ಜಿಲ್ಲೆಯಲ್ಲಿ ರೆಡ್ ಅಲರ್ಟ್: ಜುಲೈ 11 ರಂದು ಶಾಲೆಗಳಿಗೆ ರಜೆ

ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯ ಮೇರೆಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 11 ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಆದೇಶ ಹೊರಡಿಸಿದ್ದಾರೆ.

ಉಡುಪಿ: ಜುಲೈ 11 ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಭಾರಿ ಮಳೆ ಕಾರಣ ಜಿಲ್ಲೆಯಲ್ಲಿ ಜುಲೈ 11 ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಬ್ರಹ್ಮಶ್ರೀ ನಾರಾಯಣಗುರು ಪಠ್ಯ ಕೈಬಿಟ್ಟ ವಿಚಾರ: ಜುಲೈ 17 ರಂದು ಬಿಲ್ಲವ ಸಮಾಜದಿಂದ ಬೃಹತ್ ಪ್ರತಿಭಟನಾ ರ‍್ಯಾಲಿ

ಉಡುಪಿ: ಜುಲೈ10 ರಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ವತಿಯಿಂದ ಬಿಲ್ಲವ ವೇದಿಕೆಯ ಹಿರಿಯ ಸಲಹೆಗಾರರ ಸಮ್ಮುಖದಲ್ಲಿ ನಡೆದ ತುರ್ತು ಸಭೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವ ಸಮಯದಲ್ಲಿ ರಾಜ್ಯ ಸರಕಾರವು 10ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಪಾಠವನ್ನು ಕೈಬಿಟ್ಟ ವಿಚಾರದ ಕುರಿತು ಸರಕಾರದ ತಾರತಮ್ಯ ನೀತಿಯ ವಿರುದ್ದ ಕೈಗೊಂಡ ನಿರ್ಣಯದ ಪ್ರಕಾರ, ರಾಜ್ಯ ಸರಕಾರ ಜುಲೈ 15 ರೊಳಗೆ ಪಠ್ಯ ಪುಸ್ತಕದಲ್ಲಿ ಯಥಾಸ್ಥಿತಿಯನ್ನು ಕಾಪಾಡಿಕೊಂಡು ಬರದಿದ್ದಲ್ಲಿ, ಜುಲೈ 17 ರಂದು […]

ಅಂಕೋಲಾದಲ್ಲಿ ಕೊಚ್ಚಿ ಹೋದ ಸೇತುವೆ, ಸಂಪಾಜೆಯಲ್ಲಿ ಶಾಲೆ ಮೇಲೆ ಗುಡ್ಡ ಕುಸಿತ

ಕೊಡಗು: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ, ಕೃತಕ ನೆರೆ, ಮನೆಗಳೌ ಜಲಾವೃತವಾಗುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮದ ಕೊಯನಾಡು ಪ್ರಾಥಮಿಕ ಶಾಲೆಯ ಹಿಂಬದಿಯಲ್ಲಿ ಗುಡ್ಡ ಕುಸಿದಿದ್ದರೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಗುಳ್ಳಾಪುರದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ ಸೇತುವೆ ಆರಂಭಿಕ ಮಳೆಗೆ ಕೊಚ್ಚಿ ಹೋಗಿದೆ. https://twitter.com/i/status/1546072884379979777 ಕೃಪೆ: ಕರ್ನಾಟಕ ರೈನ್ಸ್

ಶ್ರೀಕೃಷ್ಣ ಮಠದಲ್ಲಿ ತಪ್ತಮುದ್ರಧಾರಣೆ

ಉಡುಪಿ: ಶ್ರೀ ಕೃಷ್ಣಮಠದಲ್ಲಿ, ಹರಿ ಶಯನೀ ಏಕಾದಶಿಯಂದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಭಕ್ತಾದಿಗಳಿಗೆ ತಪ್ತ ಮುದ್ರಾಧಾರಣೆ ನಡೆಸಿದರು. ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು.