ಬೆಂದಕಾಳೂರೆಂಬ ಹಳ್ಳಿಯನ್ನು ನಗರವನ್ನಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ: ಪ್ರಸನ್ನ ಹೆಚ್

ಉಡುಪಿ: ಮಣ್ಣಿನ ಕೋಟೆಯಿಂದ ಕಟ್ಟಿದ ಹಳ್ಳಿ ಪ್ರದೇಶವಾಗಿದ್ದ ಬೆಂದಕಾಳೂರನ್ನು ನಗರವಾಗಿ ನಿರ್ಮಿಸಿದ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರಿಂದ, ಬೆಂಗಳೂರು ನಗರ ಇಂದು ದೇಶ-ವಿದೇಶಿಗರಿಗೆ ಚಿರಪರಿಚಿತವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಕೆಂಪೇಗೌಡರು ಶೌರ್ಯ, ಸಾಹಸ, […]

ಅಂತರ್ ಇಂಜಿನಿಯರಿಂಗ್ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ನಿಟ್ಟೆ ಕಾಲೇಜಿಗೆ ಪ್ರಶಸ್ತಿಅಂತರ್ ಇಂಜಿನಿಯರಿಂಗ್ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ನಿಟ್ಟೆ ಕಾಲೇಜಿಗೆ ಪ್ರಶಸ್ತಿ

ನಿಟ್ಟೆ: ಜೂ.25 ಹಾಗೂ 26 ರಂದು ಬೆಂಗಳೂರಿನ ಜೆ.ಎಸ್.ಎಸ್ ಅಕಾಡೆಮಿ ತಾಂತ್ರಿಕ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜರುಗಿದ ಅಂತರ್ ಇಂಜಿನಿಯರಿಂಗ್ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ ಎಂದು ಕಾಲೇಜು ತಿಳಿಸಿದೆ.

ನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ ಆಚರಣೆ: ಎಸ್ ಎಂ ಕೃಷ್ಣ, ನಾರಾಯಣ ಮೂರ್ತಿ ಮತ್ತು ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಪ್ರಶಸ್ತಿ

ಬೆಂಗಳೂರು: ಸೋಮವಾರದಂದು ಮುಖ್ಯಮಂತ್ರಿ ಬಿ.ಎಸ್ ಬೊಮ್ಮಾಯಿ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ ಉತ್ಸವವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೊದಲ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಹಾಗೂ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಪ್ರಕಾಶ ಪಡುಕೋಣೆ ಅವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ […]

ನಾಡಿನ ಕಲಾಪ್ರಕಾರಗಳ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಸಹಾಯಧನ ನೀಡಲು ಸೇವಾಸಿಂಧು Sevasindhu.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ www.kannadasiri.karnataka.gov.in ಮೊ.ನಂ: […]

ಪ.ಜಾ/ಪ.ಪಂ ದ ಮಹಿಳಾ ಪದವೀಧರರಿಗೆ ಉಚಿತ ಉದ್ಯಮಶೀಲತಾ ತರಬೇತಿ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳಾ ಪದವೀಧರರು ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಬೆಂಗಳೂರಿನ ಐ.ಐ.ಎಂ ನಲ್ಲಿ ಉಚಿತ ಉದ್ಯಮಶೀಲತಾ ತರಬೇತಿಗಾಗಿ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 9482300400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.