ಕಲಿಯುವ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿಸುವವರ ವಿರುದ್ದ ಕಾನೂನು ಕ್ರಮ: ನ್ಯಾ. ಶರ್ಮಿಳಾ ಎಸ್
ಉಡುಪಿ: ಮಕ್ಕಳಿಗೆ ಬಾಲ್ಯದಲ್ಲಿ ಶಿಕ್ಷಣ ಕೊಡಿಸುವುದು ಮುಖ್ಯ ಕರ್ತವ್ಯವಾಗಿದ್ದು, ಮಕ್ಕಳಿಂದ ದುಡಿಮೆ ಮಾಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಘಟನೆಗಳು ಕಂಡುಬಂದಲ್ಲಿ ದುಡಿಸಿಕೊಳ್ಳುವ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹೇಳಿದರು. ಅವರು ಗುರುವಾರ ಮಲ್ಪೆಯ ಓಷಿಯನ್ ಫ್ರೆಶ್ ಎಕ್ಸ್ಪೋರ್ಟ್ ಸಂಸ್ಥೆಯಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ, ಜಿಲ್ಲಾ ಬಾಲಕಾರ್ಮಿಕ ಯೋಜನಾ […]
ಮಳೆ ಸಂಬಂಧಿತ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ 1077 ಅನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ
ಉಡುಪಿ: ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಯಂತೆ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮೀನುಗಾರರು ಹಾಗೂ ಪ್ರವಾಸಿಗರು ನದಿ ತೀರ ಮತ್ತು ಸಮುದ್ರಕ್ಕೆ ಇಳಿಯದಂತೆ ಎಚ್ಚರ ವಹಿಸಬೇಕು. ತಗ್ಗು ಪ್ರದೇಶ, ಕೆರೆ, ನದಿತೀರ ಹಾಗೂ ಸಮುದ್ರ ತೀರ ಪ್ರದೇಶಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗೃತಿ ವಹಿಸಬೇಕು. ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಮರಗಳ ಕೆಳಗೆ ನಿಲ್ಲದೇ […]
ಹೆಜಮಾಡಿ ವಿಠ್ಠಲ್ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ
ಉಡುಪಿ: ರಾಷ್ಟೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕರು ಹಾಗೂ ಸಮಾಜ ಸೇವಕ ವೇದಮೂರ್ತಿ ವಿಠ್ಠಲ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ ವ್ಯಕ್ತ ಪಡಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕರಾಗಿ, ಹೆಜಮಾಡಿ ಮಲ್ಯರ ಮಠ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದ ಅರ್ಚರಾಗಿ ಸೇವೆ ಸಲ್ಲಿಸಿರುವ ವೇದಮೂರ್ತಿ ವಿಠ್ಠಲ ಭಟ್ ರವರು ಜು.1ರಂದು ನಿಧನರಾದರು. ಅವಿವಾಹಿತರಾಗಿದ್ದ ಅವರಿಗೆ 89 ವರ್ಷ ವಯಸ್ಸಾಗಿತ್ತು. ಹೆಜಮಾಡಿ ಗ್ರಾಮವೂ ಸೇರಿದಂತೆ ಕಾಪು ತಾಲೂಕಿನಲ್ಲಿ ಸಂಘದ […]
ನಾಟಿ ಕೋಳಿ ಮರಿ ವಿತರಣೆ: ರೈತ ಮಹಿಳೆಯರಿಂದ ಅರ್ಜಿ ಆಹ್ವಾನ
ಉಡುಪಿ: ಪಶುಪಾಲನಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾಟಿ ಕೋಳಿ ಮರಿಗಳನ್ನು ವಿತರಿಸಲು ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಕಾರ್ಕಳ ಮತ್ತು ಹೆಬ್ರಿ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಗಲಿರುಳೆನ್ನದೆ ಮನುಕುಲದ ಒಳಿತಿಗಾಗಿ ದುಡಿಯುತ್ತಿರುವ ಎಲ್ಲ ವೈದ್ಯರಿಗೂ ಸಲಾಂ…..
“ಶರೀರೇ ಜುರ್ಜರೀ ಭೂತೇ ವ್ಯಾಧಿಗ್ರಸ್ತೇ ಕಳೇವರೆ ಔಷಧೀ ಜಾಹ್ನವೀ ತೋಯಂ, ವೈದ್ಯೋ ನಾರಾಯಣೋ ಹರಿಃ” ಎನ್ನುವ ಶ್ಲೋಕವೊಂದಿದೆ. ಮನುಷ್ಯನ ಶರೀರವು ವ್ಯಾಧಿಗ್ರಸ್ತವಾಗಿ ಸಾಯುವ ಸ್ಥಿತಿ ತಲುಪಿದಾಗ ಬದುಕಿಸುವವನು ಭಗವಂತ. ಸಾಕ್ಷಾತ್ ‘ಶ್ರೀಮನ್ನಾರಾಯಣನೇ ವೈದ್ಯ’ ಎಂದು ಉಲ್ಲೇಖಿಸುವ ಶ್ಲೋಕವಿದು. ಇವತ್ತು ಈ ಶ್ಲೋಕವನ್ನು ವೈದ್ಯರಿಗೆ ಅನ್ವರ್ಥವಾಗಿ ಬಳಸಲಾಗುತ್ತದೆ. ಹೇಗೆ ಶ್ರೀಮನ್ನಾರಾಯಣ ಸಾಯುವ ಸ್ಥಿತಿಯಲ್ಲಿರುವವರನ್ನು ಬದುಕಿಸುತ್ತಾನೋ, ಅದೇ ರೀತಿ ವೈದ್ಯರೂ ಕೂಡಾ ತಮ್ಮ ಜೀವದ ಹಂಗು ತೊರೆದು ರೋಗಿಗಳನ್ನು ಬದುಕಿಸುತ್ತಾರೆ ಎನ್ನುವ ಅರ್ಥದಲ್ಲಿ ಈ ಉಕ್ತಿ ಬಹುವಾಗಿ ಬಳಕೆಯಾಗುತ್ತದೆ. ಕೋವಿಡ್ […]