ಜಿಲ್ಲೆಯಲ್ಲಿ ಮುಂದಿನ ಎರಡು ದಿನ ರೆಡ್ ಅಲರ್ಟ್: ಜುಲೈ 8-9 ರಂದು ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಎರಡು ದಿನ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಅತ್ಯಾಧಿಕ ಮಳೆಯಾಗುವ ಸಂಭವವಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಅಂಗನವಾಡಿ ಕೇಂದ್ರ, ಪದವಿ ಮತ್ತು ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ- 8 ಮತ್ತು 9 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಆದೇಶ ಹೊರಡಿಸಿದ್ದಾರೆ. ತುರ್ತು ಸೇವೆಗೆ ಟೋಲ್ ಫ್ರೀ ನಂಬರ್ 1077 ಅಥವಾ 080-2574802 […]

ಕೋಟ: ಜುಲೈ 8 ರಂದು ಸಮಾಜ ಕಲ್ಯಾಣ ಇಲಾಖೆ ಸಚಿವರಿಂದ ಅಹವಾಲು ಸ್ವೀಕಾರ

ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜುಲೈ 8 ರಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸುಳ್ಯ: ಸಚಿವದ್ವಯರಿಂದ ಅತಿವೃಷ್ಟಿ ಪೀಡಿತ ಪ್ರದೇಶದ ಮನೆಗಳ ಪರಿಶೀಲನೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ತೋಡಿಕಾನ, ದೊಡ್ಡ ಕುಮೇರಿ, ಮತ್ತು ಕಲ್ಲುಗುಂಡಿ ಪ್ರದೇಶದ ಮನೆಗಳಿಗೆ ಮೀನುಗಾರಿಕಾ ಸಚಿವ ಎಸ್ ಅಂಗಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿ ಪ್ರದೇಶಗಳ ಸ್ಥಿತಿಗತಿ ನಿರೀಕ್ಷಿಸಿ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಜೊತೆಗಿದ್ದರು.

ಉಡುಪಿಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಉಡುಪಿ: ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿಯೊಬ್ಬರು ಗುರುವಾರದಂದು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತ್ರಿವಳಿ ಮಕ್ಕಳು ಮತ್ತು ತಾಯಿಯ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಉ.ಕ ಜಿಲ್ಲೆಯ ಅಂಕೋಲಾ ನಿವಾಸಿ ಸುನಿತಾ (27) ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ. ಡಾ.ಕವಿಷಾ ಭಟ್, ಡಾ ರಜನಿ ಕಾರಂತ್, ಡಾ ಸೂರ್ಯನಾರಾಯಣ್, ಡಾ.ಗಣಪತಿ ಹೆಗಡೆ ಹಾಗೂ ಡಾ. ಮಹಾದೇವ ಭಟ್ ಅವರನ್ನು ಒಳಗೊಂಡ ತಜ್ಞ ವೈದ್ಯರ […]

ಬಡನಿಡಿಯೂರು: ಮನೆ ಕೆಲಸಕ್ಕಿದ್ದ ಮಹಿಳೆ ನಾಪತ್ತೆ

ಉಡುಪಿ: ನಗರದ ಬಡನಿಡಿಯೂರಿನ ಮನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಸುಶೀಲ (27) ಎಂಬ ಮಹಿಳೆಯು ಜೂನ್ 30 ರಂದು ಮನೆಯಿಂದ ಹೊರ ಹೋಗಿ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕಿವಿ ಕೇಳುವುದಿಲ್ಲ ಹಾಗೂ ಮಾತನಾಡಲು ಬರುವುದಿಲ್ಲ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ:0820-2537999, ಪಿ.ಎಸ್.ಐ ಮೊ.ನಂ:9480805447, ಉಡುಪಿ ವೃತ್ತ ನಿರೀಕ್ಷಕರು ಮೊ.ನಂ:9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.