ಪೊಸ್ರಾಲು: ಜಲಾವೃತವಾದ ಮನೆ, ಗಾಢನಿದ್ದೆಯಲ್ಲಿರುವ ಸ್ಥಳೀಯ ಆಡಳಿತ

ಕಾರ್ಕಳ: ಇಲ್ಲಿನ ಮುಂಡ್ಕೂರು ಗ್ರಾಮದ ಪೊಸ್ರಾಲು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಸಂಪ ಶೆಟ್ಟಿಯವರ ಮನೆಯ ಅಂಗಳವು ನೀರಿನಿಂದ ಜಲಾವೃತವಾಗಿದೆ. ಅಕ್ಕಪಕ್ಕದ ಮನೆಯವರು ನೀರು ಹರಿದುಹೋಗುವ ತೋಡನ್ನು ಮುಚ್ಚಿರುವುದರಿಂದ ಈ ರೀತಿ ಸಮಸ್ಯೆ ಉಂಟಾಗಿದ್ದು, ಮಳೆ ನೀರು ಸರಾಗವಾಗಿ ಹರಿದು ಹೋಗದೆ ಸಂಪ ಶೆಟ್ಟಿಯವರ ಮನೆಯ ಅಂಗಳವು ಜಲಾವೃತವಾಗಿದ್ದು, ಚಿಕ್ಕ ಮಕ್ಕಳು ನೀರಿನಲ್ಲಿ ಆಟವಾಡುವಂತಾಗಿದೆ. ಸಂಬಂಧಪಟ್ಟ ಸ್ಥಳೀಯ ಆಡಳಿತ ಈ ಬಗ್ಗೆ ಗಮನಹರಿಸದೆ ಗಾಢನಿದ್ದೆಯಲ್ಲಿದೆ.

ಯುವಕರಿಗೆ ಸೇನಾ ತರಬೇತಿ ನೀಡಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಸೇನೆಗೆ ಸೇರಬಯಸುವ ರಾಜ್ಯದ ಯುವ ಜನತೆಗೆ ಪೂರ್ವಭಾವಿ ತರಬೇತಿಯನ್ನು ನೀಡಲು ಓರ್ವ ಮಾಜಿ ಸೇನಾ ಅಧಿಕಾರಿ ಹಾಗೂ ದೈಹಿಕ ಶಿಕ್ಷಣ ತರಬೇತಿ ಹೊಂದಿರುವ ಮೂರು ಮಾಜಿ ಸೈನಿಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ dydirdswrmlore@gmail.com ಅನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 15 ರಿಂದ ಆಗಸ್ಟ್ 15 ರವರೆಗೆ ಜಿಲ್ಲಾ ಕಾರ್ಮಿಕ ಅದಾಲತ್ ಕಾರ್ಯಕ್ರಮ

  ಉಡುಪಿ: ಕಾರ್ಮಿಕ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಮಿಕ ಕಾಯ್ದೆಗಳಡಿ ಹಾಗೂ ವಿವಿಧ ಮಂಡಳಿಗಳ ಮೂಲಕ ಅನುಷ್ಠಾನಗೊಳಿಸುವ ಯೋಜನೆಗಳಡಿ ಸ್ವೀಕೃತವಾಗಿರುವ, ಇತ್ಯರ್ಥವಾಗದೆ ಬಾಕಿ ಉಳಿದಿರುವ ಪ್ರಕರಣ, ಕಡತ ಹಾಗೂ ವಿವಿಧ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಜುಲೈ 15 ರಿಂದ ಆಗಸ್ಟ್ 15 ರ ವರೆಗೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿ ಹಾಗೂ ಉಡುಪಿ, ಕುಂದಾಪುರ, ಕಾರ್ಕಳ ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ಕಾರ್ಮಿಕ ಅದಾಲತ್ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಕಾರ್ಮಿಕರು, ಮಾಲೀಕರು ಹಾಗೂ […]

ಬೈಕ್, ಕಾರಿನ ಮೇಲೆ ಉರುಳಿದ ಮರ: ಕೂದಲೆಳೆ ಅಂತರದಲ್ಲಿ ಪಾರಾದ ಸವಾರರು

ಉಡುಪಿ: ನಗರದ ಬ್ರಹ್ಮಗಿರಿ ಜಂಕ್ಷನ್ ನಲ್ಲಿ ಕಾರು ಮತ್ತು ಬೈಕ್ ಮೇಲೆ ಭಾರೀ ಗಾತ್ರದ ಮರವೊಂದು ಇಂದು ಮಧ್ಯಾಹ್ನ ಉರುಳಿಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಕಾರು ಮತ್ತು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಬ್ರಹ್ಮಗಿರಿ ಅಂಬಲಪಾಡಿ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಸ್ಥಳಕ್ಕೆ ಆಗಮಿಸಿರುವ ನಗರ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.