವಾರದಂದು ಪ್ರಕಟವಾದ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾದ ಆರ್ಯ ಪಿ ಶೆಟ್ಟಿ, ಪ್ರಜ್ವಲ್ ಪಟ್ಗಾರ್, ಅಖಿಲ್ ಯು ವಾಗ್ಲೆ, ಆರ್ಯನ್ ವಿದ್ಯಾಧರ್ ಶೆಟ್ಟಿ, ಕಾರ್ತಿಕ್ ಬ್ಯಾಕುಡ್ ಜನರಲ್ ಮೆರಿಟ್ನಲ್ಲಿ ರ್ಯಾಂಕ್ ಪಡೆದಿರುತ್ತಾರೆ. ರಾಷ್ಟ್ರಮಟ್ಟದಲ್ಲಿ ಪ್ರತಿ ವರ್ಷ ಸುಮಾರು 1 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು , ಅದರಲ್ಲಿ ಈ ಬಾರಿ 12 (SX) […]
ಭೂಕಂಪ ಹಿನ್ನೆಲೆ: ಅಫ್ಘಾನಿಸ್ತಾನದ ನಾಗರಿಕರಿಗೆ ಎರಡು ವಿಮಾನಗಳಲ್ಲಿ 27 ಟನ್ ತುರ್ತು ಪರಿಹಾರ ರವಾನಿಸಿದ ಭಾರತ
ನವದೆಹಲಿ: ಸುಮಾರು 1000 ಕ್ಕೂ ಹೆಚ್ಚು ನಾಗರಿಕರ ಪ್ರಾಣ ಕಿತ್ತುಕೊಂಡ ಭೀಕರ ಭೂಕಂಪದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದ ಜನರಿಗೆ ಎರಡು ವಿಮಾನಗಳಲ್ಲಿ 27 ಟನ್ ತುರ್ತು ಪರಿಹಾರ ನೆರವನ್ನು ಭಾರತವು ರವಾನಿಸಿದೆ. ಪರಿಹಾರ ನೆರವು ಕುಟುಂಬ ರಿಡ್ಜ್ ಟೆಂಟ್ಗಳು, ಮಲಗುವ ಚೀಲಗಳು, ಹೊದಿಕೆಗಳು ಮತ್ತು ಮಲಗುವ ಮ್ಯಾಟ್ಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಒಳಗೊಂಡಿದೆ. ಪರಿಹಾರ ಸರಕನ್ನು ಕಾಬೂಲ್ನಲ್ಲಿರುವ ಮಾನವೀಯ ವ್ಯವಹಾರಗಳ ಸಮನ್ವಯಕ್ಕಾಗಿ ವಿಶ್ವಸಂಸ್ಥೆಯ ಕಚೇರಿ ಮತ್ತು ಅಫ್ಘಾನ್ ರೆಡ್ ಕ್ರೆಸೆಂಟ್ ಸೊಸೈಟಿಗೆ ಹಸ್ತಾಂತರಿಸಲಾಗುವುದು. ವಿದೇಶಾಂಗ ವ್ಯವಹಾರಗಳ ಸಚಿವಾಲಯವು, ಭಾರತವು […]
2023 ರಲ್ಲಿ ಜಿ-20 ಶೃಂಗ ಸಭೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆಯೋಜನೆ
ಜಮ್ಮು: ವಿಶ್ವದ ಪ್ರಮುಖ ಆರ್ಥಿಕ ದೇಶಗಳ ಪ್ರಭಾವಿ ಗುಂಪಾದ ಜಿ-20 ಯ 2023 ನೇ ಸಾಲಿನ ಸಭೆಗಳನ್ನು ಜಮ್ಮು ಮತ್ತು ಕಾಶ್ಮೀರವು ಆಯೋಜಿಸಲಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಲಿರುವ ಜಿ-20 ಸಭೆಗಳ ಒಟ್ಟಾರೆ ಸಮನ್ವಯಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಸರ್ಕಾರವು ಐದು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ಸ್ಥಾಪಿಸಿದೆ. ಸೆಪ್ಟೆಂಬರ್ 2021ರಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಜಿ-20 ಸಭೆಗೆ ಭಾರತದ ಶೆರ್ಪಾ ಆಗಿ ನೇಮಿಸಲಾಯಿತು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಭಾರತವು ಡಿಸೆಂಬರ್ […]