ಮಲ್ಪೆಯಲ್ಲಿ ಸಮುದ್ರಕ್ಕೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ

ಉಡುಪಿ: ಮಲ್ಪೆ ‌ಸಮುದ್ರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದಾಗ ಅವರನ್ನು ಮಲ್ಪೆ ಬೀಚ್ ನ ಲೈಫ್ ಗಾರ್ಡ್ಸ್ ರಕ್ಷಿಸಿದ ಘಟನೆ ಇಂದು ಸಂಜೆ ನಡೆದಿದೆ. ಮುಂಬಯಿ ಮೂಲದ 45 ವರ್ಷದ ಮಹಿಳೆಯೊಬ್ಬರು 15 ವರ್ಷದ ಮಗನೊಂದಿಗೆ ಮಲ್ಪೆ ಬೀಚ್ ಗೆ ಆಗಮಿಸಿದ್ದರು. ಬೀಚ್ ನಲ್ಲಿ ಈಗ ಮಳೆಯ ಕಾರಣ ಪ್ರವಾಸಿಗರು ನೀರಿಗೆ ಇಳಿಯದಂತೆ ತಡೆ ತಂತಿ ಹಾಕಿದ್ದರೂ, ಮಹಿಳೆ ಅದನ್ನು ಲೆಕ್ಕಿಸದೆ ಎರಡು‌ ಬಾರಿ ಸಮುದ್ರಕ್ಕೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಅಲ್ಲಿನ ಲೈಫ್ ಗಾರ್ಡ್ಸ್ […]

ಜೂ.27ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 23ನೇ ನೂತನ ಪಡುಬಿದ್ರಿ ಶಾಖೆಯ ಉದ್ಘಾಟನೆ

ಪಡುಬಿದ್ರಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 23 ನೇ ನೂತನ ಪಡುಬಿದ್ರಿ ಶಾಖೆಯ ಉದ್ಘಾಟನಾ ಸಮಾರಂಭವು ಜೂ.27ರಂದು ಬೆಳಿಗ್ಗೆ 9ಗಂಟೆಗೆ ನಡೆಯಲಿದೆ. ಪಡುಬಿದ್ರಿ ಮುಖ್ಯ ರಸ್ತೆಯ ಧನ್ವಂತರಿ ಕೃಪಾ ಅಂಚನ್ ಬಿಲ್ಡಿಂಗ್ ನ ಒಂದನೇಯ ಮಹಡಿಯಲ್ಲಿ ಆರಂಭಗೊಂಡಿರುವ ನೂತನ ಶಾಖೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ […]

ಬೈಂದೂರು: ಡಾ.ಗೋವಿಂದ ಬಾಬು ಪೂಜಾರಿಯವರ ಜನ್ಮದಿನದ ಅಂಗವಾಗಿ ಮನೆ ಹಸ್ತಾಂತರ

ಬೈಂದೂರು: ಅಸಹಾಯಕ ಮನಗಳಿಗೆ ಆತ್ಮವಿಶ್ವಾಸ ತುಂಬುವ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ, ಶೆಫ್ ಟಾಕ್ ಫುಡ್ ಆಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈ ಲಿಮಿಟೆಡ್ ಸಂಸ್ಥೆಯನ್ನು ಸ್ಥಾಪಿಸಿ, ಸಾವಿರಕ್ಕೂ ಹೆಚ್ಚಿನ ಜನರಿಗೆ ಉದ್ಯೋಗವನ್ನು ಕಲ್ಪಿಸಿ, ನಿರುದ್ಯೋಗಿಗಳನ್ನು ಸ್ವಾವಲಂಬಿಗಳಾಗಿಸಿ, ಹಲವಾರು ಪ್ರತಿಭೆಗಳ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿ ಒಡೆತನದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇವರ ವತಿಯಿಂದ ಈಗಾಗಲೇ 7 ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, ಇದೀಗ 8 ನೇ ಮನೆಯ ಗೃಹಪ್ರವೇಶ ಕಾರ್ಯಕ್ರಮವನ್ನು ಜೂನ್ […]

ಚಿಕಿತ್ಸೆಗೆ ಜರ್ಮನಿಗೆ ತೆರಳುತ್ತಿರುವ ಕೆಎಲ್ ರಾಹುಲ್ ಜೊತೆ ಪ್ರಯಾಣಿಸಲಿದ್ದಾರೆ ಬಾಲಿವುಡ್ ನಟಿ ಅಥಿಯಾ ಶೆಟ್ಟಿ?

ಬಲ್ಲ ಮೂಲಗಳ ಪ್ರಕಾರ, ಚಿಕಿತ್ಸೆಗಾಗಿ ಜರ್ಮನಿಗೆ ತೆರಳುತ್ತಿರುವ ಕೆಎಲ್ ರಾಹುಲ್ ಜೊತೆ ಪ್ರೇಯಸಿ ಅಥಿಯಾ ಶೆಟ್ಟಿ ಕೂಡಾ ಪ್ರಯಾಣಿಸಲಿದ್ದಾರೆ. ಜೂನ್ 16 ರಂದು ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಚಿಕಿತ್ಸೆಗಾಗಿ ಜರ್ಮನಿಗೆ ತೆರಳುತ್ತಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಭಾರತ- ಇಂಗ್ಲೆಂಡ್ ಪ್ರವಾಸದಿಂದ ರಾಹುಲ್ ಹೊರಗುಳಿದಿದ್ದಾರೆ. ತೊಡೆಸಂದು ಗಾಯಕ್ಕೆ ಒಳಗಾದ 30 ವರ್ಷ ವಯಸ್ಸಿನ ಕ್ರಿಕೆಟಿಗ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ನಿರ್ಧರಿಸಿದ್ದಾರೆ. ಶಸ್ತ ಚಿಕಿತ್ಸೆ ಬಳಿಕ ಸುಮಾರು ಒಂದು ತಿಂಗಳ ಕಾಲ ರಾಹುಲ್ ಜರ್ಮನಿಯಲ್ಲೇ ಉಳಿಯುತ್ತಾರೆ ಆ ಸಂದರ್ಭದಲ್ಲಿ […]

ಉಪಚುನಾವಣಾ ಫಲಿತಾಂಶ: ಎಲ್ಲ ಪಕ್ಷಗಳಿಗೂ ಸ್ವಲ್ಪ ಸಿಹಿ, ಸ್ವಲ್ಪ ಕಹಿ ಅನುಭವ

ನವದೆಹಲಿ: ಮೂರು ಲೋಕಸಭಾ ಸ್ಥಾನಗಳಿಗೆ ಉತ್ತರ ಪ್ರದೇಶದ ಅಜಂಗಢ ಮತ್ತು ರಾಂಪುರ ಹಾಗೂ ಪಂಜಾಬ್‌ನ ಸಂಗ್ರೂರ್ ಮತ್ತು ವಿಧಾನಸಭಾ ಸ್ಥಾನಗಳಿಗೆ ತ್ರಿಪುರಾ, ಜಾರ್ಖಂಡ್, ಆಂಧ್ರಪ್ರದೇಶ ಮತ್ತು ದೆಹಲಿಯಲ್ಲಿ ಉಪಚುನಾವಣೆಗಳು ನಡೆದಿದ್ದವು. ಚುನಾವಣಾ ಫಲಿತಾಂಶದಲ್ಲಿ ಉತ್ತರಪ್ರದೇಶದ ರಾಮ್‌ಪುರ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಘನಶ್ಯಾಮ್ ಸಿಂಗ್ ಲೋಧಿ ಸಮಾಜವಾದಿ ಪಕ್ಷದ ಅಭ್ಯರ್ಥಿಯನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ. ದೆಹಲಿಯ ರಾಜಿಂದರ್ ನಗರ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯ ಸಾಧಿಸಿದೆ. ಏತನ್ಮಧ್ಯೆ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಟೌನ್ […]