ಗ್ರಾಮಾಭಿವೃದ್ದಿಯ ಹರಿಕಾರ ಧರ್ಮದರ್ಶಿ “ಶ್ರೀ ವೀರೇಂದ್ರ ಹೆಗ್ಗಡೆ”ಯವರಿಗೆ ರಾಜ್ಯಸಭೆ ನಾಮಾಂಕನದ ಗೌರವ
ನವೆಂಬರ್ 25, 1948 ರಂದು ಪ್ರಕೃತಿಯ ಒಡಲಲ್ಲಿ ಧರ್ಮದೇವತೆ ಶ್ರೀ ಮಂಜುನಾಥ ನೆಲೆಯಾದ ಪವಿತ್ರ ಭೂಮಿಯಲ್ಲಿ ಜನನ. ಕಡು ಕುಗ್ರಾಮವಾದ ಹಳ್ಳಿಯಲ್ಲಿ ಸೌಕರ್ಯಗಳೇ ಇಲ್ಲದಿದ್ದ ಕಾಲವದು. ಕುಡುಮ ಎಂಬ ಪುಟ್ಟ ಹಳ್ಳಿಯನ್ನು ಧರ್ಮಸ್ಥಳವಾಗಿಸಿ ದೇಶ ವಿದೇಶದ ಭಕ್ತ ಸಾಗರ ಶ್ರೀ ಕ್ಷೇತ್ರಕ್ಕೆ ಹರಿದು ಬರುವಂತೆ ಮಾಡಿದ ಕೀರ್ತಿ ಶ್ರೀಯುತ ವೀರೇಂದ್ರ ಹೆಗ್ಗಡಿಯವರಿಗಲ್ಲದೆ ಬೇರಾರಿಗೂ ಸಲ್ಲುವುದಿಲ್ಲ. ತಂದೆ ರತ್ನವರ್ಮ ಹೆಗ್ಗಡೆಯವರು ನಿಧನರಾದಾಗ ವೀರೇಂದ್ರ ಹೆಗ್ಗಡೆಯವರು ಇನ್ನೂ ಹದಿಹರೆಯದ ಹುಡುಗ. ಎಳವೆಯಲ್ಲೇ ಕ್ಷೇತ್ರದ ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತ ಇವರು […]
ಜುಲೈ 10 ರಂದು ಜಿಲ್ಲಾ ಮಲೆ ಕುಡಿಯ ಸಂಘದ ಮಹಾಸಭೆ
ಮಾಳ: ಜಿಲ್ಲಾ ಮಲೆ ಕುಡಿಯ ಸಂಘದ ಮಹಾಸಭೆಯು ಜುಲೈ 10 ರಂದು ಬೆಳಿಗ್ಗೆ 10 ಗಂಟೆಗೆ ಸಂಘದ ಅಧ್ಯಕ್ಷ ಬಾಲಗಂಗಾಧರ ಬಿ.ಗೌಡ ಇವರ ಅಧ್ಯಕ್ಷತೆಯಲ್ಲಿ, ಸಂಘದ ಕೇಂದ್ರ ಕಚೇರಿ ಪೇರಡ್ಕ ಮಲೆಕುಡಿಯ ಸಮುದಾಯ ಭವನದಲ್ಲಿ ಜರುಗಲಿದ್ದು, ಸಂಘದ ಎಲ್ಲಾ ಸದಸ್ಯರು ಸಭೆಯಲ್ಲಿ ಹಾಜರಿದ್ದು ಸಹಕರಿಸುವಂತೆ ಆಡಳಿತ ಮಂಡಳಿಯು ತಿಳಿಸಿದೆ.
ಮಂಗಳೂರು: ಅಮೆಜಾನ್ ಕಂಪನಿಯಿಂದ ಜು.12 ರಂದು ನೇರ ಸಂದರ್ಶನ
ಮಂಗಳೂರು: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ರೂ. ವೇತನವುಳ್ಳ, 100 ಡೆಲಿವರಿ ಬಾಯ್ ಹುದ್ದೆಗಳಿಗೆ ಜು.12 ರಂದು ಮಂಗಳವಾರ, ಮಂಗಳೂರಿನ ಉರ್ವಾ ಮಾರುಕಟ್ಟೆಯ 2 ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಯಾವುದೇ ವಿದ್ಯಾರ್ಹತೆಯುಳ್ಳ ಆಸಕ್ತ ಉದ್ಯೋಗಾಕಾಂಕ್ಷಿಗಳು ದ್ವಿಚಕ್ರ ವಾಹನ ಪರವಾನಿಗೆ, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಆಂಡ್ರಾಯಿಡ್ ಸ್ಮಾರ್ಟ್ಫೋ ನ್ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಮಾಹಿತಿಗಾಗಿ ಕಚೇರಿ ದೂ.ಸಂಖ್ಯೆ:0824-2453222 […]
ಸೌಹಾರ್ದಯುತ ಬಕ್ರೀದ್ ಆಚರಣೆ: ಮುಂಜಾಗ್ರತಾ ಕ್ರಮ ವಹಿಸಲು ಕಾಂಗ್ರೆಸ್ ಅಲ್ಪ ಸಂಖ್ಯಾ ಘಟಕದಿಂದ ಕಾಪು ಠಾಣೆಯಲ್ಲಿ ಮನವಿ
ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ವತಿಯಿಂದ ನಾಳೆ ಆಚರಿಸುತ್ತಿರುವ ಈದುಲ್ ಅದ್ಹಾ ಹಬ್ಬದಂದು ಕುರ್ಬಾನಿ ಮಾಡಲು, ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಲು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುಧ್ದೀನ್ ಶೇಖ್ ಇವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷ ಹಮೀದ್ ಯೂಸುಫ್, ಯೂತ್ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸ್ಯೆನ್, ಜಿಲ್ಲಾ ಕಾಂಗ್ರೆಸ್ ಮೀನುಗಾರರ […]
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ: ನವೀಕೃತ ಹವಾನಿಯಂತ್ರಿತ ಸಿಟಿ ಶಾಖೆ ಉದ್ಘಾಟನೆ
ಪಡುಬಿದ್ರಿ: ಸಹಕಾರಿ ವ್ಯವಸಾಯಿಕ ಸೊಸೈಟಿ, ಇದರ ನವೀಕೃತ ಹವಾನಿಯಂತ್ರಿತ “ಸಿಟಿ ಶಾಖೆ” ಜುಲೈ 09 ರಂದು ಪಡುಬಿದ್ರಿಯಲ್ಲಿ ಉದ್ಘಾಟನೆಗೊಂಡಿತು. ಶಾಸಕ ಕೆ. ರಘುಪತಿ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು. ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್, ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.